ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ, 200 ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರಿಗೆ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..........
ರಾಜ್ಯದಲ್ಲಿ ವೀವಿಧ ಜಿಲ್ಲೆಗಳಲ್ಲಿ ಖಾಲಿಯಿರುವ 200 ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ, ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಆಸಕ್ತ ಮಹಿಳಾ ಮತ್ತು ಪುರುಷ ಅಭರ್ತಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಕೋರಲಾಗಿದೆ.
ತುಮಕೂರು ನಗರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 83 ಅಂಗನವಾಡಿ ಕಾರ್ಯಕರ್ತೆ ಹಾಗೂ 14 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 153 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಗೌರವ ಸೇವೆಯ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿಯುಸಿ ತೇರ್ಗಡೆ ಹೊಂದಿರಬೇಕು. ಹಾಗೂ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಜೊತೆಗೆ ಆದ್ಯತೆಯಾಗಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ ಅಥವಾ DSERT ಯಿಂದ ECCE ಡಿಪ್ಲೊಮಾ ಕೊರ್ಸ್. JOC ಕೋರ್ಸ್, NTT ಕೋರ್ಸ್ ಹಾಗೂ ಅಂಗನವಾಡಿ ಚಟುವಟಿಕೆಗೆ ಸಂಬಂಧಿಸಿದಂತೆ ಡಿಪ್ಲೊಮಾ ನ್ಯೂಟ್ರಿಷಿಯನ್, ಹೋಂ ಸೈನ್ಸ್, ಸರ್ಟಿಫಿಕೇಟ್ ಕೋರ್ಸ್, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ಪ್ರಮಾಣ ಪತ್ರ / ಅಂಕಪಟ್ಟಿಯ ಗರಿಷ್ಟ 625 ಕ್ಕೆ ಕನಿಷ್ಠ 219 ಅಂಕಗಳನ್ನು ಹೊಂದಿದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.
ಮಾರ್ಚ್ 21ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
ತುಮಕೂರು ಜಿಲ್ಲಾ ಉದ್ಯೋಗ ಕಚೇರಿ ಎಲ್ ಅಂಡ್ ಫೈನಾನ್ಸಿಯಲ್ ಸರ್ವಿಸಸ್ ಹಾಗೂ ಸೂರ್ಯೋದಯ ಸ್ಟಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್ ಸಹಯೋಗದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಲುವಾಗಿ ಮಾರ್ಚ್ 21 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.
ಸಂದರ್ಶನವು ಅಂದು ಬೆಳಗ್ಗೆ 10:30 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ. ಆಸಕ್ತ 18 ರಿಂದ 30 ವರ್ಷದೊಳಗಿನ ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾ ದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.
ಮಾರ್ಚ್ 19 ರಂದು ವಿವಿಧ ಹುದ್ದೆಗೆ ನೇರ ಸಂದರ್ಶನ :
ವಿಜಯಪುರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ರಾಮಕೃಷ್ಣ ವಿದ್ಯಾ ಸಂಸ್ಥೆ ವಿಜಯಪುರ ಸಹಯೋಗದಲ್ಲಿ ಮಾರ್ಚ್ 19 ರಂದು ಬೆಳಗ್ಗೆ 10 ರಿಂದ ಸಾಯಂಕಾಲ 4 ಗಂಟೆವರೆಗೆ ವಿವಿಧ ಹುದ್ದೆಗಳ ಭರ್ತಿಗೆ ಶ್ರೀರಾಮ ಕೃಷ್ಣ ವಿದ್ಯಾ ಸಂಸ್ಥೆ ಆವರಣದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಭೋದಕ ಮತ್ತು ಬೋಧಕೇತರ ವಿವಿಧ ಹುದ್ದೆಗಳಿಗೆ ಸಂದರ್ಶನ ಜರುಗಲಿದೆ.
ತುಮಕೂರು ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಸಹಾಯಕಿ ಹುದ್ದೆಗೆ ಅರ್ಜಿ ಅಹ್ವಾನ :
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ೭ ಅಂಗನವಾಡಿ ಕಾರ್ಯಕರ್ತೆ ಹಾಗೂ ೩೬ ಸಹಾಯಕಿಯರ ಹುದ್ದೆಗಳನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೇ ಭರ್ತಿ ಮಾಡಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಭರ್ತಿ ಮಡಿದ ಅರ್ಜಿಯನ್ನು ಏಪ್ರಿಲ್ ೬ ರೊಳಗಾಗಿ ಶಿಶು ಅಭಿವೃದ್ಧಿ ಯೋಜನಧಿಕಾರಿ ಕಚೇರಿ, ಸಾಮರ್ಥ್ಯ ಸೌಧ, ತಾಲೂಕು ಪಂಚಾಯತಿ ಆವರಣ, ಚಿಣ್ಣನಾಯಕನಹಳ್ಳಿ ಇವರಿಗೆ ಸಲ್ಲಿಸಬಹುದು.
ಮೈಸೂರು ಗ್ರಾಮಾಂತರ ಪ್ರದೇಶದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ:
ಮೈಸೂರು ಅಂಗನವಾಡಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ ೭ ಅಂಗನವಾಡಿ ಕಾರ್ಯಕರ್ತೆ, ೧ ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ ೧೬ ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ರಾಯಚೂರು ಜಿಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಒಕ್ಕೂಟದಿಂದ ಮಾರ್ಚ್ 19 ರ ಭಾನುವಾರ ಬೆಳಗ್ಗೆ 9 ರಿಂದ ಸಾಯಂಕಾಲ 5 ಗಂಟೆವರೆಗೆ ನಗರದ ವೀರಶೈವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಕೆ ಮುರಳೀಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಖಾಸಗಿ ಶಾಲೆಗಳಲ್ಲಿ ಖಾಲಿಯಿರುವ ವಿವಿಧ ವಿಷಯಗಳ ಶಿಕ್ಷಕರ ಹುದ್ದೆಗಳ ನೇಮಕ ಮಾಡಿಕೊಳ್ಳುವುದಕ್ಕಾಗಿ ಈ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹಮ್ಮಿಕೊಂಡ ಸುದ್ಧಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮೇಳದಲ್ಲಿ 120 ಕ್ಕೂ ಹೆಚ್ಚು ಖಾಸಗಿ ಶಾಲೆಗಳು ಪಾಲ್ಗೊಳ್ಳುತ್ತಿದ್ದು, ಮೇಳದಲ್ಲಿ ದೈಹಿಕ ಶಿಕ್ಷಣ ಸೇರಿದಂತೆ ವಿವಿಧ ವಿಷಯಗಳಿಗೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ಉಚಿತ ನೋಂದಣಿ ಮಾಡಿಕೊಂಡು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು.
ಮಲ್ಲಸಂದ್ರ ಗೊಲ್ಲರಹಟ್ಟಿ, ಹೆಬ್ಬಟ್ಟನಹಳ್ಳಿ, ಲಿಂಗಾಪುರ, ಸಂತೆಪೇಟೆ, ಡಿ.ಎಂ ಪಾಳ್ಯ, ವೀರಸಾಗರ-2, ಉಪ್ಪಾರಹಳ್ಳಿ-1, ದೇವರಾಯಪಟ್ಟಣ, ದಿಬ್ಬುರ-1, ಭೀಮಸಂದ್ರ ಹಾಗು ಪಿ.ಎಚ್ ಕಾಲೋನಿ-4 ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಸಹಾಯಕಿ ಹುದ್ದೆಗಳು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ
@@@@@@@@@@@@@@@@@@@@@@@@@
Tags
Govt.scheme