ಆಗಸ್ಟ್ ನಲ್ಲಿ ಗೃಹಲಕ್ಷ್ಮೀಯರಿಗೆ ಹಣ ಖಚಿತ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ .........

ಆಗಸ್ಟ್ ನಲ್ಲಿ ಗೃಹಲಕ್ಷ್ಮೀಯರಿಗೆ ಹಣ ಖಚಿತ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ .........



 

ಜುಲೈ 14  ರಿಂದ ಅರ್ಜಿ ಸಲ್ಲಿಕೆ ಆರಂಭ !!

 ಜುಲೈ 14 ರಿಂದ ಅರ್ಜಿ ಸಲ್ಲಿಕೆ ಆರಂಭ 

ಮನೆಯೊಡತಿಗೆ 2 ಸಾವಿರ ರೂ ಹಣ ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ ಅಡಿ ಆಗಸ್ಟ್ ತಿಂಗಳಿನಲ್ಲಿ ಫಲಾನುಭವಿಗಳಿಗೆ ಹಣ ತಲುಪಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.



ವಿಧಾನಸೌಧದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಆಪ್ ರೂಪಿಸಿದ್ದು, ಅದಕ್ಕೆ ಸಚಿವ ಸಂಪುಟ ಸಭೆಯಲ್ಲಿಯೂ ಒಪ್ಪಿಗೆ ನೀಡಲಾಗಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಆಪ್ ಮೂಲಕ ಅರ್ಜಿ ಸಲ್ಲಿಸಲು ಎಲ್ಲಾ ತಯಾರಿ ಮಾಡಿದ್ದೇವೆ ಎಂದು ತಿಳಿಸಿದರು.


ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ. ಯಾವ ಶುಲ್ಕವೂ ಇರುವುದಿಲ್ಲ.ಮಧ್ಯವರ್ತಿಗಳ ಹಾವಳಿ ತಪ್ಪಿಸಲೆಂದೇ ಆಪ್ ಮಾಡಲಾಗಿದೆ ಎಂದ ಅವರು, ಸಚಿವ ಸಂಪುಟದ ತೀರ್ಮಾನದಂತೆ ಜುಲೈ ನಲ್ಲಿ 14 ರಿಂದ ಅರ್ಜಿ ಸಲ್ಲಿಸಲು ಅವಕಾಶ ದೊರೆಯಲಿದೆ ಎಂದು ಮಾಹಿತಿ ನೀಡಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು