ವಿದ್ಯಾಧನ್ ವಿದ್ಯಾರ್ಥಿವೇತನ ಅರ್ಜಿ ಆಹ್ವಾನ ... 10 ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ 10 ಸಾವಿರ ಸ್ಕಾಲರ್ಶಿಪ್ !!
ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣಕ್ಕೆ ಬೆಂಬಲಿಸಲು ಸರೋಜಿನಿ ದಾಮೋದರನ್ ಫೌಂಡೇಶನ್ 'ವಿದ್ಯಾಧನ್' ಕಾರ್ಯಕ್ರಮದಡಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿವೇತನಕ್ಕೆ 10 ನೇ ತರಗತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣಕ್ಕೆ ಬೆಂಬಲಿಸಲು ಸರೋಜಿನಿ ದಾಮೋದರನ್ ಫೌಂಡೇಶನ್ 'ವಿದ್ಯಾಧನ್' ಕಾರ್ಯಕ್ರಮದಡಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು, ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಆವ್ಹಾನಿಸಲಾಗಿದೆ.
ಈ ವಿದ್ಯಾರ್ಥಿವೇತನಕ್ಕೆ 10ನೇ ತರಗತಿಯಲ್ಲಿ ಉತ್ತೀರ್ಣರಾದ, ೪೦% ರಷ್ಟು ಅಂಗವೈಕಲ್ಯ ಹೊಂದಿರುವ ವಿದ್ಯಾರ್ಥಿಗಳು ಅರ್ಜಿ ಹೊಂದಿರುವ ವಿದಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಮೇಲೆ ವಿದ್ಯಾರ್ಥಿಗಳನ್ನು ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ವಿದ್ಯಾರ್ಥಿವೇತನಕ್ಕೆ ಆಯ್ಕೆ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ ಪದವಿಯವರೆಗೂ ವಿದ್ಯಾರ್ಥಿವೇತನವನ್ನು ಮುಂದುವರಿಸಲಾಗುವುದು.
ಯಾರು ಅರ್ಜಿ ಸಲ್ಲಿಸಬಹುದು ?
1. ಮಾನ್ಯತೆ ಪಡೆದ ಶಾಲೆಗಳಿಂದ SSLC / 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
2. 10ನೇ ತರಗತಿ ಅಥವಾ SSLC ಪರೀಕ್ಷೆಯಲ್ಲಿ ಶೇಕಡಾ 90 ರಷ್ಟು ಅಂಕಗಳನ್ನು ಪಡೆದಿರಬೇಕು.
3. ಎಲ್ಲಾ ಮೂಲಗಳಿಂದ ಕುಟುಂಬದ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು. ವಿಕಲಚೇತನ ವಿದ್ಯಾರ್ಥಿಗಳಿಗೆ 75% ರಷ್ಟು ಅಂಕಪಡೆದಿರಬೇಕು.
ಅಗತ್ಯ ದಾಖಲೆಗಳು :
👉ಇತ್ತೀಚಿನ ಭಾವಚಿತ್ರ
👉12ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಯ ಅಂಕ ಪಟ್ಟಿ
👉ಆದಾಯ ಪ್ರಮಾಣ ಪತ್ರ
👉ವಿಕಲಚೇತನ ದೃಢೀಕರಣ ಪತ್ರ
ಆಯ್ಕೆ ಪ್ರಕ್ರಿಯೆ :
√ ಸರೋಜಿನಿ ದಾಮೋಧರನ್ ಫೌಂಡೇಶನ್ ವಿದ್ಯಾರ್ಥಿಗಳು ಒದಗಿಸಿದ ಶೈಕ್ಷಣಿಕ ಸಾಧನೆ ಹಾಗೂ ಅರ್ಜಿಯ ಮಾಹಿತಿಯನ್ನು ಆಧರಿಸಿ ಆಯ್ಕೆ ಪ್ರಕ್ರಿಯೆ ಮಾಡಲಾಗುತ್ತದೆ.
√ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪರೀಕ್ಷೆ ಮತ್ತು ಸಂದರ್ಶನ ನಡೆಸಲಾಗುತ್ತದೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಯೋಜನಗಳು :
√ ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಕೋರ್ಸ್ ಗೆ ಅನುಗುಣವಾಗಿ ವಾರ್ಷಿಕ ರೂ.10,000 ದಿಂದ ರೂ. 60,000 ವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
√ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಇ-ಮೇಲ್ ಐಡಿ ಮೂಲಕ ವಿದ್ಯಾಧನ್ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
👇👇👇👇
Tags
Scholarship