ಬ್ಯೂಟಿ ಫಾರ್ಲರ್ ತರಬೇತಿಗೆ ಅರ್ಜಿ ಅಹ್ವಾನ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತ ಮಹಿಳೆಯರಿಗೆ 30 ದಿನಗಳ ಉಚಿತ ಬ್ಯೂಟಿ ಪಾರ್ಲರ್ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 45 ವರ್ಷ ಒಳಗಿನವರಾಗಿರಬೇಕು. ಕನಿಷ್ಠ 8ನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು.ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅರ್ಜಿ ಸಲ್ಲಿಸುವ ಆಸಕ್ತರು ತಮ್ಮ ಆಧಾರ ಕಾರ್ಡ್ ಪ್ರತಿ, ರೇಷನ್ ಕಾರ್ಡ್ ಜೆರಾಕ್ಸ್ ಪ್ರತಿ, ಪಾಸ್ಪೋರ್ಟ್ ಸೈಜ್ ಫೋಟೋ, ಮಾರ್ಕ್ಸ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಆವರಣ, ಅಶೋಕ ಸರ್ಕಲ್ ಹತ್ತಿರ ಕೊಪ್ಪಳ, ಸಂ 08539-231038 ಇಲ್ಲಿಗೆ ಸಲ್ಲಿಸಬೇಕು.
ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ, ವಸತಿಯನ್ನು ಉಚಿತವಾಗಿ ನೀಡಲಾಗುವುದು. ತರಬೇತಿಗಾಗಿ ಮಾರ್ಚ್ 26 ರಂದು ಸಂದರ್ಶನ ನಡೆಯಲಿದ್ದು, ಮಾರ್ಚ್ 27 ರಿಂದ ತರಬೇತಿ ಪ್ರಾರಂಭವಾಗಲಿದೆ ಎಂದು ಕೊಪ್ಪಳ SBI - RCT ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ
@@@@@@@@@@@@@@@@@@@@@@@@@
Tags
Koppala