ವಿಶ್ವದ ಅತಿದೊಡ್ಡ ಮೈದಾನದಲ್ಲಿ ಭಾರತ-ಪಾಕ್ ವಿಶ್ವಕಪ್ ಫೈಟ್ ..!!

ವಿಶ್ವದ ಅತಿದೊಡ್ಡ ಮೈದಾನದಲ್ಲಿ ಭಾರತ-ಪಾಕ್ ವಿಶ್ವಕಪ್ ಫೈಟ್ ..!!




ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಜನ-ಮನ-ಮತ ಸಮೀಕ್ಷೆ ಫಲಿತಾಂಶ

         ODI World Cup  2023 : ಈ ವರ್ಷ ಏಕದಿನ ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಪಂದ್ಯವು ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.


 ಈ ವರ್ಷ ಏಕದಿನ ವಿಶ್ವಕಪ್ ನಡೆಯಲಿದ್ದು, ಇದರ ಆಯೋಜನೆಯ ಹಕ್ಕನ್ನು ಭಾರತ ಪಡೆದುಕೊಂಡಿರುವುದು ಈ ಮಹಾ ಸಮರಕ್ಕೆ ಮತ್ತಷ್ಟು ಬೆರಗು ತಂದಿದೆ. ಇದೆ ಅಕ್ಟೊಬರ್  ಹಾಗೂ ನವೆಂಬರ್ ತಿಂಗಳಲ್ಲಿ ವಿಶ್ವಕಪ್ ನಡೆಯಲಿದೆ ಎಂದು ಹೇಳಲಾಗುತ್ತಿದೆ.  ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲವಾದರೂ ಮೂಲಗಳ ಪ್ರಕಾರ, ಏಕದಿನ ವಿಶ್ವಕಪ್ ಅಕ್ಟೊಬರ್ 5 ರಿಂದ ಪ್ರಾರಂಭವಾಗಲಿದ್ದು, ನವೆಂಬರ್ 19 ರಂದು ಫೈನಲ್ ಪಂದ್ಯ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಆದರೆ ಈ  ನಡುವೆ ವಿಶ್ವಕಪ್ ಪಂದ್ಯ ಯಾವ ಮೈದಾನದಲ್ಲಿ ನಡೆಯಲಿದೆ ಎಂಬುದು ಎಲ್ಲರಲ್ಲಿ ಕುತೂಹಲ ಹೆಚ್ಚಿಸಿದೆ. ಏಕೆಂದರೆ ಈ ಉಭಯ ತಂಡಗಳು ಕೇವಲ ಐಸಿಸಿ ಇವೆಂಟ್ ನಲ್ಲಿ ಮಾತ್ರ ಮುಖಾಮುಖಿಯಾಗುತ್ತವೆ. ಹೀಗಾಗಿ ಈ ಮಾದಗಜಗಳ ಕಾಳಗವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಕ್ರಿಕೆಟ್ ಅಭಿಮಾನಾಯಿಗಳು ಕಾತುರದಿಂದ ಕಾಯಿತ್ತಿದ್ದಾರೆ. 

ವಾಸ್ತವವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಮುಗಿದ ನಂತರ ಬಿಸಿಸಿಐ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಈ ವರ್ಷ ಏಕದಿಂದ ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಪಂದ್ಯವು ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಭಾರತ-ಪಾಕಿಸ್ತಾನ ಪಂದ್ಯ ವೀಕ್ಷಿಸಲು ವಿದೇಶಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಾರೆ. ನರೇಂದ್ರ ಮೋದಿ ಸ್ಟೇಡಿಯಂ ವಿಶ್ವದ ಅತಿ ದೊಡ್ಡ  ಕ್ರೀಡಾಂಗಣವಾಗಿದೆ. ಕ್ರೀಡಾಂಗಣವು 1 ಲಕ್ಷ ಪ್ರೇಕ್ಷಕರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿದೆ. ಹೀಗಾಗಿ ಬಿಸಿಸಿಐ ಭಾರತ-ಪಾಕಿಸ್ತಾನ ಪಂದ್ಯಕ್ಕೆ ನರೇಂದ್ರ ಮೋದಿ ಕ್ರೀಡಾಂಗದವನ್ನು ಆಯ್ಕೆ ಮಾಡಿದೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.


ಇಂದು SSLC ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ....!


ವಿಶ್ವಕಪ್ ನಲ್ಲಿ ಒಟ್ಟು ಪಂದ್ಯಗಳು ನಡೆಯಲಿವೆ. ಈ ಬಾರಿಯ ವಿಶ್ವಕಪ್ 46 ದಿನಗಳ ಕಾಲ ನಡೆಯಲಿದೆ. ಏಳು ಸ್ಥಳಗಳಲ್ಲಿ ಲೀಗ್ ಪಂದ್ಯಗಳು ನಡೆಯಲಿವೆ. ಅಹಮದಾಬಾದ್ ಹೊರತುಪಡಿಸಿ, ಈ ವಿಶ್ವಕಪ್ ನ ಪಂದ್ಯಗಳನ್ನು ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕತ್ತಾ,  ಲಕ್ನೋ,ಇಂದೋರ್, ರಾಜ್ ಕೋಟ್, ಮತ್ತು ಮುಂಬೈ ನಲ್ಲಿ  ಆಡಿಸಲಾಗುತ್ತದ ಎಂದು ವರದಿಯಾಗಿದೆ. 

ಐಸಿಸಿಯ ಇಡೀ ಟರ್ನ್ ಭಾರತದಲ್ಲಿ ನಡೆಯುತ್ತಿರುವುದು ಇದೆ ಮೊದಲು. 1987 ರಲ್ಲಿ, ಭಾರತ ಮತ್ತು ಪಾಕಿಸ್ತಾನ ಎರಡು ಒಟ್ಟಿಗೆ ಆತಿಥ್ಯ ವಹಿಸಿದ್ದವು. 1996 ರಲ್ಲಿ ಭಾರತ, ಪಾಕಿಸ್ತಾನ ಮತ್ತು ಶ್ರೀಲಂಕಾ ಜಂಟಿ ಆತಿಥ್ಯ ವಹಿಸಿದ್ದವು. 2011 ರ ವಿಶ್ವಕಪ್ ಅನ್ನು ಭಾರತ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಆಯೋಜಿಸಿತ್ತು.





ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ



@@@@@@@@@@@@@@@@@@@@@@@@@






ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು