RTE Admission 2023 : ಆರ್.ಟಿ.ಇ ಮೂಲಕ ಪ್ರವೇಶಾತಿ..... ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಅರ್ಜಿ ಯಾವಾಗ ಆರಂಭ? ವೇಳಾಪಟ್ಟಿ ಇಲ್ಲಿದೆ.
ಕರ್ನಾಟಕ ರಾಜ್ಯದಲ್ಲಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರೀ ಶಾಲೆಗಳು ಎಲ್ಲಿ ಇರುವುದಿಲ್ಲವೋ ಅಥವಾ ವಿದ್ಯಾರ್ಥಿಗಳ ಪ್ರದೇಶದಲ್ಲಿ ಇರುವ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯಿದೆ ಮೂಲಕ ಉಚಿತವಾಗಿ ಪ್ರವೇಶ ಪ್ರಕ್ರಿಯೆಗೆ ಶೀಘ್ರದಲ್ಲೇ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ.
೨೦೨೩ - ೨೪ ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯಡಿಯಲ್ಲಿ ಪ್ರವೇಶಾತಿಗೆ ವೇಳಾಪಟ್ಟಿ :
ಅನುದಾನಿತ ಶಾಲೆಗಳೂ ಸೇರಿದಂತೆ ದಾಖಲಾತಿ ಕೋರಿ ಪೋಷಕರು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ 20-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 20-04-2023
EID ಮೂಲಕ ಸಲ್ಲಿಸಿದ ಅರ್ಜಿಗಳ ದತ್ತಾಂಶದ ನೈಜತೆ ಪರಿಶೀಲನೆ ದಿನಾಂಕ - 21-03-2023 ರಿಂದ 21-04-2023 ರವರೆಗೆ.
ವಿಶೇಷ ಪ್ರವರ್ಗಗಳು ಮತ್ತು ಕ್ರಮಬದ್ಧವಲ್ಲದ ಅರ್ಜಿಗಳ ಪರಿಶೀಲನೆ ದಿನಾಂಕ - 21-03-2023 ರಿಂದ 21-04-2023 ರವರೆಗೆ.
ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಣೆ ದಿನಾಂಕ - 24-04-2023
ಆನ್ಲೈನ್ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆ ದಿನಾಂಕ - 27-04-2023
ಶಾಲೆಗಳಲ್ಲಿ ದಾಖಲಾತಿ ಪ್ರಾರಂಭ ದಿನಾಂಕ - 28-04-2023 ರಿಂದ 08-05-2023 ರವರೆಗೆ.
ಶಾಲೆಗಳಲ್ಲಿ ದಾಖಲಾದ ಮೊದಲ ಸುತ್ತಿನ ಮಕ್ಕಳ ವಿವರಗಳನ್ನು ತಂತ್ರಾಂಶದಲ್ಲಿ ಅಪ್ಲೋಡ್ ಮಾಡುವುದು- ೨೮-೦೪೨೦೨೩ ರಿಂದ -08-05-2023
ಆನ್ಲೈನ್ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ದಿನಾಂಕ - 16-05-2023
ಎರಡನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟುಗಳಿಗೆ ಶಾಲೆಗಳಲ್ಲಿ ದಾಖಲಾತಿ ಅವಧಿ -17-05-2023 ರಿಂದ 25-05-2023 ರವರೆಗೆ.
ಶಾಲೆಗಳಲ್ಲಿ ದಾಖಲಾದ ಎರಡನೇ ಸುತ್ತಿನ ಮಕ್ಕಳ ವಿವರಗಳನ್ನು ತಂತ್ರಾಂಶದಲ್ಲಿ ಅಪ್ಲೋಡ್ ಮಾಡುವುದು 17-05-2023 ರಿಂದ 25-05-2023 ರವರೆಗೆ.
ಶಿಕ್ಷಣ ಹಕ್ಕು ಕಾಯ್ದೆಯಡಿಯಲ್ಲಿ ಮೂಲಕ ಉಚಿತವಾಗಿ ಪ್ರವೇಶಕ್ಕೆ ಅರ್ಜಿ ಹಾಕಲು ದಿನಾಂಕವನ್ನು ನಿಗದಿಪಡಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.
2023-24ನೇ ಸಾಲಿನ ಪ್ರವೇಶಾತಿಗೆ, ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಲಾದ ವೇಳಾಪಟ್ಟಿ ಪ್ರಕಾರ ಆನ್ಲೈನ್ ಅರ್ಜಿ ಪ್ರಕ್ರಿಯೆಯು ದಿನಾಂಕ 20-03-2023 ರಿಂದ 20-04-2023 ರವರೆಗೆ ಆನ್ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಲು ಅವಕಾಶ ನೀಡಲಾಗಿದೆ.
ಆರ್.ಟಿ.ಇ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ವಿಧಾನ:
RTE ಮೂಲಕ ಪ್ರವೇಶಕ್ಕೆ ಅರ್ಜಿ ಹಾಕಲು ಪಾಲಕರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗಳಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಉಚಿತವಾಗಿ ಅಥವಾ ಸರ್ಕಾರದ ಪಾವತಿ ಕೇಂದ್ರಗಳಾದ ಬೆಂಗಳೂರು ನಗರದಲ್ಲಿ, ಬೆಂಗಳೂರು-ಆನ್, ಇತರೆ ನಗರ ಪ್ರದೇಶಗಳಲ್ಲಿ ಕರ್ನಾಟಕ-ಒನ್, ತಾಲೂಕು ಮತ್ತು ಹೋಬಳಿಯ ಮಟ್ಟದಲ್ಲಿ ಅಟಲ್-ಜೀ ಜನಸ್ನೇಹಿ ಕೇಂದ್ರಗಳ ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಹಾಕಲು ಬೇಕಾದ ದಾಖಲೆಗಳು :
ಶಿಕ್ಷಣ ಹಕ್ಕು ಕಾಯಿದೆಯಡಿ ಖಾಸಗಿ ಶಾಲೆಗಳಲ್ಲಿ ಉಚಿತ ಸೀಟಿಗಾಗಿ ಪ್ರವೇಶ ಕೋರುವ ಮಗು ಮತ್ತು ತಂದೆ ಅಥವಾ ತಾಯಿಯ ಆಧಾರ್ ಕಾರ್ಡ್,
ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣಪತ್ರ ಅಗತ್ಯವಾಗಿ ಬೇಕು.
ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿಯಿಂದ ನೈಜತೆ ತಾಳೆ ಆಗದ ಅಪೂರ್ಣ ಅಥವಾ ಕ್ರಮಬದ್ಧವಲ್ಲದ ಅರ್ಜಿಗಳ ತಂದೆ/ತಾಯಿ ಪೋಷಕರ ಮೊಬೈಲ್ ಗೆ ದೋಷಗಳನ್ನು ಸರಿಪಡಿಸಲು SMS ಕಳುಹಿಸಲಾಗುವುದು.