ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ, 2000/- ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ವಿಸ್ತರಿಸಿದ ಆಡಳಿತ ಅನುಮೋದನೆ ಆದೇಶ :

ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ, 2000/- ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ವಿಸ್ತರಿಸಿದ  ಆಡಳಿತ ಅನುಮೋದನೆ  ಆದೇಶ :

 


          ಕ್ರಮ ಸಂಖ್ಯೆ (1) ರ ದಿನಾಂಕ 06/06/2023ರ ಆದೇಶದಲ್ಲಿ ಕರ್ನಾಟಕ ರಾಜ್ಯದ ಕುಟುಂಬದ ಯಜಮಾನಿ ಮಹಿಳೆ ಪ್ರತಿ ತಿಂಗಳು ರೂ 2000/- ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದೆ.

ಮೇಲೆ ಹೇಳಿರುವ ರೀತಿಯಲ್ಲಿ ಸರ್ಕಾರದ ಆದೇಶ ಸಂಖ್ಯೆ ಮಮಇ 70 ಮಮಅ 2023, ದಿನಾಂಕ:06/06/2023 ರ ಆದೇಶವನ್ನು ಮುಂದುವರೆಸಿ, ಕರ್ನಾಟಕ ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ "ಗೃಹಲಕ್ಷ್ಮಿ" ಯೋಜನೆಯ ಸೌಲಭ್ಯವನ್ನು ಫಲಾನುಭವಿಗಳು ಇಚ್ಛಿಸಿದಲ್ಲಿ ಅವರ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಬದಲು ಕುಟುಂಬದ ಯಜಮಾನಿಯ ಹೆಸರಿನಲ್ಲಿರುವ Non-ಆಧಾರ್ ಸೀಡಿಂಗ್ ಬ್ಯಾಂಕ್ ಅಕೌಂಟ್ ಗೆ ಸಹ RTGS ಮೂಲಕ ಪ್ರತಿ ತಿಂಗಳು ರೂ 2000/-ಗಳನ್ನು ನೀಡಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದೆ.

ಈ ಆದೇಶದಲ್ಲಿ ಏಕ ಕಡತದಲ್ಲಿ 2023-24ನೇ ಸಾಲಿನ ಆಯವ್ಯಯದ ಕಂಡಿಕೆ 129 ರಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ಮಾಜಿ ದೇವದಾಸಿಯರು ಸಹ ಗೃಹಲಕ್ಷ್ಮಿ ಯೋಜನೆಯ ವ್ಯಾಪ್ತಿಗೆ ಸೇರುತ್ತಾರೆ ಎಂದು ಘೋಷಿಸಲಾಗಿದೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ತಯಾರಕರು ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿಯಾಗಿದ್ದು,  ಆಕೆ ಹಾಗೂ ಆಕೆಯ ಪತಿ ಆದಾಯ ತೆರಿಗೆ ಹಾಗೂ GST ರಿಟರ್ನ್ಸ್ ಪಾವತಿದಾರರಾಗಿದ್ದಲ್ಲಿ ಮೇಲೆ ಮೊದಲಾದ ಕ್ರಮ ಸಂಖ್ಯೆ (1)ರ ಆದೇಶದಂತೆ ಗೃಹಲಕ್ಷ್ಮಿ ಯೋಜನೆಗೆ ಅರ್ಹರಾಗಿರುತ್ತಾರೆ. ಆದರೆ ಲಿಂಗತ್ವ ಅಲ್ಪಸಂಖ್ಯಾತರು ಈ ಯೋಜನೆಯಲ್ಲಿ ಒಳಗೊಂಡಿರುವುದಿಲ್ಲ. ಅದರಂತೆ, ಆಯವ್ಯಯದ ಕಂಡಿಕೆ 129ರಲ್ಲಿ ಘೋಷಿಸಿರುವಂತೆ ಗೃಹಲಕ್ಷ್ಮಿ ಯೋಜನೆಯಡಿ ರೂ 2000/- ಗಳನ್ನು ನೀಡುವ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ಸಹ ಒದಗಿಸುವಂತೆ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ.

ಪ್ರಸ್ತಾವನೆಯನ್ನು ಪರಿಶೀಲಿಸಿ ಲಿಂಗತ್ವ ಅಲ್ಪಸಂಖ್ಯಾತರಿಗೂ ಈ ಯೋಜನೆಯನ್ನು ವಿಸ್ತರಿಸಲು ತೀರ್ಮಾನಿಸಿ ಅದರಂತೆ ಈ ಕೆಳಕಂಡಂತೆ ಆದೇಶಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು