RTE ಮೂಲಕ ಪ್ರವೇಶಾತಿಗೆ ಅರ್ಜಿ ದಿನಾಂಕ ವಿಸ್ತರಣೆ..... ಎಲ್ಲಿಯವರೆಗೆ? ಇಲ್ಲಿದೆ ಮಾಹಿತಿ ನೋಡಿ.....
ಕರ್ನಾಟಕ ಸ್ವರ ಸುಗ್ಗಿ-2023 ಕನ್ನಡಿಗರ ಗಾನಾಭಿಷೇಕ "ಸಂಗೀತಕ್ಕೆ ಕರುಣೆಯಿಲ್ಲ, ಅದು ಬೇಡುವುದು ಸಾಧನೆಯನ್ನು ಮಾತ್ರ"
ಶಿಕ್ಷಣ ಹಕ್ಕು ಕಾಯ್ದೆಯಡಿಯಲ್ಲಿ ಪ್ರವೇಶಾತಿ ಪಡೆಯಲು ಬಯಸುವ ವಿದ್ಯಾರ್ಥಿಗಳ ಪೋಷಕರಿಗೆ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಿದೆ,
ಹೈಲೈಟ್ಸ್
👉 ಆರ್ ಟಿ ಇ ಮೂಲಕ ಪ್ರವೇಶಾತಿ 2023-24
👉 ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ.
👉 ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಮೇ 10 ರವರೆಗೆ ಅವಕಾಶ.
2023-24 ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯಡಿಯಲ್ಲಿ ( RTE Admission 2023-24 ) ಮೂಲಕ ಉಚಿತವಾಗಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿತ್ತು. ಪ್ರವೇಶಾತಿ ಬಯಸಿ ಅರ್ಜಿ ಸಲ್ಲಿಸಲು ಏಪ್ರಿಲ್ 20, 2023 ರ ಅವಕಾಶ ನೀಡಲಾಗಿತ್ತು. ಈಗ ಅರ್ಜಿ ದಿನಾಂಕವನ್ನು ವಿಸ್ತರಿಸಲಾಗಿದೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಶಾಲಾ ಶಿಕ್ಷಣ ಇಲಾಖೆ, ಆರ್ ಟಿ ಇ ಅಡಿ ದಾಖಲಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 20-04-2023 ಎಂದು ನಿಗದಿಪಡಿಸಲಾಗಿತ್ತು. ಹೆಚ್ಚು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಅರ್ಜಿ ಸಲ್ಲಿಸುವ ಅವಧಿಯ ದಿನಾಂಕವನ್ನು 10-05-2023 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.
ಆರ್ ಟಿ ಇ ಮೂಲಕ ಪ್ರವೇಶಕ್ಕೆ ಅರ್ಜಿ ಹಾಕಲು ಪಾಲಕರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗಳಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಉಚಿತವಾಗಿ ಅಥವಾ ಸರ್ಕಾರದ ಪಾವತಿ ಕೇಂದ್ರಗಳಾದ ಬೆಂಗಳೂರು ನಗರದಲ್ಲಿ, ಬೆಂಗಳೂರು - ಒನ್, ಇತರೆ ನಗರ ಪ್ರದೇಶಗಳಲ್ಲಿ ಕರ್ನಾಟಕ ಒನ್, ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಅಟಲ್ ಜಿ ಜನಸ್ನೇಹಿ ಕೇಂದ್ರಗಳ ಮೂಲಕ ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕರ್ನಾಟಕ ರಾಜ್ಯದಲ್ಲಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳು ಎಲ್ಲಿ ಇರುವುದಿಲ್ಲವೋ ಅಥವಾ ವಿದ್ಯಾರ್ಥಿಗಳ ಪ್ರದೇಶದಲ್ಲಿ ಇರುವ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆ ಮೂಲಕ ಉಚಿತವಾಗಿ ಪ್ರವೇಶ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ಉಚಿತ ಸೀಟಿಗಾಗಿ ಪ್ರವೇಶ ಕೋರುವ ಮಗು ಮತ್ತು ತಂದೆ ಅಥವಾ ತಾಯಿಯ ಧೃಡೀಕರಣ ಪ್ರಮಾಣ ಪತ್ರ ಅಗತ್ಯವಾಗಿ ಬೇಕು.
ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಯಿಂದ ನೈಜತೆ ತಾಳೆ ಆಗದ ಅಪೂರ್ಣ ಅಥವಾ ಕ್ರಮಬದ್ಧವಲ್ಲದ ಅರ್ಜಿಗಳ ತಂದೆ / ತಾಯಿ ಪೋಷಕರ ಮೊಬೈಲಿಗೆ ದೋಷಗಳನ್ನು ಸರಿಪಡಿಸಲು ಎಸ್ ಎಂ ಎಸ್ ಕಳುಹಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪೋಷಕರು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ವೆಬ್ ಸೈಟ್.
ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ
@@@@@@@@@@@@@@@@@@@@@@@@@
Tags
Education