RTE ಮೂಲಕ ಪ್ರವೇಶಾತಿಗೆ ಅರ್ಜಿ ಆರಂಭ
ಶಿಕ್ಷಣ ಹಕ್ಕು ಕಾಯ್ದೆಯಡಿಯಲ್ಲಿ ಪ್ರವೇಶಾತಿ 2023-24 ಗೆ ಆನ್ ಲೈನ್ ಮೂಲಕ ಅರ್ಜಿ ಪ್ರಕ್ರಿಯೆಯು ಮಾರ್ಚ್ 20 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ 20-04-2023 ಕೊನೆಯ ದಿನವಾಗಿದೆ. ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಮಾರ್ಚ್ 20 ರಿಂದ 2023-24 ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯಡಿಯ (RTE Admission 2023-24) ಮೂಲಕ ಉಚಿತವಾಗಿ ಪ್ರವೇಶಕ್ಕೆ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಗಾಗಿದೆ.
ಈ ಹಿಂದೆ ದಾಖಲಾತಿ ಪ್ರಕ್ರಿಯೆ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ವೇಳಾಪಟ್ಟಿಯ ಪ್ರಕಾರ ಆನ್ ಲೈನ್ ನಲ್ಲಿಈ ಅರ್ಜಿ ಪ್ರಕ್ರಿಯೆಯು ದಿನಾಂಕ 20-03-2023 ರಿಂದ 20-04-2023 ವರೆಗೆ ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಲು ಅವಕಾಶ ನೀಡಲಾಗಿದೆ.
ಆರ್ ಟಿ ಇ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ವಿಧಾನ
ಆರ್ ಟಿ ಇ ಮೂಲಕ ಪ್ರವೇಶಕ್ಕೆ ಅರ್ಜಿ ಹಾಕಲು ಪಾಲಕರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗಳಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಉಚಿತವಾಗಿ ಅಥವಾ ಸರ್ಕಾರದ ಪಾವತಿ ಕೇಂದ್ರಗಳಾದ ಬೆಂಗಳೂರು ನಗರದಲ್ಲಿ ಬೆಂಗಳೂರು- ಒನ್, ಇತರೆ ನಗರ ಪ್ರದೇಶಗಳಲ್ಲಿ ಕರ್ನಾಟಕ - ಒನ್ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಅಟಲ್-ಜೀ ಜನಸ್ನೇಹಿ ಕೇಂದ್ರಗಳ ಮೂಲಕ ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?
ಕರ್ನಾಟಕ ರಾಜ್ಯದಲ್ಲಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳು ಎಲ್ಲಿ ಇರುವುದಿಲ್ಲವೋ ಅಥವಾ ವಿದ್ಯಾರ್ಥಿಗಳ ಪ್ರದೇಶದಲ್ಲಿ ಇರುವ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆ ಮೂಲಕ ಉಚಿತವಾಗಿ ಪ್ರವೇಶ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಹಾಕಲು ಬೇಕಾದ ದಾಖಲಾತಿಗಳು
ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ಉಚಿತ ಸೀಟಿಗಾಗಿ ಪ್ರವೇಶ ಕೋರುವ ಮಗು ಮತ್ತು ತಂದೆ ಅಥವಾ ತಾಯಿಯ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಧೃಡೀಕರಣ ಪ್ರಮಾಣ ಪತ್ರ ಅಗತ್ಯವಾಗಿ ಬೇಕು.
೨೦೨೩-೨೪ ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯಡಿಯಲ್ಲಿ ಪ್ರವೇಶಾತಿಗೆ ವೇಳಾಪಟ್ಟಿ
👉 ಅನುದಾನಿತ ಶಾಲೆಗಳೂ ಸೇರಿದಂತೆ ದಾಖಲಾತಿ ಕೋರಿ ಪೋಷಕರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ 20-03-2023
👉 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-04-2023
👉 EID ಮೂಲಕ ಸಲ್ಲಿಸಿದ ಅರ್ಜಿಗಳ ದತ್ತಾಂಶದ ನೈಜತೆ ಪರಿಶೀಲನೆ ದಿನಾಂಕ 21-03-2023 ರಿಂದ 21-04-2023
👉 ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಣೆ ದಿನಾಂಕ 24-04-2023
👉 ವಿಶೇಷ ಪ್ರವರ್ಗಗಳು ಮತ್ತು ಕ್ರಮಬದ್ಧವಲ್ಲದ ಅರ್ಜಿಗಳ ಪರಿಶೀಲನೆ ದಿನಾಂಕ 21-03-2023 ರಿಂದ 21-04-2023
👉 ಆನ್ ಲೈನ್ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆ ದಿನಾಂಕ 27-04-20323.
👉 ಶಾಲೆಗಳಲ್ಲಿ ದಾಖಲಾತಿ ಪ್ರಾರಂಭ ದಿನಾಂಕ 28-04-2023ರಿಂದ 08-05-2023 ರವರೆಗೆ
👉 ಶಾಲೆಗಳಲ್ಲಿ ದಾಖಲಾದ ಮೊದಲ ಸುತ್ತಿನ ಮಕ್ಕಳ ವಿವರಗಳನ್ನು ತಂತ್ರಾಶದಲ್ಲಿ ಅಪ್ಲೋಡ್ ಮಾಡುವುದು 28-04-2023 ರಿಂದ 08-05-2023 ವರೆಗೆ
👉 ಆನ್ ಲೈನ್ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ದಿನಾಂಕ 16-05-2023
👉 ಎರಡನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟುಗಳಿಗೆ ಶಾಲೆಗಳಲ್ಲಿ ದಾಖಲಾತಿ ಅವಧಿ 17-05-2023 ರಿಂದ 25-05-2023 ರವರೆಗೆ.
👉 ಶಾಲೆಗಳಲ್ಲಿ ದಾಖಲಾದ ಎರಡನೇ ಸುತ್ತಿನ ಮಕ್ಕಳ ವಿವರಗಳನ್ನು ತಂತ್ರಾಶದಲ್ಲಿ ಅಪ್ಲೋಡ್ ಮಾಡುವುದು17-05-2023 ರಿಂದ 25-05-2023 ರವರೆಗೆ.
ಅಪೂರ್ಣ ಅಥವಾ ಕ್ರಮಬದ್ಧವಲ್ಲದ ಅರ್ಜಿಗಳು
ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಯಿಂದ ನೈಜತೆ ತಾಳೆ ಆಗದ ಅಪೂರ್ಣ ಅಥವಾ ಕ್ರಮಬದ್ಧವಲ್ಲದ ಅರ್ಜಿಗಳ ತಂದೆ/ತಾಯಿ ಪೋಷಕರ ಮೊಬೈಲಿಗೆ ದೋಷಗಳನ್ನು ಸರಿಪಡಿಸಲು ಎಸ್ ಎಂ ಎಸ್ ಕಳುಹಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪೋಷಕರು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ವೆಬ್ ಸೈಟ್ https://www.schooleducation.kar.nic.in ಭೇಟಿ ನೀಡಿ.
ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ
@@@@@@@@@@@@@@@@@@@@@@@@@
Tags
Govt.scheme