SSLC ಹಾಲ್ ಟಿಕೆಟ್ ಡೌನ್ಲೋಡ್ ಮಾಡಬೇಕೆ ಇಲ್ಲಿದೆ ಸಂಪೂರ್ಣ ಮಾಹಿತಿ:

SSLC 2023 ವಾರ್ಷಿಕ ಪರೀಕ್ಷೆಯ ಹಾಲ್ ಟಿಕೆಟ್ ಪ್ರಕಟ : ಹಾಲ್ ಟಿಕೆಟ್ ಪಡೆಯಲು ಇಲ್ಲಿ ಡೌನ್ಲೋಡ್ ಮಾಡಿ 

ಹೆರಿಗೆ ರಜೆಯಲ್ಲಿಯೇ ಪರೀಕ್ಷೆ ತಯಾರಿ ನಡೆಸಿ ಐಪಿಎಸ್ ಅಧಿಕಾರಿಯಾದ ಐಟಿ ಉದ್ಯೋಗಿ......!

ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡಿದೆ. ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸುವಂತೆ ಮಂಡಳಿ ತಿಳಿಸಿದೆ.

2023 ನೇ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ SSLC ಮುಖ್ಯ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಮಂಡಳಿಯ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಲಾಗುವುದು. ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಶಾಲಾ ಲಾಗಿನ್ ಮೂಲಕ ಡೌನ್ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸುವಂತೆ ಮಂಡಳಿ ಸುತ್ತೋಲೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳಲ್ಲಿ ವಿದ್ಯಾರ್ಥಿಯ ಹೆಸರು, ತಾಯಿ ಹೆಸರು, ಭಾವಚಿತ್ರ, ಸಹಿ ಇತರೆ ತಿದ್ದುಪಡಿಗಳಿದ್ದಲ್ಲಿ CCERF ವಿದ್ಯಾರ್ಥಿಗಳಿಗೆ S A T S ನಲ್ಲಿ ತಿದ್ದುಪಡಿ ಮಾಡಿದ ಪ್ರತಿಯೊಂದಿಗೆ ಮತ್ತು ಇತರೆ ದಾಖಲೆಗಳೊಂದಿಗೆ ಪ್ರತಿ ತಿದ್ದುಪಡಿಗೆ ರೂ 100/- ದಂಡ ಶುಲ್ಕವನ್ನು ನೆಫ್ಟ್ ಚಲನ್ ಮೂಲಕ ಪಾವತಿಸಿ ದಿನಾಂಕ 24-03-2023ರೊಳಗೆ ಮಂಡಳಿಗೆ ತಲುಪುವಂತೆ ಸಲ್ಲಿಸುವಂತೆ  ಸೂಚಿಸಿದೆ.

ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ, ಡೌನ್ಲೋಡ್ ಮಾಡಿಕೊಂಡು ಪ್ರವೇಶ ಪತ್ರಗಳ ಸಂಖ್ಯೆಗೆ ಹೊಂದುತ್ತಿದೆಯೇ ಎಂದು ಪಡಿಸಿಲಿಸಿಕೊಳ್ಳುವುದು.

ಒಂದು ವೇಳೆ ಯಾವುದಾದರು ವಿದ್ಯಾರ್ಥಿಯ ಪ್ರವೇಶ ಪತ್ರ ಬಂದಿಲ್ಲದಿದ್ದರೆ, ಸದರಿ ವಿದ್ಯಾರ್ಥಿಯ ವಿವರವನ್ನು ಸಮರ್ಥನೆಯೊಂದಿಗೆ/ ದಾಖಲೆಗಳೊಂದಿಗೆ ಮಂಡಳಿಗೆ ಕೂಡಲೇ ಕಳುಹಿಸಿಕೊಡುವಂತೆ ಸೂಚಿಸಿದೆ.

' ಏಕ್ ತೇರಾ, ಏಕ್ ಮೇರಾ ' ಅಕ್ಷಯ್ ಕುಮಾರ್ ಚಿತ್ರದ ಹಾಸ್ಯ ದೃಶ್ಯ ಮರುಸೃಷ್ಟಿಸಿದ ಅಶ್ವಿನ್-ಜಡೇಜಾ !

ವಿದ್ಯಾರ್ಥಿಯ ಭಾವಚಿತ್ರ, ಸಿಹಿ ಮತ್ತು ಇತರೆ ತಿದ್ದುಪಡಿಗಳಿದಲ್ಲಿ ಸೂಕ್ತ ದಾಖಲೆಗಳೊಂದಿಗೆ ಮಂಡಳಿಗೆ ಸಲ್ಲಿಸಿ ಅರಿಪಡಿಸಿಕೊಳ್ಳಬೇಕು. ಒಂದು ವೇಳೆ ಸರಿಪಡಿಸಿಕೊಳ್ಳದೆ ಇದ್ದಲ್ಲಿ ಇದರಿಂದ ವಿದ್ಯಾರ್ಥಿಗೆ ಮುಂದೆ ಅಂಕಪಟ್ಟಿಯಲ್ಲಾಗುವ ತೊಂದರೆಗೆ ಸಂಬಂಧಿಸಿದ ಶಾಲಾ ಮುಖ್ಯಸ್ಥರೇ ಜವಾಬ್ದಾರರಾಗಿದ್ದು, ಮಂಡಳಿಯು ಇದರ ಜವಾಬ್ದಾರಿ ಹೊಂದಿರುವುದಿಲ್ಲ. 

ಯಾವುದೇ ವಿದ್ಯಾರ್ಥಿಯ ಭಾವಚಿತ್ರ ಬದಲಾವಣೆಗೆ ಸಂಬಂಧಿಸಿದಂತೆ, ಪರೀಕ್ಷೆಗೆ ಪೂರ್ವದಲ್ಲಿ ಮಾಡಲಾದ ಬದಲಾವಣೆಗಳನ್ನು ಮಾತ್ರ ಮಂಡಳಿಯು ಪರಿಗಣಿಸುತ್ತದೆ. ಪರೀಕ್ಷಾ ನಂತರದಲ್ಲಿ ಬರುವ ವಿದ್ಯಾರ್ಥಿಗಳ ಭಾವಚಿತ್ರ ಬದಲಾವಣೆ ಕುರಿತು ಯಾವುದೇ ಮನವಿಗಳನ್ನು ಮಂಡಳಿ ಪುರಸ್ಕರಿಸುವುದಿಲ್ಲ

ತಿದ್ದುಪಡಿಗೆ ಅರ್ಹವಾದ ಪ್ರವೇಶ ಪತ್ರಗಳನ್ನು ಸೂಕ್ತ ತಿದ್ದುಪಡಿ ಮಾಡಿ, ಪರಿಷ್ಕೃತ ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದಲ್ಲಿ ಮಾಡಲಾಗುವುದು.

.




ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು