ಈಗ ಹೊಸ ಸರ್ಕಾರ ಬಂಡ ಬೆನ್ನಲ್ಲಿಯೇ ಜಿಲ್ಲಾ ಪಂಚಾಯ್ತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ಸಿದ್ಧತೆ ನಡೆಸಿದ್ದು ಮತದಾರರ ಪಟ್ಟಿ, ಮತ ಕೇಂದ್ರಗಳ ಸಿದ್ಧತೆಗೆ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳಿಗೆ ಸೂಚಿಸಿದೆ. ಈಗಾಗಲೇ ಚುನಾವಣೆ ವಿಳಂಬ ಆಗಿರುವುದಕ್ಕೆ ರಾಜ್ಯ ಸರ್ಕಾರ ಕರ್ನಾಟಕ ಹೈ ಕೋರ್ಟ್ ಗೆ 5 ಲಕ್ಷ ರೂ ದಂಡವನ್ನು ಕೂಡ ಪಾವತಿಸಿದೆ. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತಿ ಕ್ಷೇತ್ರಗಳ ಪುನರ್ ವಿಂಗಡಣೆ, ಮೀಸಲು ನಿಗದಿ ಪ್ರಕ್ರಿಯೆಗಳು ಮುಗಿದಿವೆ.
ಮತದಾರರ ಗುರುತಿಗೆ ಆಯೋಗ ಸೂಚನೆ
ಸುಮವಾರದಿಂದ (ಮೇ 29) ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಕ್ಷೇತ್ರಗಳ ಮತದಾರರನ್ನು ಗುರುತಿಸುವ ಕಾರ್ಯ ಪ್ರಾರಂಭಿಸುವಂತೆ ಚುನಾವಣಾ ಆಯೋಗ ಸಂಬಂಧಪಟ್ಟವರಿಗೆ ಸೂಚನೆ ಕೊಟ್ಟಿದೆ.
ಹಾಗಾಗಿ ಎರಡು ವರ್ಷಗಳಿಂದ ಜನಪ್ರತಿನಿಧಿಗಳಿಲ್ಲದೆ ಅಧಿಕಾರಿಗಳಿಂದ ನಡೆಯುತ್ತಿರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಮತದಾರರ ಪಟ್ಟಿ ಸಿದ್ಧತೆ ಮತ್ತು ಮತದಾನ ಕೇಂದ್ರಗಳ ಸ್ಥಾಪನೆ ಮಾಡುವ ಸಂಬಂಧ ಕಾರ್ಯಪ್ರವೃತ್ತರಾಗುವಂತೆ ತಹಶೀಲ್ದಾರ್ ಮತ್ತು ಉಪವಿಭಾಗಾಧಿಕಾರಿಗಳಿಗೆ ಆಯೋಗ ಸೂಚನೆ ನೀಡಿದೆ.
ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತಿಗಳ ಅವಧಿ ಮುಗಿದು ಎರಡು ವರ್ಷಗಳಾಗಿವೆ. 2021 ರ ಏಪ್ರಿಲ್ ನಲ್ಲಿಯೇ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆ ನಡೆಯಬೇಕಿತ್ತು. ಆದರೆ, ಅವಧಿ ಮುಗಿದಿದ್ದರೂ ಚುನಾವಣೆ ಇನ್ನೂ ನಡೆದಿಲ್ಲ. ವಿವಿಧ ಕಾರಣಗಳಿಂದ ಚುನಾವಣೆಯನ್ನು ರಾಜ್ಯ ಸರ್ಕಾರ ಮುಂಡುತ್ತಲೇ ಬಂದಿದೆ.
ವಿಧಾನಸಭಾ ಚುನಾವಣೆ ಮುಕ್ತಾಯದ ಬಳಿಕ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸುತ್ತೇವೆ ಎಂದು ಹೈಕೋರ್ಟ್ ಗೆ ಸರ್ಕಾರ ತಿಳಿಸಿತ್ತು. ಆದ್ದರಿಂದ ಇದೆ ವರ್ಷದ ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಿನಲ್ಲಿಯೇ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆ ನಡೆಯುವ ಸಾಧ್ಯತೆ ನಿಚ್ಚಳವಾಗಿದೆ.
ಮತದಾರರ ಪಟ್ಟಿ ಸಿದ್ಧಪಡಿಸುವ ಕಾರ್ಯ ಜೂನ್ ತಿಂಗಳಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ
@@@@@@@@@@@@@@@@@@@@@@@@@