ನಾಡಿದ್ದು ಫಲಿತಾಂಶ ! ಬೆಳಿಗ್ಗೆ 8 ರಿಂದ ಮತಗಳ ಎಣಿಕೆ 2615 ಜನರ ಭವಿಷ್ಯ ನಿರ್ಧಾರ

ನಾಡಿದ್ದು ಫಲಿತಾಂಶ !




ಬೆಳಿಗ್ಗೆ 8 ರಿಂದ ಮತಗಳ ಎಣಿಕೆ 2615 ಜನರ ಭವಿಷ್ಯ ನಿರ್ಧಾರ 




ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬುಧವಾರ ಶಾಂತಿಯುತ ಮತದಾನ ನಡೆದಿದ್ದು, ಶನಿವಾರ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿ ಫಲಿತಾಂಶ ಹೊರಬೀಳಲಿದೆ.






ಕಳೆದೊಂದು ತಿಂಗಳಿನಿಂದ ನಡೆದ ವಾಕ್ಸಮರ, ಟೀಕೆ, ಪ್ರತ್ಯುತ್ತರ ಸೇರಿದಂತೆ ಜಿದ್ದಾಜಿದ್ದಿ ಪೈಪೋಟಿಗೆ ಬುಧವಾರ ತೆರೆಬಿದ್ದಿರುವ ಹಿನ್ನಲೆಯಲ್ಲಿ ಅಭ್ಯರ್ಥಿಗಳು ಇನ್ನೆರಡು ದಿನ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಲಿದ್ದಾರೆ. ಇದಕ್ಕೆಲ್ಲ ಶನಿವಾರ ಮಧ್ಯಾಹ್ನದ ವೇಳೆಗೆ ಫಲಿತಾಂಶವೇ ಉತ್ತರ ಹೇಳಲಿದೆ. 

ಚುನಾವಣಾ ಅಖಾಡಕ್ಕಿಳಿದಿರುವ 2615 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಮತದಾರರು ಬರೆದಿದ್ದು, ಶನಿವಾರ ಮಧ್ಯಾಹ್ನದ ವೇಳೆಗೆ ಕಣದಲ್ಲಿರುವ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಪ್ರಕಟವಾಗಲಿದೆ.

ರಾಜ್ಯದ 37,777 ಸ್ಥಳಗಳಲ್ಲಿ ಸ್ಥಾಪನೆಯಾಗಿರುವ ಒಟ್ಟು 58545 ಮತಗಟ್ಟೆಗಳಲ್ಲಿ ಮತದಾನವಾಗಿದೆ. ಬಿಜೆಪಿಯಿಂದ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಷ, ರಾಷ್ಟೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ, ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕಟೀಲ್, ಕಾಂಗ್ರೆಸ್ ನಿಂದ ರಾಷ್ಟೀಯ ಅಧ್ಯಕ್ಷ ಖರ್ಗೆ, ರಾಷ್ಟೀಯ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್, ಜೆ ಡಿ ಎಸ್ ನಿಂದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೊದಲಾದವರು ಭರ್ಜರಿ ಪ್ರಚಾರ ನಡೆಸಿದ್ದರು. ಅವರ ಪ್ರಯತ್ನದ ಫಲ ಶನಿವಾರ ಫಲಿತಾಂಶದ ಮೂಲಕ ಹೊರಬೀಳಲಿದೆ.

ಅಖಾಡದಲ್ಲಿರುವ ೨೬೧೫ ಅಭ್ಯರ್ಥಿಗಳು :

2615 ಅಭ್ಯರ್ಥಿಗಳಲ್ಲಿ 2830 ಅಭ್ಯರ್ಥಿಗಳು ಪುರುಷರು, 148 ಅಭ್ಯರ್ಥಿಗಳು ಮಹಿಳೆಯರು ಮತ್ತು ಒಬ್ಬರು ತೃತೀಯ ಲಿಂಗಿಯಾಗಿದ್ದರೆ. ಬಿಜೆಪಿಯಿಂದ 224 ಕ್ಷೇತ್ರದಲ್ಲಿ ಅಭ್ಯರ್ಥಿಗಳು ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ 223 ಕ್ಷೇತ್ರದಲ್ಲಿ ಹುರಿಯಾಳುಗಳಿದ್ದಾರೆ. ಜೆಡಿಎಸ್ ನಿಂದ 209 ಕ್ಷೇತ್ರದಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಎಎಪಿಯಿಂದ 133, ಎನ್ ಪಿ ಪಿ 2 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನೋಂದಾಯಿತ ಮಾನ್ಯತೆ ಪಡೆಯದ ಪಕ್ಷದಿಂದ 254 ಮತ್ತು ಪಕ್ಷೇತರ 918 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಇವರೆಲ್ಲರ ರಾಜಕೀಯ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. 




ಮತಎಣಿಕೆಯು ಆಯಾ ಜಿಲ್ಲಾ ಕೇಂದ್ರದಲ್ಲಿ ಬಿಗಿ ಭದ್ರತೆಯಲ್ಲಿ ನಡೆಯಲಿದೆ. ಈಗಾಗಲೇ ಎಲ್ಲಾ ಮತಯಂತ್ರಗಳನ್ನು ಸಂಬಂಧಪಟ್ಟ ಜಿಲ್ಲೆಯ ಭದ್ರತಾ ಕೊಠಡಿಯಲ್ಲಿ ಭದ್ರವಾಗಿಡಲಾಗಿದೆ. ಶನಿವಾರ ಬೆಳಗ್ಗೆ ಭದ್ರತಾ ಕೊಠಡಿಯಿಂದ ಮತಯಂತ್ರಗಳನ್ನು ತಂದು ಎಣಿಕೆ ಮಾಡಲಾಗುತ್ತದೆ. ಮತಯಂತ್ರ ಇಟ್ಟಿರುವ ಭದ್ರತಾ ಕೊಠಡಿಗೆ ಎರಡು ದಿನಗಳ ಪೊಲೀಸ್ ಕಣ್ಗಾವಲು ಇಡಲಾಗಿದೆ.






ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ




@@@@@@@@@@@@@@@@@@@@@@@@@








ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು