ತೋಟಗಾರಿಕೆ ಇಲಾಖೆಯಿಂದ ಅರ್ಜಿ ಅಹ್ವಾನ :
2023 - 2024 ನೇ ಸಾಲಿನ ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ಅವಧಿಗೆ : ದಿನಾಂಕ 02-05-2023 ರಿಂದ 29-02-2024 ರವರೆಗೆ ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಮಾರ್ಚ್ 11 ರಿಂದ ವಿತರಿಸಲಾಗುವುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಏಪ್ರಿಲ್ 12 ಆಗಿದ್ದು, ಸಂದರ್ಶನವನ್ನು ಏಪ್ರಿಲ್ 15 ರಂದು ಬೆಳಿಗ್ಗೆ 11 ಗಂಟೆಗೆ ಗದಗ ಭೀಷ್ಮ ಕೆರೆಯ ಹತ್ತಿರ ಇರುವ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಜರುಗಿಸಲಾಗುವುದು. ಹಾವೇರಿ ಹಾಗೂ ಧಾರವಾಡ ಜಿಲ್ಲೆ ಅಭ್ಯರ್ಥಿಗಳಿಗೆ ಸಂದರ್ಶನ ಸ್ಥಳವನ್ನು ಆಯಾ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿಗಳಲ್ಲಿ ನಿಗದಿತ ಸಮಯದಲ್ಲಿ ಗುರಿಗೆ ತಕ್ಕಂತ ನಿಯಮಾನುಸಾರ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕ ತೋಟಗಾರಿಕೆ ನಿರ್ದೇಶಕರು ಮತ್ತು ತಾಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
Tags
Gadag