ರಾಜ್ಯ ಸರ್ಕಾರ "ಗ್ರಾಮ ಸಹಾಯಕ"ಯರಿಗೆ ಮಾಸಿಕ ಗೌರವಧನ 1,000 ರೂ ಹೆಚ್ಚಳ

ಗೌರವಧನ 1,000 ರೂ ಹೆಚ್ಚಳ :




           ಸಮಾಜದ ಏಳಿಗೆಗೆ ಮಾನವ ಅಭಿವೃದ್ಧಿ ಸೂಚ್ಯಂಕವನ್ನು ಹೆಚ್ಚಿಸುವ ಪ್ರಯತ್ನದ ಭಾಗವಾಗಿ ಶಿಕ್ಷಣ, ಆರೋಗ್ಯ, ಹಾಗೂ ಪೌಷ್ಟಿಕತೆ ವಲಯಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರು ಹಾಗೂ ಸಹಾಯಕರು ಮತ್ತು ಗ್ರಂಥಪಾಲಕರಿಗೆ ನೀಡುವ ಮಾಸಿಕ ಗೌರವಧನದಲ್ಲಿ ತಲಾ 1,000 ರೂ. ಹೆಚ್ಚಿಸಲು ನಿರ್ಧರಿಸಲಾಗಿದೆ.

ಗ್ರಾಮ ಸಹಾಯಕಯರಿಗೆ ಮಾಸಿಕ ಗೌರವಧನ 1,000 ರೂ ಹೆಚ್ಚಳ:

ಗ್ರಾಮ ಸಹಾಯಕ ಹುದ್ದೆಯನ್ನು ಜನಸೇವಕ ಎಂದು ಮರುನಾಮಕರಣ ಮಾಡಿ ಸರ್ಕಾರದ ವತಿಯಿಂದ ನೀಡುತ್ತಿರುವ ವಿವಿಧ ಸೌಲಭ್ಯಗಳನ್ನು ಸರಿಯಾಗಿ ಜನರಿಗೆ ತಲುಪುತ್ತಿದೆಯೇ ಎಂದು ಖಾತರಿಪಡಿಸುವ ಜವಾಬ್ದಾರಿ ನೀಡಿ, ಇವರಿಗೆ ನೀಡುವ ಮಾಸಿಕ ಗೌರವಧನವನ್ನು 13,000 ರೂಗಳಿಂದ 14,000 ರುಗಳಿಗೆ ಹೆಚ್ಚಿಸಿ ಸರ್ಕಾರ ಘೋಷಣೆ ಮಾಡಿದೆ. ರಾಜ್ಯ ಸರ್ಕಾರವು 1,475 ತಾಂಡೆ, ಗೊಲ್ಲರಹಟ್ಟಿ, ಕುರುಬರಹಟ್ಟಿ ಮತ್ತು ಇತರೆ ದಾಖಲೆರಹಿತ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿದೆ. 
           
          ಈ ವರ್ಷದಲ್ಲಿ ಗ್ರಾಮ ಒನ್ ಕೇಂದ್ರ ಹಾಗೂ ನಾಡಕಚೇರಿಗಳ ಮೂಲಕ 1.5 ಕೋಟಿ ಅರ್ಜಿಗಳನ್ನು ವಿಲೇ ಮಾಡಲಾಗಿದೆ. ಹಲೋ ಕಂದಾಯ ಸಚಿವರೇ ಸಹಾಯವಾಣಿ ಯೋಜನೆಯಡಿ ಒಂದು ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ 79,951 ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶ ನೀಡಲಾಗಿದೆ. 

          ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೇರು ಕೃಷಿ ಉದ್ದೇಶಕ್ಕಾಗಿ ಗುತ್ತಿಗೆಗೆ ನೀಡಲಾಗಿರುವ ಸುಮಾರು 4,292ಎಕರೆ ಜಮೀನನ್ನು ಮಾರ್ಗ ಸೂಚಿ ಮೌಲ್ಯವನ್ನು ವಿಧಿಸಿ ಕಾಯಂ ಆಗಿ ಮಂಜೂರು ಮಾಡಲು ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969 ಗೆ ತಿದ್ದುಪಡಿ ತರಲು ಕರಡು ಅಧಿಸೂಚನೆಯನ್ನು ಹೊರಡಿಸಲಾಗಿದೆ.

        ರೈತರಿಗೆ ತುರ್ತಾಗಿ ಭೂಮಾಪನ ನಕ್ಷೆ ಬೇಕಾಗಿದ್ದಲ್ಲಿ ಸ್ವಾವಲಂಬಿ  ಯೋಜನೆಯಡಿ ಸ್ವತಃ ನಕ್ಷೆ ತಯಾರಿಸಲು ಅವಕಾಶ ಕಲ್ಪಿಸಲಾಗಿದ್ದು, 5 ಸಾವಿರಕ್ಕಿಂತ ಹೆಚ್ಚು ಜನ ಈಗಾಗಲೇ ಈ ಸೌಲಭ್ಯ ಪಡೆದುಕೊಂಡಿದ್ದಾರೆ. ಪೋಡಿ ಮುಕ್ತ ಅಭಿಯಾನ ಯೋಜನೆಯನ್ನು ಗಣಕೀಕೃತಗೊಳಿಸಿ ಮೋಜಣಿ ಗಣಕ ವ್ಯವಸ್ಥೆಯಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಸಾಲಿನಲ್ಲಿ 3,000 ಗ್ರಾಮಗಳನ್ನು ಪೋಡಿ ಮುಕ್ತಗೊಳಿಸಲು ಘೋಷಿಸಿದೆ.


50 ಕೋಟಿ ರೂ. ವೆಚ್ಚದಲ್ಲಿ 250 ಅಂಗನವಾಡಿ ಕಟ್ಟಡ:

ರಾಜ್ಯದ ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳ ನಗರ ಪ್ರದೇಶಗಳಲ್ಲಿ  50 ಕೋಟಿ ರೂ. ವೆಚ್ಚದಲ್ಲಿ 250 ಅಂಗನವಾಡಿ ಕಟ್ಟಡ ನಿರ್ಮಿಸಲಾಗುವುದು. ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಪಠ್ಯವಸ್ತುಳನ್ನು ವಿತರಿಸಲು ಹಾಗೂ ಮೇಲ್ವಿಚಾರಕಿಯರು ಮತ್ತು ಕಾರ್ಯಕರ್ತರಿಗೆ ತರಬೇತಿ ನೀಡಲು 30 ಕೋಟಿ ರೂ ಮೀಸಲಿಟ್ಟಿದೆ. 


ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ :

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಉಪಧನ ನೀಡಲು ಸರ್ಕಾರ ನಿರ್ಧರಿಸಿದ್ದು,  ಅದಕ್ಕಾಗಿ 40 ಕೋಟಿ ರೂಗಳನ್ನು ಮೀಸಲಿಡಲಾಗಿದೆ. 25 ವರ್ಷಗಳ ಅರ್ಹತಾ ಸೇವೆ ಪೂರ್ಣಗೊಳಿಸಿದ ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 50,000 ರೂ ಮತ್ತು ಸಹಾಯಕಿಯರಿಗೆ 30,000 ರೂ. ಗಳ ಆರ್ಥಿಕ ಭದ್ರತೆಯನ್ನು ಒಂದು ಬಾರಿಗೆ ನೀಡಿ ಅವರಿಗೆ ಸ್ವಯಂ, ನಿವೃತ್ತಿಗೆ ಅವಕಾಶ ಕಲ್ಪಿಸಲಾಗುತ್ತದೆ.

















ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು