ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ ಈ ಕುರಿತಾದ ಮಾಹಿತಿ ಇಲ್ಲಿದೆ ನೋಡಿ:

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ ಈ ಕುರಿತಾದ ಮಾಹಿತಿ ಇಲ್ಲಿದೆ ನೋಡಿ: 




ಹೊಸದಿಗಂತ ಡಿಜಿಟಲ್ ಡೆಸ್ಕ್ :

ಜುಲೈ 1 ರಿಂದ ಜಾರಿಯಾಗಲಿರುವ ಸರ್ಕಾರದ ಎರಡನೇ ಗ್ಯಾರಂಟಿ ಗೃಹಾಜ್ಯೋತಿ ಯೋಜನೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಕೆಲ ಬದಲಾವಣೆಯಿಂದ ಅರ್ಜಿ ಸಲ್ಲಿಕೆಗೆ ವಿಳಂಬವಾಗಿತ್ತು. ಸದ್ಯ ಎಲ್ಲವು ಸರಿಯಾಗಿದ್ದು, ಹಾಗಾಗಿ ಭಾನುವಾರದಿಂದ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.



ಗೃಹಾಜ್ಯೋತಿಗೆ ಅರ್ಜಿ ಸಲ್ಲಿಸುವುದು ಹೇಗೆ ?

ಗೃಹಾಜ್ಯೋತಿ ಯೋಜನೆ ಅಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. https://sevasindhu.karnataka.gov.in ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಮೊಬೈಲ್, ಕಂಪ್ಯೂಟರ್, ಲ್ಯಾಪ್ಟಾಪ್ ನಲಿ ಅರ್ಜಿ ಸಲ್ಲಿಸಬಹುದು. 


ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ವಿದ್ಯುತ್ ಕಚೇರಿಗಳಲ್ಲಿ ನೋಂದಾಯಿಸಬಹುದು. ಆಧಾರ್ ಕಾರ್ಡ್, RR ನಂಬರ್, ಮೊಬೈಲ್ ಸಂಖ್ಯೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದು.



                

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು