ಕುಡಿಯುವ ನೀರಿನ ಸಮಸ್ಯೆ ತಡೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ :

ಕುಡಿಯುವ ನೀರಿನ ಸಮಸ್ಯೆ ತಡೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ :




ಬೇಸಿಗೆ ಸಮಯದಲ್ಲಿ ಜಿಲ್ಲೆಯ ನಗರ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಾಲೂಕ ಆಡಳಿತದೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಿದ ಅವರು, ಮುಂಬರುವ ದಿನಗಳಲ್ಲಿ ನೀರಿನ ಸಮಸ್ಯೆ ಉಂಟಾಗುವ ಗ್ರಾಮಗಳ ಸಮೀಕ್ಷೆ ನಡೆಸಿ ಎಂದು ತಹಶೀಲ್ದಾರಗಳು ಹಾಗೂ ತಾಲೂಕ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು. 


ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಖಾಸಗಿ ಹಾಗೂ ಸರ್ಕಾರೀ ಬೋರ್ ವೆಲ್ ಗಳ ಸಮೀಕ್ಷೆ ನಡೆಸಿ, ನೀರಿನ ಸಮಸ್ಯೆ ಉಂಟಾಗುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸುವ ಮೊದಲೇ ಟ್ಯಾಂಕರ್ ಗಳನ್ನೂ ವ್ಯವಸ್ಥೆ ಮಾಡಿಕೊಳ್ಳಬೇಕು. ಹಾಗೂ ಪ್ರತಿ ಟ್ಯಾಂಕರ್ ನೋಂದಣಿ ಮಾಡಿಸಬೇಕು. ಯಾವ ಮೂಲದಿಂದ ನೀರು ಒದಗಿಸಲಾಗುತ್ತಿದೆ ಎಂಬ ವಿವರವಾದ ವರದಿ ತಯಾರಿಸಿ ಸಲ್ಲಿಸಿ ಎಂದು ಸೂಚನೆ ನೀಡಿದರು.










ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು