ಮೇ 10 ಸಾರ್ವತ್ರಿಕ ರಜೆ ಘೋಷಣೆ ; ಯಾರಿಗೆಲ್ಲ ಅನ್ವಯ ಇಲ್ಲ ಈ ರಜೆ ತಿಳಿಯಬೇಕೇ ಇಲ್ಲಿದೆ ನೋಡಿ ಇದರ ಕುರಿತಾದ ಮಾಹಿತಿ 👇👇👇
ಮೇ 2ರ ಮಂಗಳವಾರ ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ -1, ಸಿಆಸು ಇಲಾಖೆ (ರಾಜ್ಯ ಶಿಷ್ಟಾಚಾರ್ಯ) ಅಪೇಕ್ಷಾ ಸತೀಶ್ ಪವರ್ ಈ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ. ಆದರೆ ಈ ಸಾರ್ವತ್ರಿಕ ರಜೆ ಹಲವರಿಗೆ ಅನ್ವಯವಾಗುವುದಿಲ್ಲ.
ಕರ್ನಾಟಕ ವಿಧಾನಸಭೆ ಚುನಾವಣೆ 2023 ರ ಮತದಾನಕ್ಕೆ 7 ದಿನ ಬಾಕಿ ಇದೆ. ಮೇ 10ರ ಬುಧವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಮತದಾನದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ಸಾರ್ವತ್ರಿಕ ರಜೆ ಘೋಷಣೆ ಮಾಡಿದೆ. ಈ ಕುರಿತು ಕರ್ನಾಟಕ ಸರ್ಕಾರ ಎರಡು ಅಧಿಸೂಚನೆ ಪ್ರಕಟಿಸಲಾಗಿದೆ.
ಅಧಿಸೂಚನೆಯಲ್ಲಿ ದಿನಾಂಕ 10/05/2023ರ ವಿಧಾನಸಭಾ ಚುನಾವಣೆಯು ನಡೆಯಲಿದ್ದು ಮತದಾರರು ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರೀ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಸರ್ಕಾರವು ಆಯಾ ಚುನಾವಣಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುವ ದಿನದಂದು ಸಾರ್ವತ್ರಿಕ ರಜೆಯನ್ನು ಸರ್ಕಾರವು ಘೋಷಿಸಿದೆ ಎಂದು ಹೇಳಿದೆ.
ಆದರೆ ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಈ ಚುನಾವಣೆ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರೀ ನೌಕರರುಗಳು ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಳ್ಳುವ ನಿಯೋಜನೆಗೊಳ್ಳುವ ಅಧಿಕಾರಿಗಳು/ಸಿಬ್ಬಂದಿ ಮತ್ತು ಸೇವಾ ಮತದಾರರು ಮೇ 2 ರಿಂದ 4ರ ತನಕ ಅಂಚೆ ಮತದಾನ ಮಾಡಲು ಈಗಾಗಲೇ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ.
10/05/2023ರಂದು ಕ್ಷೇತ್ರಗಳಲ್ಲಿ ಮತದಾನವು ಸುಸೂತ್ರವಾಗಿ ನಡೆಯಲು ಅನುಕೂಲವಾಗುವಂತೆ ಮತದಾನ ನಡೆಯುವ ಮತಗಟ್ಟೆಯನ್ನು ಸರ್ಕಾರೀ ಕಚೇರಿಗಳಲ್ಲಿ ಹಾಗೂ ಸರ್ಕಾರೀ ಶಾಲೆಗಳಲ್ಲಿ ಸ್ಥಾಪಿಸಿದಲ್ಲಿ ಅಂತಹ ಕಚೇರಿ ಹಾಗೂ ಶಾಲೆಗಳಿಗೆ ದಿನಾಂಕ 09/05/2023 ರ ಮಂಗಳವಾರದಂದು (ಪೂರ್ವ ತಯಾರಿಯಾಗಿ) ಹಾಗೂ ಮತ ಎಣಿಕೆ ನಡೆಯುವ ದಿನಾಂಕ 13/05/2023 ರಂದು ಮತ ಎಣಿಕೆ ನಡೆಯುವ ಕೇಂದ್ರಗಳಲ್ಲಿ ಮಾತ್ರ ರಜೆ ಘೋಷಿಸುವ ಅವಶ್ಯಕತೆ ಇದ್ದಲ್ಲಿ ಸಂಬಂಧಪಟ್ಟ ಚುನಾವಣಾಧಿಕಾರಿಗಳು ಕ್ರಮ ತೆಗೆದುಕೊಳ್ಳತಕ್ಕದ್ದು ಎಂದು ಅಧಿಸೂಚನೆ ತಿಳಿಸಿದೆ.
ಸಾರ್ವತ್ರಿಕ ರಜೆ ಅಧಿಸೂಚನೆ 2: