ತೆರಿಗೆ ಇಲಾಖೆಯಲ್ಲಿ ಖಾಲಿಹುದ್ದೆಗಳು 10 ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ.
ಸರ್ಕಾರಿ ನೌಕರಿಯ ಹುಡುಕಾಟದಲ್ಲಿ ಇರುವವರಿಗೆ ಇದೀಗ ಆದಾಯ ತೆರಿಗೆ ವಿಭಾಗದಲ್ಲಿ ಅವಕಾಶಗಳು ಒದಗಿಬಂದಿದೆ.
ಆದಾಯ ತೆರಿಗೆ ಇಲಾಖೆಯು ವಿವಿಧ ಹುದ್ದೆಗಳ್ಲಲಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಆದಾಯ ತೆರಿಗೆ ಇನ್ಸ್ ಪೆಕ್ಟರ್, ಟ್ಯಾಕ್ಸ್ ಅಸಿಸ್ಟೆಂಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ ಸೈಟ್ tnincomentax.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳೆಷ್ಟು?
ಆದಾಯ ತೆರಿಗೆ ಇನ್ಸ್ಪೆಕ್ಟರ್ ಹುದ್ದೆ- 28 ಹುದ್ದೆಗಳು
ಆದಾಯ ತೆರಿಗೆ ಸಹಾಯ ಹುದ್ದೆ- 28 ಹುದ್ದೆಗಳು
ಎಂಟಿಎಸ್- 16 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ- 72 ಹುದ್ದೆಗಳು
ವೇತನ ಎಷ್ಟು?
ಆದಾಯ ತೆರಿಗೆ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 9300-34800 ರೂ.ವರೆಗೆ ವೇತನವನ್ನು ನೀಡಲಾಗುತ್ತದೆ. ಹಾಗೆಯೆ ತೆರಿಗೆ ಸಹಾಯಕ ಮತ್ತು ಎಂಟಿಎಸ್ ಪೋಸ್ಟ್ ಗಳಿಗೆ ತಿಂಗಳಿಗೆ 5200 ರಿಂದ 20,200 ರೂ. ವರೆಗೆ ವೇತನ ಸಿಗಲಿದೆ.
ಆದಾಯ ತೆರಿಗೆ ಇನ್ಸ್ಪೆಕ್ಟರ್ ಹುದ್ದೆ- 18 ರಿಂದ 30 ವರ್ಷಗಳವರೆಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಆದಾಯ ತೆರಿಗೆ ಸಹಾಯ ಹುದ್ದೆಗಾಗಿ 18 ರಿಂದ 27 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಎಂಟಿಎಸ್ ಹುದ್ದೆಗೆ 18 ರಿಂದ 27 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರುವರಿ 6,2023 ಆಗಿದೆ.
ಅರ್ಹತಾ ಮಾನದಂಡ ಏನು?
ಆದಾಯ ತೆರಿಗೆ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಪದವಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ತೆರಿಗೆ ಸಹಾಯಕ ಹುದ್ದೆಗಳಿಗೆ ಪದವಿ ಮಾಡಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ .
ಮಲ್ಟಿ ಟಾಸ್ಕಿಂಗ್ ಸ್ಟ್ಯಾಫ್ಫ್ ಪೋಸ್ಟ್ ಅಥವಾ ಎಂಟಿಎಸ್ ಹುದ್ದೆಗಳಿಗೆ 10 ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಅರ್ಹತೆಗಳೊಂದಿಗೆ ಕ್ರೀಡಾ ಸಾಧನೆಯ ಪ್ರಮಾಣ ಪತ್ರಗಳನ್ನೂ ಹೊಂದಿರುವುದು ಕಡ್ಡಾಯ.