ಮಾರ್ಚ್.6 ರಂದು ಅಸಾಂಕ್ರಾಮಿಕ ರೋಗಗಳ ಕುರಿತು ಸೈಕಲ್ ಜಾಥಾ ಜಾಗೃತಿ ಕಾರ್ಯಕ್ರಮ.

ಮಾರ್ಚ್.6 ರಂದು ಅಸಾಂಕ್ರಾಮಿಕ ರೋಗಗಳ ಕುರಿತು ಸೈಕಲ್ ಜಾಥಾ ಜಾಗೃತಿ ಕಾರ್ಯಕ್ರಮ.




ವಿಶ್ವ ಮಹಿಳಾ ದಿನಾಚರಣೆಯನ್ನು ಆರೋಗ್ಯವಂತ ಮಹಿಳೆಯರಿಂದ ಆರೋಗ್ಯಕರ ಭಾರತ ಎಂಬ ಘೋಷವಾಕ್ಯದಡಿ ಮಾರ್ಚ್ 6 ರಂದು ಬೆಳಿಗ್ಗೆ 9-30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಅಧಿಕಾರಿಗಳ ಕಛೇರಿಯಿಂದ ಅಸಾಂಕ್ರಾಮಿಕ ರೋಗಗಳ ಪ್ರಮುಖ ಅಪಾಯಕಾರಿ ಅಂಶಗಳ ಕುರಿತು ಸೈಕಲ್ ಜಾಥಾ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 

ಈ ಸೈಕಲ್ ಜಾಥಾ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಸೈಕಲ್ ಜಾಥಾ ಜಾಗೃತಿ ಕಾರ್ಯಕ್ರಮವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಆರಂಭಗೊಂಡ ಹಳೆ ಎಸ್.ಪಿ ಸರ್ಕಲ್ ಮಾರ್ಗವಾಗಿ ಪ್ರೆಜೆನ್ಟೇಷನ್ ಸ್ಕೂಲ್ ಮುಂಭಾಗವಾಗಿ ಕೆ.ಸಿ.ಪಾರ್ಕ್ ಸುತ್ತುವರೆದು ಪೋಸ್ಟ್ ಅಫೀಸ್ ಮಾರ್ಗವಾಗಿ ಮರಳಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಮುಕ್ತಾಯಗೊಳ್ಳುವುದು ಹಾಗೂ ಈ ಜಾಗೃತಿ ಕಾರ್ಯಕ್ರಮದಲ್ಲಿ ಇಲಾಖೆಯ ಸಿಬ್ಬಂದಿಯವರು ಹಾಗೂ ಪ್ರೆಜೆನ್ಟೇಷನ್ ಸ್ಕೂಲ್ ವಿದ್ಯಾರ್ಥಿಗಳು ಭಾಗವಹಿಸಿ ಸಾರ್ವಜನಿಕರಲ್ಲಿ ಅಸಾಂಕ್ರಾಮಿಕ ರೋಗಗಳ ಪ್ರಮುಖ ಅಪಾಯಕಾರಿ ಅಂಶಗಳ ಕುರಿತು ಅರಿವು ಮೂಡಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು