ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.

 


ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮ ಒನ್ ಬಗ್ಗೆ

ಗ್ರಾಮ ಒನ್, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಎಲ್ಲಾ ಇಲಾಖೆಗಳ ನಾಗರಿಕ ಸೇವೆಗಳನ್ನು ಗ್ರಾಮೀಣ ನಾಗರಿಕರಿಗೆ ಅವರ ಗ್ರಾಮಗಳಲ್ಲಿಯೇ ತಲುಪಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯನ್ನು ನಾಗರಿಕ ಕೇಂದ್ರಿತ ಸೇವೆಗಳಾದ ಜಿ2ಸಿ ಸೇವೆಗಳು, ಬ್ಯಾಂಕಿಂಗ್ ಸೇವೆಗಳು, ಆರ್ ಟಿ ಐ ಪ್ರಶ್ನೆಗಳು ಹಾಗೂ ಇನ್ನಿತರೇ ಸೇವೆಗಳನ್ನು ಗ್ರಾಮ ಮಟ್ಟದಲ್ಲಿ ಎಲ್ಲಾ ನಾಗರಿಕರಿಗೆ ತಲುಪಿಸುವ ಏಕ-ಬಿಂದು ಸಹಾಯ ಕೇಂದ್ರವಾಗಿರುವಂತೆ ಯೋಜಿಸಲಾಗಿದೆ. ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳು ಈ ಯೋಜನೆಯನ್ನು ವರ್ಷ 2020-21 ರ ಬಜೆಟ್ ನಲ್ಲಿ ಘೋಷಿಸಿದ್ದಾರೆ. ವಾರದ ಎಲ್ಲಾ ದಿನಗಳಲ್ಲಿ ಗ್ರಾಮ ಒನ್ ಕೇಂದ್ರಗಳು ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯ ನಿರ್ವಹಿಸುತ್ತವೆ.

ಗ್ರಾಮ ಒನ್ ಕೇಂದ್ರಗಳ ಪ್ರಯೋಜನಗಳು ಹೀಗಿವೆ:

ಗ್ರಾಮ ಒನ್ ಕೇಂದ್ರವನ್ನು ತೆರೆಯಲು ಆನ್ಲೈನ್ ಅರ್ಜಿ ಸಲ್ಲಿಸುವ ಲಿಂಕ್ 


  • ಸರ್ಕಾರಿ ಸೇವೆಗಳನ್ನು ಪಡೆಯಲು ನಾಗರಿಕರು ಜಿಲ್ಲೆ,ತಾಲ್ಲೂಕು ಮತ್ತು ಹೋಬಳಿ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ.
  • ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಕೇಂದ್ರದಲ್ಲಿ ಪಡೆಯಬಹುದಾಗಿದೆ .
  • ಗ್ರಾಮ ಒನ್ ಕೇಂದ್ರಗಳ ಮೂಲಕ ಸೇವೆಗಳನ್ನು ಪಡೆಯುವ ಮೂಲಕ ನಾಗರಿಕರು ಸಮಯ ಮತ್ತು ಹಣವನ್ನು ಉಳಿಸಬಹುದು.
  • ಮಧ್ಯವರ್ತಿಗಳಿಂದ ಯಾವುದೇ ಅಪಾಯವಿಲ್ಲ.
  • ಗ್ರಾಮ ಮಟ್ಟದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತವೆ.
  • ಪ್ರತಿ ಗ್ರಾಮಒನ್ ಕೇಂದ್ರವು ಮೈಕ್ರೋ ಬ್ಯಾಂಕಿಂಗ್ ಸಂಸ್ಥೆಯಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡುವ ಮೂಲಕ ಆರ್ಥಿಕ ಸೇರ್ಪಡೆಯನ್ನು ಸಾಧಿಸಲಾಗುತ್ತದೆ
  • ಸರ್ಕಾರದ ಸೇವೆಗಳನ್ನು ಪಡೆಯಲು ನಾಗರಿಕರು ಯಾರನ್ನೂ ಅವಲಂಬಿಸಬೇಕಾಗಿಲ್ಲವಾದ್ದರಿಂದ ಸ್ವಾವಲಂಬನಾ ಮನೋಭಾವವನ್ನು ಎತ್ತಿಹಿಡಿದಂತಾಗಿದೆ
  • ಸೇವೆಗಳ ಸಮಯೋಚಿತ ಮತ್ತು ಗುಣಮಟ್ಟದ ವಿತರಣೆಯ ಮೂಲಕ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಸಾಧಿಸಲಾಗುತ್ತದೆ

1 ಕಾಮೆಂಟ್‌ಗಳು

ನವೀನ ಹಳೆಯದು