ಜಿಲ್ಲಾಮಟ್ಟದ ಕ್ರೀಡಾಕೂಟ ಆಯೋಜನೆ

 ಜಿಲ್ಲಾಮಟ್ಟದ ಕ್ರೀಡಾಕೂಟ ಆಯೋಜನೆ 


ಟಿಶ್ಯು ಪೇಪರ್ ನಿಂದ ಈ ರೀತಿ ಗುಲಾಬಿ ತಯಾರಿಸಿ

ನಮ್ಮ ದೇಶದಲ್ಲಿ ಮಹಿಳೆಯರಿಗೆ ಅತ್ಯಂತ ಮಹತ್ವಪೂರ್ಣ ಗೌರವ ನೀಡಲಾಗುತ್ತಿದೆ. ಮಹಿಳೆ ತಾನು ಕುಟುಂಬಕ್ಕೆ ಮಾತ್ರ ಸೀಮಿತವಾಗದೆ, ಸಾಂಸ್ಕೃತಿಕವಾಗಿ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕೆಂದು ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ. ಅವರು ಹೇಳಿದರು. 

ಜಿಲ್ಲಾ ಪಂಚಾಯತಿ, ಜಿಲ್ಲಾಡಳಿತ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಗುರುವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅನುಗುಣವಾಗಿ ಹಮ್ಮಿಕೊಂಡ, ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. 

ಕ್ರೀಡಾ ಸಾಧನೆಯ ಮೆರೆಯುವ ಮಹಿಳೆಯರನ್ನು ರಾಜ್ಯ ರಾಷ್ಟೀಯ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಇಂತಹ ಕ್ರೀಡಾಕೂಟಗಳ ಸದುಪಯೋಗವನ್ನು ಪಡೆದುಕೊಂಡು ಹುಮ್ಮಸ್ಸು ಹಾಗೂ ಉತ್ಸಾಹದಿಂದ ಕ್ರೀಡೆಗಲ್ಲಿ ಭಾಗವಹಿಸಿ, ವಿಜೇತರಾಗಿ ಹೊರಹೊಮ್ಮಬೇಕು. ಇಂದು ಮಹಿಳೆ ಎಲ್ಲಾ ಕ್ಷೇತ್ರಗಳಲ್ಲಿಯೂ ಭಾಗವಹಿಸಿ ಪ್ರಾವೀಣ್ಯತೆ ಹೊಂದಿ ತಮ್ಮ ಕಾರ್ಯಸಾಧನೆ ಮೆರೆದು ಅನೇಕರು ದೇಶಕ್ಕೆ ಕೀರ್ತಿ ತಂದಿದ್ದಾರೆ. ಅಂತಹ ಸಾಧಕ ಮಹಿಳೆಯರು ನಮಗೆ ಆದರ್ಶವಾಗಬೇಕು. ಪ್ರತಿ ಪುರುಷನ ಸಾಧನೆಯ ಹಿಂದಿನ ಶಕ್ತಿ ಮಹಿಳೆಯೇ ಆಗಿರುತ್ತಾಳೆ. ಮಹಿಳೆಯರು ತಮ್ಮ ಒತ್ತಡದ ಬದುಕಿನಲ್ಲಿ ಮಾನಸಿಕ ಸಧೃಡತೆಗೆ ಕ್ರೀಡೆ ಸಹಕಾರಿಯಾಗಿದೆ. ಇದೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ್, ತಾಲೂಕ ಯೋಜನಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ವತಿಯಿಂದ ಮತದಾನದ ಕುರಿತು ಪ್ರತಿಜ್ನಾವಿಧಿ ಬೋಧಿಸಿ ಮತದಾನದ ಜಾಗೃತಿ ಮೂಡಿಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಮತಿ ಅನುಸೂಯ ಚಲವಾದಿ, ಜಿಲ್ಲಾ ಪಂಚಾಯತ್ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಶ್ರೀಮತಿ ಮುಜಾರ, ಎಸ್.ಎಸ್. ಅಳ್ಳಗಿ ಸೇರಿದಂತೆ ಕ್ರೀಡಾಪಟುಗಳು ಉಪಸ್ಥಿತರು ಇದ್ದರು. ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಜಿ.ಲೋಣಿ ಅವರು ಸ್ವಾಗತಿಸಿ ವಂದಿಸಿದರು. 

ಧ್ರುವ ನಾರಾಯಣ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ತೀವ್ರ ಸಂತಾಪ
























ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು