ಜೂನ್ ಕೊನೆಗೆ ಪಿಎಂ ಕಿಸಾನ್ ಸಮ್ಮಾನ್ :
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಡಿ ರೈತರಿಗೆ ಕೇಂದ್ರ ಜೂನ್ ಕೊನೆಯ ವಾರದಲ್ಲಿ 14 ನೇ ಕಂತಿನ ನೆರವನ್ನು ಬಿಡುಗಡೆ ಮಾಡಲಿದೆ. 13ನೇ ಕಂತು ಫೆಬ್ರುವರಿಯಲ್ಲಿ ಬಿಡುಗಡೆಯಾಗಿತ್ತು.
ಈ ಯೋಜನೆಯಡಿ ಅರ್ಹ ರೈತರಿಗೆ ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ಅಂದರೆ ವರ್ಷಕ್ಕೆ 6 ಸಾವಿರ ರೂಪಾಯಿಗಳನ್ನು ಕೇಂದ್ರ, ನೀಡುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್, ಮತ್ತು ಡಿಸೆಂಬರ್-ಮಾರ್ಚ್ ನಡುವೆ ನೀಡಲಾಗುವುದು. ರೈತರ ಖಾತೆಗಳಿಗೆ ನಗದು ವರ್ಗಾವಣೆಯಾಗುವ ಪಿಎಂ ಕಿಸಾನ್ ಯೋಜನೆಗೆ 2019ರ ಫೆಬ್ರುವರಿಯಲ್ಲಿ ಪ್ರಧಾನಿ ಮೋದಿ ಚಾಲನೆ ನೀಡಿದ್ದರು.
Tags
Govt.scheme