ಚುನಾವಣೆ ಘೋಷಣೆಗೆ ಕ್ಷಣಗಣನೆ : ಆಯೋಗ
ಎಲ್ಲಾ ಡಿಸಿ ಗಳಿಗೆ ಪಾತ್ರ ಬರೆದ ರಾಜ್ಯ ಆಯೋಗ ಅಸೆಮ್ಬಲಿ ಎಲೆಕ್ಷನ್ ಪೂರ್ವತಯಾರಿಗೆ ನಿರ್ದೇಶನ
ರಾಜ್ಯ ವಿಧಾನಸಭೆಗೆ ಯಾವುದೇ ಕ್ಷಣದಲ್ಲಾದರೂ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗವು ಘೋಷಣೆ ಮಾಡುವ ಸಾಧ್ಯತೆ ಇದ್ದು, ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸಿದ್ಧವಾಗಿರಬೇಕು ಎಂದು ಚುನಾವಣಾ ಆಯೋಗದ ರಾಜ್ಯ ಕಚೇರಿಯು ಎಲ್ಲ ಜಿಲ್ಲಾಧಿಕಾರಿಗಳಿಗೆ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದೆ.
ಈ ಸಂಬಂಧ ರಾಜ್ಯದ ಜಂಟಿ ಮುಖ್ಯ ಚುನಾವಣಾಧಿಕಾರಿ ಟಿ.ಯೋಗೇಶ್ ಅವರು ಎಲ್ಲರಿಗೂ ಪತ್ರ ಬರೆದು ಸಿದ್ಧತೆ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.
ಏಪ್ರಿಲ್-ಮೇ ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು,ವಿಧಾನಸಭಾ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಮಾದರಿ ಚುನಾವಣಾ ನೀತಿ ಸಂಹಿತೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಇರುವ ಎಲ್ಲಾ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಬೇಕು. ಕೆಲವು ಕಾರ್ಯಗಳು ಬಾಕಿ ಇದ್ದು, ಅವುಗಳನ್ನು ಪೂರ್ಣಗೊಳಿಸಬೇಕು. ರಾಜಕೀಯ ಪಕ್ಷಗಳು ಮತ್ತು ರಾಜಕಾರಣಿಗಳು ತಮ್ಮ ಪ್ರಚಾರಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಪ್ಲೇಕ್ ಗಳು ಮತ್ತು ಪೋಸ್ಟರ್ ಗಳನ್ನು ತೆಗೆದು ಹಾಕಬೇಕು ಎಂದು ಹೇಳಿದ್ದಾರೆ.
ಚುನಾವಣೆ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಪೊಲೀಸ್ ಭದ್ರತೆ ಹೆಚ್ಚಳ, ಮತದಾರರಿಗೆ ಆಮಿಷ ನೀಡದಂತೆ ವಹಿಸಬೇಕು. ಮತ್ತು ಅಕ್ರಮವಾಗಿ ಹಣ,ಮಧ್ಯ, ಗಿಫ್ಟ್ ಗಳನ್ನು ಸಾಗಿಸುವುದಕ್ಕೆ ಕಡಿವಾಣ ಹಾಕಬೇಕು. ಸರ್ಕಾರಿ ಕಚೇರಿಗಳಲ್ಲಿ ರಾಜಕೀಯ ಪಕ್ಷಗಳ ಸಭೆ ಸಮಾರಂಭ ನಡೆಸದಂತೆ ನೋಡಿಕೊಳ್ಳಬೇಕು. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ವೆಚ್ಚಗಳ ಮೇಲೆ ನಿಗಾವಹಿಸ ಬೇಕು ಎಂದು ನಿರ್ದೇಶನ ನೀಡಿದ್ದಾರೆ.
ರಾಜ್ಯ ಚುನಾವಣಾ ಆಯೋಗ ನೀಡಿದ ಸೂಚನೆಗಳು
👉 ಏಪ್ರಿಲ್-ಮೇ ತಿಂಗಳಲ್ಲಿ ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ
👉 ಮಾದರಿ ನೀತಿ ಸಂಹಿತೆ ಜಾರಿಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು.
👉 ರಾಜಕಾರಣಿಗಳು ಹಾಕಿಸಿದ ಪ್ಲೆಕ್ಸ್ ಪೋಸ್ಟರ್ ಗಳನ್ನು ತೆಗೆಯಿರಿ.
👉 ಮತದಾರರಿಗೆ ನಾನಾ ಆಮಿಷಗಳನ್ನು ಒಡ್ಡುವುದಕ್ಕೆ ಕಡಿವಾಣ ಹಾಕಿ.
👉 ಹಣ, ಮದ್ಯ, ಗಿಫ್ಟ್ ಗಳ ಸಾಗಾಣೆ ಮಾಡುವುದು ತಡೆಯಿರಿ.
👉 ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ವೆಚ್ಚದ ಮೇಲೆ ಕಣ್ಣಿಡಿ.
👉 ಸರ್ಕಾರಿ ಕಚೇರಿಗಳಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ಬೇಡ.
ಯಾವುದೇ ಕ್ಷಣದಲ್ಲೂ ಚುನಾವಣೆ ಘೋಷಣೆ
೧೬ ನೇ ವಿಧಾನಸಭೆಗೆ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರಕ್ಕೆ ಮುಂದಾಗಿರುವಂತೆಯೇ ಕೇಂದ್ರ ಚುನಾವಣಾ ಆಯೋಗವು ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ಸಂಬಧ ಎಲ್ಲಾ ರೀತಿಯ ಸಿದ್ಧತೆಗೆ ವೇದಿಕೆ ಸಜ್ಜುಗೊಳಿಸುತ್ತಿದೆ.
ರಾಜ್ಯ ವಿಧಾನಸಭೆಗೆ ವೇಳಾಪಟ್ಟಿ ಪ್ರಕಟವಾಗಲಿದ್ದು ಯಾವುದೇ ಕ್ಷಣದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಹಾಗಾಗಿ ಅದಕ್ಕೆ ಬೇಕಾದ ಅಗತ್ಯ ತಯಾರಿ, ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲು ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಆಯೋಗ ಸ್ಪಷ್ಟ ಸೂಚನೆ ರವಾನಿಸಿದೆ.
ಈಗಾಗಲೇ ಕೇಂದ್ರ ಚುನಾವಣಾ ಮುಖ್ಯ ಆಯುಕ್ತರಾದ ರಾಜೀವ್ ಕುಮಾರ್ ನೇತೃತ್ವದ ತಂಡ ರಾಜ್ಯಕ್ಕೆ ಮೂರೂ ದಿನಗಳ ಕಾಲ ಭೇಟಿ ನೀಡಿ ಪೂರ್ವ ಸಿದ್ಧತೆಗಳನ್ನು ಇತ್ತೀಚ್ಚಿಗೆ ಪರಾಮರ್ಶಿಸಿತ್ತು. ಇದೇ ವೇಳೆ ಆಯೋಗಕ್ಕೆ ಮತದಾರರಿಗೆ ರಾಜಕೀಯ ಪಕ್ಷಗಳು ಉಡುಗೊರೆ ಆಮಿಷವೊಡ್ಡುತ್ತಿರುವ ಬಗ್ಗೆ ನಾಗರಿಕರು ನೀಡಿದ್ದ ದೂರನ್ನು ಗಂಭೀರವಾಗಿ ಪರಿಗಣಿಸಿದ್ದು, ಅಗತ್ಯ ಕ್ರಮಕ್ಕೆ ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಗೆ ಆಯೋಗ ಕೊಟ್ಟಿದ್ದ ನಿರ್ದೇಶನದ ಮೇರೆಗೆ ಇದೀಗ ರಾಜ್ಯಾದ್ಯಂತ ದಾಸ್ತಾನಿಸಿರಿಸಿದ್ದ ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಅಷ್ಟೇ ಅಲ್ಲ ದೊಡ್ಡ ಪ್ರಮಾಣದಲ್ಲಿ ಅಕ್ರಮ ನಗದು ಸಾಗಾಟದ ಬಗ್ಗೆ ಕೂಡ ಆಯೋಗ ಹದ್ದಿನ ಕಣ್ಣಿಟ್ಟಿದೆ. ಚುನಾವಣಾ ನೀತಿಸಂಹಿತೆ ಯಾವುದೇ ಕ್ಷಣದಲ್ಲೂ ಹೊರಬೀಳಬಹುದು ಎಂದು ರಾಜ್ಯ ಚುನಾವಣಾ ಮುಖ್ಯ ಆಯುಕ್ತರು ಅಧಿಕೃತ ಪ್ರಕಟಣೆ ಹೊರಡಿಸಿದ್ದು ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಎಲ್ಲ ಜಿಲ್ಲಾಧಿಕಾರಿಗಳು, ಚುನಾವಣಾ ಆಯುಕ್ತರಿಗೆ ನೀತಿಸಂಹಿತೆಯ ಕಟ್ಟುನಿಟ್ಟಿನ ಜಾರಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಬಗ್ಗೆಯೂ ಉಲ್ಲೇಖಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಅಗತ್ಯ ಪೂರ್ವ ಸಿದ್ಧತೆ ಬಗ್ಗೆ ಪರಾಮರ್ಶಿಸಿ ಮಾಹಿತಿ ಪಡೆದುಕೊಂಡಿರುವ ಕೇಂದ್ರ ಚುನಾವಣಾ ಆಯೋಗ ಇದೇ 27 ಇಲ್ಲವೇ 29 ರಂದು ಅಧಿಕೃತ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಬಹುತೇಕ ಒಂದೇ ಹಂತದಲ್ಲಿ ಮತದಾನ ನಡೆಯುವ ನಿರೀಕ್ಷೆ ಇದೆ. ಸಾಮಾಜಿಕ ಜಾಲತಾಣಗಳಲ್ಲಿ 2018 ರ ಚುನಾವಣಾ ಅಧಿಸೂಚನೆಯನ್ನು ಪೋಸ್ಟ್ ಮಾಡಿ ಚುನಾವಣಾ ದಿನಾಂಕ ಪ್ರಕಟಣೆಯಾಗಲಿದೆ ಎಂದು ಇತ್ತೀಚ್ಚಿಗೆ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಆದರೆ, ಇದೀಗ ಆಯೋಗದಿಂದಲೇ ಅಧಿಕೃತ ಪ್ರಕಟಣೆ ಇನ್ನು ಮೂರ್ನಾಲ್ಕು ದಿನಗಳಲ್ಲಿ ಚುನಾವಣೆ ವೇಳಾಪಟ್ಟಿ ಹೊರಬೀಳುವುದು ಖಚಿತವಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ
@@@@@@@@@@@@@@@@@@@@@@@@@
Tags
Govt.scheme