' ಸಿಂಹಾದ್ರಿಯ ಸಿಂಹ ' ನಟಿ ಮೀನಾ ಜೊತೆ ಧನುಷ್ಯ ಮದುವೆ....!
ಸ್ವಯಂ ಉದ್ಯೋಗದಲ್ಲಿ ಆಸಕ್ತಿಯಿದೆಯೇ ? ಹಾಗಿದ್ರೆ ಇಲ್ಲಿದೆ ನೋಡಿ ಸುವರ್ಣಾವಕಾಶ :
ಪುಟ್ನಂಜ, ಚೆಲುವ, ಗ್ರಾಮದೇವತೆ, ಸಿಂಹಾದ್ರಿಯ ಸಿಂಹ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟಿ ಮೀನಾ ಬಗ್ಗೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಪತಿಯ ಸಾವಿನ ನೋವಿನಿಂದ ಚತರಿಸಿಕೊಂಡಿರುವ ನಟಿ ಮೀನಾ ಅವರ ೨ ನೇ ಮದುವೆ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಕಾಲಿವುಡ್ ನಟ ಧನುಷ್ಯ ಜೊತೆ ಮೀನಾ ಮದುವೆ ಎಂದು ಸುದ್ದಿಯಾಗಿದೆ.
ರದ್ದಾದ ವಿಮಾನ ಸಂಚಾರ ಪುನರಾರಂಭಿಸಲು ವಿಮಾನಯಾನ ಸಂಸ್ಥೆಗಳಿಗೆ ಸೂಚನೆ:
ರಜನೀಕಾಂತ್ ಪುತ್ರಿ ಐಶ್ವರ್ಯಾಗೆ ಧನುಷ್ಯ ಡಿವೋರ್ಸ್ ನೀಡಿರೋದು ಎಲ್ಲರಿಗು ಗೊತ್ತೇ ಇದೆ. ಇಬ್ಬರೂ ಇದೀಗ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಹೀಗಿರುವಾಗ ಧನುಷ್ಯ ಮತ್ತು ಮೀನಾ ಮದುವೆ ಆಗಲಿದ್ದಾರೆ ಎಂದು ಹೇಳಲಾಗಿದೆ. ಇಬ್ಬರ ಮದುವೆ ಬಗ್ಗೆ ಸಂದರ್ಶನವೊಂದರಲ್ಲಿ ನಟ ಬೈಲಾನ್ ರಂಗನಾಥ ಮಾಹಿತಿ ಹಂಚಿಕೊಂಡಿದ್ದಾರೆ.
ಧನುಷ್ಯ ಮತ್ತು ಮೀನಾ ಇಬ್ಬರೂ ಒಂಟಿ ಜೀವನ ನಡೆಸುತ್ತಿದ್ದಾರೆ. ಮುಂಬರುವ ಜುಲೈನಲ್ಲಿ ಇಬ್ಬರೂ ಮದುವೆಯಾಗುತ್ತಾರೆ ಎಂದು ಬೈಲಾನ್ ರಂಗನಾಥ ಹೇಳಿದ್ದಾರೆ. ಈ ಸುದ್ದಿ ಕೇಳ್ತಿದ್ದಂತೆ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಈ ಸುದ್ದಿ ನಿಜಾನಾ ಎಂಬುದನ್ನು ಕಾದುನೋಡಬೇಕಿದೆ.