ಮಾರ್ಚ್ 11 ಕ್ಕೆ ಜಿಲ್ಲಾ ರಜತ ಮಹೋತ್ಸವದ ಸಮಾರೋಪ ಸಮಾರಂಭ

 ಮಾರ್ಚ್ 11 ಕ್ಕೆ ಜಿಲ್ಲಾ ರಜತ ಮಹೋತ್ಸವದ ಸಮಾರೋಪ ಸಮಾರಂಭ 


ಬಿತ್ತನೆ ಬೀಜಕ್ಕೆ ಮುಂಗಡು ಹಣ : ಸಿಎಂ ಬೊಮ್ಮಾಯಿ

ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾಡಳಿತ ಇವರುಗಳ ಸಂಯುಕ್ತಶ್ರಯದಲ್ಲಿ ಕೊಪ್ಪಳ ಜಿಲ್ಲಾ ರಜತ ಮಹೋತ್ಸವದ ಸಮಾರೋಪ ಸಮಾರಂಭ ಮಾರ್ಚ 11 ರ ಸಂಜೆ 6 ಕ್ಕೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದ ಕೋಪನಾಚಲ ವೇದಿಕೆಯಲ್ಲಿ ಜರುಗಲಿದೆ.

ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರದ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್  ಸಮಾರೋಪ ಭಾಷಣೆ ಮಾಡಿದರು. ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ ಅವರು ಘಾನಾ ಉಪಸ್ಥಿತರಿರುವರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್.ಪಾಟೀಲ್ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಬಸವರಾಜ ದಡೇಸುಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಶಶಿಲ್ ಜಿ. ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ್, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪುರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ ಎಸ್. ಪಾಟೀಲ್ ಪಾಲ್ಗೊಳ್ಳುವರು. 

ರಾಯಚೂರು ನಗರದಲ್ಲಿ ಮಹಿಳಾ ಬಿಜೆಪಿ ಕಾರ್ಯಕರ್ತರ ಕೇಸರಿ ಕಲರವ

ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಯಾದ ಎಂ.ಸುಂದರೇಶ ಬಾಬು, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಉಪಸ್ಥಿತರಿರುವರು ಎಂದು ಜಿಲ್ಲಾ ರಜತ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.

















  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು