ಯಾವುದೇ ಪರೀಕ್ಷೆಯಿಲ್ಲದೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
10 ಮತ್ತು 12 ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ನೇರ ಅರ್ಜಿ ಆಹ್ವಾನಿಸಲಾಗಿದೆ. ಯಾವ್ಯಾವ ಜಿಲ್ಲೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ? ವಿದ್ಯಾರ್ಹತೆ ಏನು? ಅರ್ಜಿ ಹೇಗೆ ಸಲ್ಲಿಸುವುದು? ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಮಾಹಿತಿ ಇಲ್ಲಿದೆ.
ರಾಜ್ಯದ ವಿವಿಧ ಜಿಲ್ಲೆ, ತಾಲೂಕುಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ನೇರ ಅರ್ಜಿ ಆಹ್ವಾನಿಸಲಾಗಿದೆ. 12 ನೇ ತರಗತಿ ಮತ್ತು 10 ನೇ ತರಗತಿ ಪಾಸಾದ ಆಸಕ್ತ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಪಡೆಯಬಹುದು.
ಯಾರೆಲ್ಲ ಅರ್ಹರು?
19 ರಿಂದ 35 ವರ್ಷ ವಯೋಮಿತಿ ಒಳಗಿರುವ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪ ಸಂಖ್ಯಾತರು ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಹರಾಗಿರುತ್ತಾರೆ. ಅಂಗವಿಕಲ ಅಭ್ಯರ್ಥಿಗಳ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು.
ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇದೆ. ಆದರೆ, ದೈಹಿಕ ಅಂಗವಿಕಲತೆಯ ಪ್ರಮಾಣವು ಶೇ. 40 ಕ್ಕಿಂತ ಅಧಿಕವಿರಬಾರದು.
ಸುಳ್ಳು ಸುದ್ದಿಯನ್ನು ಪ್ರಕಟಿಸುವ ಮೇದಾವಿಗಳು
ಪ್ರತ್ಯುತ್ತರಅಳಿಸಿ