ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ .. ಈ ವಿದ್ಯಾರ್ಥಿಗಳಿಗೆ ಸಿಗಲಿದೆ ರೂ 10 ಸಾವಿರ ಸ್ಕಾಲರ್ ಶಿಪ್

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ .. ಈ ವಿದ್ಯಾರ್ಥಿಗಳಿಗೆ ಸಿಗಲಿದೆ ರೂ 10 ಸಾವಿರ ಸ್ಕಾಲರ್ ಶಿಪ್ 



ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಜ್ಯ ಸರ್ಕಾರದಿಂದ ನೀಡಲಾಗುವ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಅರ್ಹ ಕ್ರೀಡಾ ಅಭ್ಯರ್ಥಿಗಳಿಗೆ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.



      ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 2022-23 ನೇ ಸಾಲಿನಲ್ಲಿ ಮಾಧ್ಯಮಿಕ / ಪ್ರೌಢ ಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ರೂ 10. ಸಾವಿರ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲಿದ್ದು, ಅರ್ಹ ಕ್ರೀಡಾಪಟುಗಳ ಅರ್ಜಿ ಸಲ್ಲಿಸಬಹುದು.
ಕ್ರೀಡಾ ವಿದ್ಯಾರ್ಥಿವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಿದ್ಯಾರ್ಥಿವೇತನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳು ಸೇವಾಸಿಂಧು ಅಧಿಕೃತ ಜಾಲತಾಣ https://sevasindhuservices.karnataka.gov.in ದಲ್ಲಿ ದಿನಾಂಕ 30-07-2023 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ 10 ಸಾವಿರ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುವುದು.



ಅರ್ಜಿದಾರರು 2022-23 ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರಬೇಕು. ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದಕ್ರೀಡಾ ಸಂಸ್ಥೆಗಳು 2022 ಏಪ್ರಿಲ್ 01ರಿಂದ 2023 ಮಾರ್ಚ್ 31 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು.
ಅಥವಾ 
ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸಿರುವ ರಾಷ್ಟೀಯ ಮಟ್ಟದ ಕ್ರೀಡಾ ಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ 2022 ಏಪ್ರಿಲ್ 01 ರಿಂದ 2023 ರ ಮಾರ್ಚ್ 31ರವರೆಗಿನ ಅವಧಿಯಲ್ಲಿನ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು.

ರಾಷ್ಟೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು.ರಾಷ್ಟೀಯ ಶಾಲಾ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂ 10 ಸಾವಿರ ಮಾತ್ರ ಮಂಜೂರು ಮಾಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು :

👉ಆಧಾರ್ ಕಾರ್ಡ್ 

👉ಕ್ರೀಡಾಪಟು ಎಂಬುದಕ್ಕೆ ಅಗತ್ಯ ದಾಖಲೆ.

👉ಜಾತಿ ಮತ್ತು ಆದಾಯ ಪ್ರಮಾಣ ಪತ್ರ 

👉ಪ್ರಸ್ತುತ ತರಗತಿ ಪ್ರವೇಶಾತಿ ಪಡೆದ ದಾಖಲೆ 

👉ಇತರೆ ಅಗತ್ಯ ದಾಖಲೆಗಳು 






ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು