ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಇಲಾಖಾ ವ್ಯಾಪ್ತಿಯ ವಿವಿಧ ಕಟ್ಟಡ ಕಾಮಗಾರಿಗಳ ಶಿಲಾನ್ಯಾಸ ಹಾಗೂ ವಿವಿಧ ಅಭಿವೃದ್ಧಿ ನಿಗಮಗಳ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮ
ವಿವಿಧ ಸೌಲಭ್ಯಗಳ ವಿವರಣೆ :
ಇಲಾಖೆ ವ್ಯಾಪ್ತಿಯಲ್ಲಿ ಬರುವ ಅಭಿವೃದ್ಧಿ ನಿಗಮಗಳ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಸಾಲ, ಗಂಗಾ ಕಲ್ಯಾಣ, ಅರಿವು ಶೈಕ್ಷಣಿಕ ಸಾಲ, ವಿದೇಶಿ ವ್ಯಾಸಂಗ ಶೈಕ್ಷಣಿಕ ಸಾಲ, ಹೊಲಿಗೆ ಯಂತ್ರ ವಿತರಣೆ ಸೇರಿದಂತೆ ವಿವಿಧ ಸೌಲಭ್ಯಗಳ ವಿತರಣೆ.
ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಚಾಲನೆ
≫ ಗಂಗಾ ಕಲ್ಯಾಣ ಕಾರ್ಯಕ್ರಮವನ್ನು e-RUPI ಮುಖಾಂತರ ಅನುಷ್ಠಾನಕ್ಕೆ ಚಾಲನೆ
≫ ನಿಗಮಗಳ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ "ವಿಶ್ವಾಸ್" ತಂತ್ರ್ಯಾಂಶದ ಚಾಲನೆ
ಕಟ್ಟಡ ನಿರ್ಮಾಣ ಶಿಲಾನ್ಯಾಸ
≫ ಬೆಂಗಳೂರು ನಗರದಲ್ಲಿ ನಿರ್ಮಿಸಲಾಗುತ್ತಿರುವ ಅಲೆಮಾರಿ / ಅರೆ ಅಲೆಮಾರಿ ಸಮುದಾಯ ಭವನ ಕಟ್ಟಡದ ಶಿಲಾನ್ಯಾಸ
≫ ೫೦ ಕನಕದಾಸ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣ ಶಿಲಾನ್ಯಾಸ
≫ ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ಧಾರವಾಡ ನಗರದಲ್ಲಿ ೦೫ ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣ ಶಿಲಾನ್ಯಾಸ
ಸೇನಾ ತರಬೇತಿ ಕೇಂದ್ರಗಳ ಉದ್ಘಾಟನೆ
ಭಾರತೀಯ ಸೇನೆ / ಇತರೆ ಯುನಿಫಾರ್ಮ್ ಸೇವೆಗಳಿಗೆ ಸೇರಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ೨೦೨೨-೨೩ ನೇ ಸಾಲಿನಲ್ಲಿ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡಲು ಕೆಳಕಂಡ ೨ ಜಿಲ್ಲೆಗಳಲ್ಲಿ ಸೇನಾ ತರಬೇತಿ ಕೇಂದ್ರಗಳ ಉದ್ಘಾಟನೆ.
≫ ವೀರ ರಾಣಿ ಅಬ್ಬಕ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ, ದಕ್ಷಿಣ ಕನ್ನಡ ಜಿಲ್ಲೆ
≫ ಹೆಂಜಾ ನಾಯಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ, ಉತ್ತರ ಕನ್ನಡ ಜಿಲ್ಲೆ
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ। ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ। ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ। ನಿಜಶರಣರ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ। ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತ। ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ। ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ। ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತ। ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿಯಮಿತ। ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ। ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮ ನಿಯಮಿತ
Tags
Govt.scheme