ಬಿಪಿಎಲ್ ಗೆ ಇಬ್ರು ಮುಖ್ಯಸ್ಥರಿದ್ರೆ ಅಕ್ಕಿ ಹಣ ಇಲ್ಲ

ಬಿಪಿಎಲ್ ಗೆ ಇಬ್ರು ಮುಖ್ಯಸ್ಥರಿದ್ರೆ ಅಕ್ಕಿ ಹಣ ಇಲ್ಲ 



ಕುಟುಂಬಕ್ಕೆ ಯಾರು ಮುಖ್ಯಸ್ಥರು ಎಂಬುದನ್ನು ಕುಟುಂಬದವರೇ ಸೂಚಿಸಿದ ನಂತರ ಹಣ 20  ರೊಳಗೆ ಬ್ಯಾಂಕ್ ಮಾಹಿತಿ ಕೊಡಿ । ಅಂತ್ಯೋದಯ ಮೂವರ ಕುಟುಂಬಕ್ಕೆ ಹಣ ಸಿಗಲ್ಲ !!!!!!!


ಪಡಿತರ ಪಡೆಯುವ ಕುಟುಂಬಗಳಲ್ಲಿ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರು ಇದ್ದಾರೆ ಆ ಕುಟುಂಬದ ಮುಖ್ಯಸ್ಥರು ಯಾರು ಎಂಬ ಸಮಸ್ಯೆ ಇತ್ಯರ್ಥವಾಗದ ಹೊರತು ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಅಕ್ಕಿ ಬದಲಿಗೆ ಹಣ ಕೊಡದಿರಲು ಸರ್ಕಾರ ನಿರ್ಧರಿಸಿದೆ.

ಗುರುವಾರ ಅನ್ನಭಾಗ್ಯ ಯೋಜನೆ ಜಾರಿ ಕುರಿತು ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.ಅಂತ್ಯೋದಯ ಕಾರ್ಡು ಹೊಂದಿರುವ ಮೂರೂ ಅಥವಾ ಮೂರಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬಕ್ಕೆ ನಗದು ವರ್ಗಾವಣೆ ಸೌಲಭ್ಯ ಸಿಗುವುದಿಲ್ಲ. ಏಕೆಂದರೆ ಅವರು ಈಗಾಗಲೇ 30 ಕೆ.ಜಿ ಅಕ್ಕಿ ಪಡೆಯುತ್ತಿರುತ್ತಾರೆ, ಆದರೆ ಅಂತ್ಯೋದಯ ಕಾರ್ಡು ಹೊಂದಿರುವ ಕುಟುಂಬದಲ್ಲಿ 4  ಸದಸ್ಯರಿದ್ದರೆ ಸದರಿ ಕುಟುಂಬವು 170 ರೂ ಗಳನ್ನು, 5 ಸದಸ್ಯರಿದ್ದರೆ 340 ರೂಪಾಯಿ, 6 ಸದಸ್ಯರಿದ್ದರೆ ೫೧೦ ರೂ. ಗಳನ್ನು ಪಡೆಯುತ್ತದೆ. ಹೆಚ್ಚಿನ ಸದಸ್ಯರು ಇದ್ದಲ್ಲಿ ಇದೆ ಅನುಪಾತದಲ್ಲಿ ನಗದು ಪಡೆಯಲಿದೆ.

ಕಳೆದ ಮೂರು ತಿಂಗಳುಗಳಲ್ಲಿ ಪಡಿತರ ಆಹಾರ ಧಾನ್ಯವನ್ನು ಪಡೆದಿರುವ ಕುಟುಂಬಗಳು ನಗದು ವರ್ಗಾವಣೆ ಸೌಲಭ್ಯ ಪಡೆಯಲು ಅರ್ಹವಾಗಿವೆ. ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನು ಹೊಂದಿರುವ ಅಥವಾ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರನ್ನು ಹೊಂದಿರುವ ಪಡಿತರ ಚೀಟಿ ಕುಟುಂಬಗಳನ್ನು ನಗದು ವರ್ಗಾವಣೆ ಸೌಲಭ್ಯದಿಂದ ಹೊರಗಿಡಲು ನಿರ್ಧರಿಸಲಾಗಿದೆ. ಕುಟುಂಬದ ಮುಖ್ಯಸ್ಥರನ್ನು ನಿಗದಿಪಡಿಸಿದ ಕುಟುಂಬಗಳು ಮುಖ್ಯಸ್ಥರನ್ನು ಆಯ್ಕೆ ಮಾಡಿಕೊಳ್ಳಬೇಕು. ಮಹಿಳಾ ಸದಸ್ಯರಿರುವ ಪಡಿತರ ಚೀಟಿಯಲ್ಲಿನ ಮಹಿಳೆಯನ್ನು ಕುಟುಂಬದ ಮುಖ್ಯಸ್ಥರನ್ನಾಗಿ ನೇಮಿಸಬೇಕು. ಆಹಾರ ಇಲಾಖೆಯ ಸಿಬ್ಬಂದಿಗಳು ಸಂಬಂಧಪಟ್ಟ ಕುಟುಂಬದ ಮುಖ್ಯಸ್ಥೆಯನ್ನು ಗುರುತಿಸಲು ಸಹಕರಿಸಬೇಕು ಎಂದು ತಿಳಿಸಲಾಗಿದೆ.

ಮುಖ್ಯವಾಗಿ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡಬೇಕು. ಜುಲೈ 20 ರೊಳಗೆ ತಮ್ಮ ಸಕ್ರಿಯ ಬ್ಯಾಂಕ್ ಖಾತೆಯ ಮಾಹಿತಿಯನ್ನು ನೀಡಿದ ಪಡಿತರ ಚೀಟಿ ಕುಟುಂಬಗಳಿಗೆ ಅಗಸ್ಟ್ ತಿಂಗಳಿನಲ್ಲಿ ನಗದು ವರ್ಗಾವಣೆ ಸೌಲಭ್ಯ ದೊರಕಲಿದೆ ಎಂದು ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದೆ. ಬ್ಯಾಂಕ್ ಖಾತೆಯ ಮಾಹಿತಿಯನ್ನು ನ್ಯಾಯಬೆಲೆ ಅಂಗಡಿಯಲ್ಲೆ ನೀಡಬೇಕು.

ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ( ಬಿಪಿಎಲ್ ) ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನು 5 ಕೆಜಿ. ಅಕ್ಕಿ ವಿತರಣೆ ಆಗುತ್ತಿದೆ. ಅದರೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ೫ ಕೆಜಿ ಆಹಾರ ಧನ್ಯ ಸೇರಿಸಿ ಪ್ರತಿ ತಿಂಗಳು ಫಲಾನುಭವಿಗೆ ತಲಾ 10 ಕೆಜಿ ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ಸರ್ಕಾರ ನಿರ್ಧರಿಸಿದೆ.

ಈ ಉದ್ದೇಶಕ್ಕಾಗಿ ಅಗತ್ಯವಿರುವ ಆಹಾರಧಾನ್ಯವನ್ನು ಮುಕ್ತ ಮಾರುಕಟ್ಟೆಯಿಂದ ಖರೀದಿಸಲು ಮುಕ್ತ ಟೆಂಡರ್ ಕರೆಯಲು ತೀರ್ಮಾನಿಸಲಾಗಿದೆ. ಈ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಬಿಡ್ ದಾರರು ಆಹಾರಧಾನ್ಯವನ್ನು ಸರಬರಾಜು ಮಾಡುವವರೆಗೆ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ ಕಾರ್ಡುಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 5 ಕೆಜಿ ಆಹಾರಧಾನ್ಯದ ಬದಲಾಗಿ ಪ್ರತಿ ಕೆಜಿ ಗೆ ೩೪ ರೂ. ನಂತೆ ಪಡಿತರ ಚೀಟಿಯಲ್ಲಿರುವ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ವರ್ಗಾಯಿಸಲು ಮಾರ್ಗಸೂಚಿಗಳನ್ನು ಪಾಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಆಹಾರ ತಂತ್ರ್ಯಾಂಶದಲ್ಲಿ ಲಭ್ಯವಿರುವ ದತ್ತಾಂಶ ಮಾಹಿತಿ ಬಳಸಿಕೊಂಡು ಜುಲೈನಿಂದ ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ ಕುಟುಂಬಗಳ ಫಲಾನುಭವಿಗಳಿಗೆ ನಗದು ವರ್ಗಾವಣೆ ಪ್ರಾರಂಭಿಸಲಾಗಿದೆ. ಸಚಿವ ಸಂಪುಟ ನಿರ್ಣಯದಂತೆ 5  ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕೆಜಿ ಗೆ 34 ರೂ ನಂತೆ ಒಟ್ಟು 170ರೂ. ಗಳನ್ನು ಪಡಿತರ ಕುಟುಂಬದ ಮುಖ್ಯಸ್ಥರ ಖಾತೆಗೆ ನಗದು ವರ್ಗಾವಣೆ ಮಾಡಲಾಗುವುದು.

ಹಣ ನೀಡುವುದರ ಲಾಭವೇನು?

👉 ರಾಜ್ಯ ಸರ್ಕಾರಕ್ಕೆ 









ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು