ವಿಧಾನ ಪರಿಷತ್ ಸಭಾಪತಿಗಳ ಜಿಲ್ಲಾ ಪ್ರವಾಸ

ವಿಧಾನ ಪರಿಷತ್ ಸಭಾಪತಿಗಳ ಜಿಲ್ಲಾ ಪ್ರವಾಸ 




        ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಮಾರ್ಚ್ 4 ರಂದು ಹಾವೇರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮಾರ್ಚ್ 4 ರಂದು ಬೆಳಿಗ್ಗೆ 9-30 ಕ್ಕೆ ಹುಬ್ಬಳ್ಳಿಯಿಂದ ಹೊರಟು, ಹಾವೇರಿಗೆ ಆಗಮಿಸುವರು. ಬೆಳಿಗ್ಗೆ 11 ಗಂಟೆಗೆ ದೇವಗಿರಿ ಮಹಾತ್ಮಾ ಗಾಂಧಿ ಪ್ರೌಢಶಾಲೆಯ ನೂತನ ಸಭಾಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. 

ಮಧ್ಯಾಹ್ನ 1 ಗಂಟೆಗೆ ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಹಾವೇರಿ ಜಿಲ್ಲಾ ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘದ ಸಭೆ ನಡೆಸುವರು. ಮಧ್ಯಾಹ್ನ 2 ಗಂಟೆಗೆ ಜ್ಞಾನ ಗುಮ್ಮಜ ಎಜುಕೇಶನ್ ಸೊಸೈಟಿ ಯ ನೂತನ ಶಾಲಾ ಕಟ್ಟಡದ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ.









ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು