ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ದಿನಾಂಕ 15-05-2023ರ ವರೆಗೆ ಮುಂದೂಡಲಾಗಿದೆ.

ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ದಿನಾಂಕ 15-07-2023ರ ವರೆಗೆ ಮುಂದೂಡಲಾಗಿದೆ.


ವಿದ್ಯಾರ್ಥಿಗಳಿಗೆ ಸಂತಸದ ಸುದ್ಧಿ !!




ವಿದ್ಯಾರ್ಥಿ ಉಚಿತ / ರಿಯಾಯಿತಿ ಬಸ್ ಪಾಸ್ ಮಾನ್ಯತೆ ಬಗ್ಗೆ ಸೂಕ್ತಧಿಕಾರಿಗಳ ಆದೇಶ ದಿನಾಂಕ : 29-05-2023

              ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರತಿ 2023 - 24 ನೇ ಸಾಲಿನ ವಿದ್ಯಾರ್ಥಿ ಉಚಿತ/ ರಿಯಾಯಿತಿ ಬಸ್ ಪಾಸ್ ಗಳನ್ನು ಇಡಿಸಿಎಸ್ ಇಲಾಖೆಯ ಸೇವಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಯಾಂತ್ರಿಕೃತವಾಗಿ ವಿತರಣೆ ಮಾಡಲು ಕ್ರಮವಹಿಸಲಾಗುತ್ತಿದ್ದು, ಇಡಿಸಿಎಸ್ ಇಲಾಖೆಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಕೆಗೆ ಹಾಗೂ ಪಾಸು ಹಿಂಪಡೆಯಲು ಕಾಲಾವಕಾಶ ನೀಡಬೇಕಿರುತ್ತದೆ. ಜೊತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ಕ್ರಮ ವಹಿಸಬೇಕಿರುತ್ತದೆ. 



ಈ ಸಂಬಂಧ ವಿದ್ಯಾರ್ಥಿಗಳಿಗೆ ದಿನಾಂಕ 15-07-2023  ರವರೆಗೆ ಈ ಕೆಳಕಂಡ ದಾಖಲೆಗಳನ್ನು ನಿಗಮದ ಬಸ್ಸುಗಳಲ್ಲಿ ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. 

1. ಪ್ರಸಕ್ತ ವರ್ಷದಲ್ಲಿ ಶಾಲಾ / ಕಾಲೇಜುಗಳಿಗೆ ದಾಖಲಾಗಿರುವ ಸಂಬಂಧದ ಶುಲ್ಕ ಪಾವತಿ ರಸೀದಿ ಅಥವಾ 

2. 2022-23 ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ 

    ಈ ಬಗ್ಗೆ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಅಗತ್ಯ ಮಾಹಿತಿ ನೀಡಿ ಕ್ರಮ ತೆಗೆದುಕೊಳ್ಳಲು ಹಾಗೂ ಈ ಸಂಬಂಧ ಅನುಸರಣಾ ವರದಿಯನ್ನು ಕಳುಹಿಸಲು ಸೂಚಿಸಲಾಗಿದೆ.



 

ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಾಟ್ಸಪ್ಪ್ ಗ್ರೂಪ್ ಸೇರ್ಪಡೆಗೊಳ್ಳಿ



@@@@@@@@@@@@@@@@@@@@@@@@@










ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು