ಈ ಬಾರಿ SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ, ಆದೇಶ ಹೊರಡಿಸಿದ ಶಿಕ್ಷಣ ಇಲಾಖೆ:

ಈ ಬಾರಿ SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ, ಆದೇಶ ಹೊರಡಿಸಿದ ಶಿಕ್ಷಣ ಇಲಾಖೆ:


ಇದೀಗ SSLC ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಯ ವೇಳೆ ಕೆಲವು ನಿಯಮಗಳನ್ನು ಶಿಕ್ಷಣ ಇಲಾಖೆ ಹೊರಡಿಸಿದೆ. ಪರೀಕ್ಷಾ ಕೊಠಡಿಯಲ್ಲಿ ಭದ್ರತೆಯ ದೃಷ್ಟಿಯಿಂದ ಅನೇಕ ನಿಯಮಗಳನ್ನು ಜಾರಿಗೆ ತಂದಿದೆ.

ಎಸ್ ಎಸ್ ಎಲ್ ಸಿ ನಿಯಮ ಪಾಲನೆ ಕಡ್ಡಾಯ:

ಎಸ್ ಎಸ್ ಎಲ್ ಸಿ ಪರೀಕ್ಷೆ ವೇಳೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಹೊರಡಿಸಿದೆ, ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಹೊರಡಿಸಿ, ಪರೀಕ್ಷಾ ಕೇಂದ್ರಗಳಿಗೆ ಅಗತ್ಯವಿರುವ ಪೊಲೀಸ್ ನೇಮಕ ಮಾಡಬೇಕು.
ಪರೀಕ್ಷೆಗೆ ಸಂಬಂಧಿಸಿದವರ ಹೊರತು ಅನ್ಯರಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶವಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಫೋನ್, ಎಲೆಕ್ಟ್ರಿಕ್ ವಸ್ತುಗಳು, ಕಾಪಿ ಚೀಟಿ ತರುವಂತಿಲ್ಲ. ವಿದ್ಯಾರ್ಥಿಗಳಿಗೆ  ಸೂಕ್ತ ಆಸನದ ಜೊತೆಗೆ ಗಡಿಯಾರ ವ್ಯವಸ್ಥೆಯನ್ನು ಪ್ರತಿ ಕೊಠಡಿಯಲ್ಲೂ ಒದಗಿಸಬೇಕು.

ಮಾರ್ಚ್ 31 ರಿಂದ SSLC ಅಂತಿಮ ಪರೀಕ್ಷೆ:

ಈ ಬಾರಿ SSLC ವಿದ್ಯಾರ್ಥಿಗಳ ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆಯ ಪ್ರಶ್ನೆಗಳನ್ನು ನೀಡಲಾಗುತ್ತಿದೆ. SSLC ವಿದ್ಯಾರ್ಥಿಗಳ ಪರೀಕ್ಷೆಯ ಸಂದರ್ಭದಲ್ಲಿ ಎಲ್ಲ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.

BEO ನೇತೃತ್ವದ ಸಮಿತಿಯ ಸಮ್ಮುಖದಲ್ಲಿ ಆಯಾ ತಾಲೂಕು ಖಜಾನೆಗಳಿಂದ ಪರೀಕ್ಷೆ ಕೇಂದ್ರಗಳಿಗೆ ತಲುಪಿಸಬೇಕು. ಇನ್ನು ಪ್ರಶ್ನೆ ಪತ್ರಿಕೆಗಳಿಗೆ ಯಾವುದೇ ರೀತಿಯ ಹನಿ ಉಂಟಾಗಬಾರದು. ಖಜಾನೆಗಳಿಗೆ ಸ್ಟ್ರಾಂಗ್ ರೂಮ್ ತೆರೆಯಬೇಕು.



ಕರ್ನಾಟಕ ವಿಧಾನಸಭೆ ಚುನಾವಣೆ 2023 :

ಸಮವಸ್ತ್ರ ಕಡ್ಡಾಯ, ಹಿಜಾಬ್ ಧರಿಸುವಂತಿಲ್ಲ:

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು. ಯಾವುದೇ ಕಾರಣಕ್ಕೂ ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಯನ್ನು ಪ್ರವೇಶಿಸುವಂತಿಲ್ಲ. ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ.
     ಹಾಗೆಯೆ KSRTC, BMTC ಬಸ್ ಗಳಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಂಚರಿಸುವ ಅವಕಾಶ ನೀಡಿದೆ. SSLC ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಕೇಂದ್ರಕ್ಕೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತವಾಗಿ ಪ್ರಯಾಣವನ್ನು ಅನುಮತಿಸುವಂತೆ ನಿಗಮದ ಎಲ್ಲ ಚಾಲಕ ನಿರ್ವಾಹಕರಿಗೆ ಸೂಚಿಸಲಾಗಿದೆ.





ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ




@@@@@@@@@@@@@@@@@@@@@@@@@


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು