ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ :

ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ  :




ಕಾಂಗ್ರೆಸ್ ನ 4 ನೇ ಗ್ಯಾರಂಟಿ ಅನುಷ್ಠಾನ । ಮನೆ ಯಜಮಾನಿಗೆ ಮಾಸಿಕ ರೂ 2,000/-

ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ ಮನೆಯ ಯಜಮಾನಿಗೆ ಮಾಸಿಕ 2 ಸಾವಿರ ರೂ ನೀಡುವ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ಚಾಲನೆ ನೀಡಲಾಗುತ್ತಿದೆ. ಅದರೊಂದಿಗೆ ನಾಲ್ಕನೇ ಗ್ಯಾರಂಟಿ ಅನುಷ್ಠಾನಗೊಂಡಂತಾಗಿದೆ.

ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಚುನಾವಣೆಯಲ್ಲಿ ನೀಡಿತ್ತು. ಅದರಲ್ಲಿ ಶಕ್ತಿ ಯೋಜನೆ ಜಾರಿಯಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿ ಅಕ್ಕಿಯ ಬದಲು ಹಣ ಖಾತೆಗಳಿಗೆ ಜಮಾ ಆಗುತ್ತಿದೆ. ಗೃಹಜ್ಯೋತಿಯ ನೋಂದಣಿ ಒಂದು ಕೋಟಿ ದಾಟಿದೆ. ಇದೀಗ ಬುಧವಾರ ಗೃಹಲಕ್ಷ್ಮಿ ಜಾರಿಗೆ ಬರುತ್ತಿದೆ. ಯುವನಿಧಿಯೊಂದು ಮಾತ್ರ ತಡವಾಗಲಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಂಜೆ 5ಕ್ಕೆ ಮುಖ್ಯಮಂತ್ರಿ ಸಿದ್ಧರಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ.
                ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು DCM ಶಿವಕುಮಾರ್ ನೀಡಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಯೋಜನೆಯ ಲಾಂಛನ ಹಾಗೂ ಪೋಸ್ಟರ್ ಬಿಡುಗಡೆ ಮಾಡಲಿದ್ದಾರೆ. ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸುವರು, ಸಭಾಪತಿ ಬಸವರಾಜ ಹೊರಟ್ಟಿ. ವಿಧಾಸಭಾಧ್ಯಕ್ಷ ಯು.ಟಿ ಖಾದರ್ ಉಪಸ್ಥಿತರಿರುವರು.

ಗೃಹಲಕ್ಷ್ಮಿ ಯೋಜನೆಗೆ ಬುಧವಾರ ನೋಂದಣಿ ಆರಂಭವಾಗುತ್ತದೆ. ಆಗಸ್ಟ್ 15 ಕ್ಕೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಸಂದಾಯ ಆಗಲಿದೆ. ರೇಷನ್ ಕಾರ್ಡ್ ನಲ್ಲಿ ಮನೆ ಯಜಮಾನಿ ಆಗಿರುವವರು ಫಲಾನುಭವಿಯಾಗಲಿದ್ದಾರೆ. ಅವರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ಅವರ ಪತಿಯ ಆಧಾರ್  ಕಾರ್ಡ್ ನೀಡಬೇಕು.  GST ಹಾಗೂ ಆದಾಯ ತೆರಿಗೆ ಪಾವತಿದಾರರ ಪತ್ನಿಯರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಗ್ರಾಂ ಪಂಚಾಯತ ಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಣಿಗೆ ಅವಕಾಶವಿದೆ. ಸರ್ಕಾರ ನೇಮಿಸಿರುವ ಪ್ರಜಾಪ್ರತಿನಿಧಿಗಳು ಮನೆಗೆ ಬಂದು ನೋಂದಣಿ ಮಾಡಲಿದ್ದಾರೆ. ಜಿಲ್ಲಾಧಿಕಾರಿಗಳ ಜತೆ ಲಕ್ಷ್ಮಿ ಹೆಬ್ಬಾಳ್ಕರ್ ವಿಡಿಯೋ ಸಂವಾದ ನಡೆಸಿ ಕೆಲ ಸೂಚನೆ ನೀಡಿದ್ದಾರೆ. 

ನಕಲಿ ಅರ್ಜಿಗಳ ಬಗ್ಗೆ ಎಚ್ಚರ !!!

          ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಈವರೆಗೂ ಯಾವುದೇ ಅರ್ಜಿ ನಮುನೆ ಬಿಡುಗಡೆ ಮಾಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. 

ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಪ್ರಜಾಪ್ರತಿನಿಧಿಗಳ ಬಳಿ ಮಾತ್ರ ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.

DC ಗಳಿಗೆ ಸೂಚನೆ :

✔ ಗೃಹಲಕ್ಷ್ಮಿ ನೋಂದಣಿ ಮಾಡುವ ಕೇಂದ್ರಗಳ ಮೇಲ್ವಿಚಾರಣೆಗೆ ಸರ್ಕಾರೀ ಅಧಿಕಾರಿ/ಸಿಬ್ಬಂದಿ ನಿಯೋಜನೆ 

✔ ಕೇಂದ್ರಗಳಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಪೋಲೀಸರ ನೇಮಕ 

✔ ವಿದ್ಯುತ್ ಕೈಕೊಟ್ಟರೆ ನೊಂದಣಿಗೆ ತೊಂದರೆಯಾಗದಂತೆ ಬ್ಯಾಟರಿ ಬ್ಯಾಕಪ್ ಹಾಗೂ ಸುಸ್ಥಿತಿಯಲ್ಲಿರುವ ಪ್ರಿಂಟರ್ ನೀಡುವುದು.

✔ ಪ್ರತಿ ತಾಲೂಕಿನಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪನೆ 

✔ ಜಿಲ್ಲಾ ಉಸ್ತುವಾರಿ ಸಚಿವರಿಂದ ಪ್ರಜಾಪ್ರತಿನಿಧಿಗಳ ಪಟ್ಟಿ ಪಡೆದು ನೋಂದಣಿ ಮಾಡಿಸಿ ತರಬೇತಿ ನೀಡಬೇಕು.

✔ ನೋಂದಣಿ ಕೇಂದ್ರಗಳಲ್ಲಿ ಮಳೆಯಿಂದ ರಕ್ಷಿಸಲು ಕ್ರಮ 

✔ ನೋಡಲ್ ಅಧಿಕಾರಿಗಳ ವಿವರಗಳನ್ನು ಇ-ಆಡಳಿತ ಇಲಾಖೆಯ ಲಿಂಕ್ ನಲ್ಲಿ ಅಪ್ಲೋಡ್ ಮಾಡುವುದು.

ನೋಂದಾಯಿಸುವುದು ಹೇಗೆ ?

🔯 ರೇಷನ್ ಕಾರ್ಡ್ ನಲ್ಲಿ ಗುರುತಿಸಿರುವ ಮಹಿಳೆ ಮೊಬೈಲ್ ಸಂಖ್ಯೆಗೆ ನೋಂದಣಿ ದಿನಾಂಕ, ಸಮಯ, ಸ್ಥಳದ ವಿವರ ಎಸ್ ಎಂ ಎಸ್ ಮೂಲಕ ಕಳುಹಿಸಲಾಗುತ್ತದೆ. 

🔯 ನೋಂದಣಿ ಮಾಡಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.

🔯 ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ತೆರಳಿ ನೋಂದಣಿ ಮಾಡಲಿದ್ದಾರೆ. 

🔯 ಸಮಸ್ಯೆಗಳಿದ್ದಲ್ಲಿ ೧೯೦೨ ಗೆ ಕರೆ ಮಾಡಿ ಅಥವಾ ೮೧೪೭೫೦೦೫೦೦ ಸಂಖ್ಯೆಗೆ SMS ಮಾಡಿ ಮಾಹಿತಿ ಪಡೆಯಬಹುದು.

🔯 ನಿಗದಿತ ಸಮಯಕ್ಕೆ ಹೋಗಲು ಸಾಧ್ಯವಾಗಿದ್ದರೆ ಮುಂದಿನ ಯಾವುದೇ ದಿನಾಂಕದಂದು ಸಂಜೆ ೫-೭ ಗಂಟೆಯೊಳಗೆ ಭೇಟಿ ನೀಡಿ.

🔯 ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಬಿಟ್ಟು ಬೇರೆ ಬ್ಯಾಂಕ್ ಗೆ ನೋಂದಣಿ ಮಾಡಿಸಬಹುದು. 

🔯 ನೋಂದಣಿ ಆದಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ. 

🔯 ಪ್ರಜಾಪ್ರತಿನಿಧಿಗಳಲ್ಲಿ ನೋಂದಣಿಯಾದರೆ ಮಂಜೂರಾತಿ ಪತ್ರ ತಡವಾಗಿ ತಲುಪಲಿದೆ.










ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು