ಗೃಹಜ್ಯೋತಿ : ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಮತ್ತು ಅಮೃತ ಜ್ಯೋತಿ ಬಳಕೆದಾರರಿಗೆ ಮಹತ್ವದ ಸೂಚನೆ!
ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಗೃಹಜ್ಯೋತಿ ಯೋಜನೆಗೆ ನಿರೀಕ್ಷೆಗೂ ಮೀರಿದ ಉತ್ತಮ ಸ್ಪಂದನ ವ್ಯಕ್ತವಾಗಿದೆ. ಯೋಜನೆಯ ಫಲಾನುಭವಿಗಳಾಗಲು ಅರ್ಜಿ ನೋಂದಣಿಗೆ ಚಾಲನೆ ನೀಡಿದ ಒಂದು ವಾರದಲ್ಲೇ 51 ಲಕ್ಷಕ್ಕೂ ಹೆಚ್ಚು ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.
ಜುಲೈ ತಿಂಗಳಿನಲ್ಲಿ ಬಳಸುವ ವಿದ್ಯುತ್ ಆಗಸ್ಟ್ ತಿಂಗಳಿನಿಂದ ಬರುವ ಬಿಲ್ ಗೆ ಯೋಜನೆ ಅನ್ವಯವಾಗಲಿದೆ. ಸರ್ಕಾರ ವಿಧಿಸುವ ಷರತ್ತುಗಳಿಗೆ ಒಳಪಟ್ಟು ವಿದ್ಯುತ್ ಬಳಸುವ ಗ್ರಾಹಕರು ಉಚಿತ ಸೌಲಭ್ಯದ ಲಾಭ ಪಡೆಯಬಹುದಾಗಿದೆ.
ಒಂದು ವಾರ ಕಳೆದರು ಗ್ರುಹಜ್ಯೋತಿ ವಿಚಾರದಲ್ಲಿ ಇನ್ನೂ ಹಲವು ಗೊದಲಗಳು ಇರುವುದು ಸಹಜ. ಈಗಾಗಲೇ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಮತ್ತು ಅಮೃತ ಜ್ಯೋತಿ ಯೋಜನೆಯಡಿ ವಿದ್ಯುತ್ ಪಡೆಯುತ್ತಿರುವ ಗ್ರಾಹಕರು ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಬಹುದಾ? ಅರ್ಜಿ ಸಲ್ಲಿಸಬಹುದಾ? ಎನ್ನುವ ಪ್ರಶ್ನೆಗಳು ಕಾಡುವುದು ಸಹಜ ಇದಕ್ಕೆಲ್ಲಾ ಉತ್ತರ ಈ ವರದಿಯಲ್ಲಿದೆ.
ನಕಲಿ ಲಿಂಕ್ ಗಳ ಬಗ್ಗೆ ಎಚ್ಚರಿಕೆ
ಮತ್ತೊಮ್ಮೆ ನೋಂದಾಯಿಸಿಕೊಳ್ಳಬೇಕು
ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಮತ್ತು ಅಮೃತ ಜ್ಯೋತಿ ಅಡಿಯಲ್ಲಿ ಪ್ರಯೋಜನವನ್ನು ಪಡೆಯುತ್ತಿರುವ ಗ್ರಾಹಕರು ಗೃಹಜ್ಯೋತಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಬಯಸಿದರೆ ಮತ್ತೊಮ್ಮೆ ಗೃಹ ಜ್ಯೋತಿ ಯೋಜನೆಗೆ ನೋಂದಾಯಿಸಿಕೊಳ್ಳಬೇಕು ಎಂದು ಬೆಸ್ಕಾಂ ಸ್ಪಷ್ಟನೆ ನೀಡಿದೆ.
ಇದರ ಪ್ರಕಾರ ನೀವು ಈಗಾಗಲೇ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಮತ್ತು ಅಮೃತ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದರು, ಗೃಹ ಜ್ಯೋತಿ ಯೋಜನೆಯಡಿ ಫಲಾನುಭವಿಗಳಾಗಲು ನೋಂದಣಿ ಮಾಡಿಕೊಳ್ಳುವುದು ಅವಶ್ಯಕವಾಗಿದೆ.