ರೇಷನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಹೊಂದಿದವರಿಗೆ ಮಾತ್ರ ಹಣ ಜಮಾ !!!

ರೇಷನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಹೊಂದಿದವರಿಗೆ ಮಾತ್ರ ಹಣ ಜಮಾ !!!



                 ರಾಜ್ಯದಲ್ಲಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದ ಮುಖ್ಯಸ್ಥರ ಬ್ಯಾಂಕ್ DBT ಮೂಲಕ ಹಣವನ್ನು ಪಾವತಿಸುವ ಬಗ್ಗೆ ತಿಳಿಸಲಾಗಿದೆ. ಸರ್ಕಾರದ ಆದೇಶದಲ್ಲಿ ರಾಜ್ಯದಲ್ಲಿರುವ ಆದ್ಯತಾ ಮತ್ತು ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಒಟ್ಟು 10 ಕೆಜಿ ಆಹಾರ ಧಾನ್ಯಗಳ ನ್ನು ಉಚಿತವಾಗಿ ವಿತರಿಸಲು ತಾತ್ವಿಕ ಅನುಮೋದನೆಯನ್ನು ನೀಡಲಾಗಿದೆ.


ಮೇಲೆ ತಿಳಿಸಿರುವ ಸರ್ಕಾರದ ಆದೇಶದಲ್ಲಿ ರಾಜ್ಯದಲ್ಲಿ ರಾಷ್ಟೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗಿರುವ ಅಂತ್ಯೋದಯ ಅಣ್ಣ ಯೋಜನೆ ಆದ್ಯತಾ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬಗಳು ಹಾಗೂ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ ವಿತರಿಸುವ ಆದ್ಯತಾ ಪಡಿತರ ಚೀಟಿಯ ಕುಟುಂಬದ ಪ್ರತಿ ಸದಸ್ಯರಿಗೆ ಒಟ್ಟು 10 ಕೆಜಿ ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ಆದೇಶಿಸಲಾಗಿದೆ.

ಅದರಂತೆ,,, ರಾಜ್ಯ ಸರ್ಕಾರಕ್ಕೆ ಪ್ರತಿ ತಿಂಗಳು ಹೆಚ್ಚುವರಿಯಾಗಿ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿಯ ಅಗತ್ಯವಿದ್ದು, ಸದರಿ ಅಕ್ಕಿಯನ್ನು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಒಂಸ್ ಒದಗಿಸುವಂತೆ ಕಾರ್ಯದರ್ಶಿ, ಆಹಾರ ಮತ್ತು ಸಾರ್ವಜನಿಕ ವಿತರಣೆ ಇಲಾಖೆ ಕೇಂದ್ರ ಸರ್ಕಾರ ಇವರನ್ನು  ಕೋರಲಾಗಿದೆ.



ಪ್ರಧಾನ ವ್ಯವಸ್ಥಾಪಕರು, ಪ್ರಾದೇಶಿಕ ಕಚೇರಿ, ಭಾರತ ಆಹಾರ, ನಿಗಮ, ಬೆಂಗಳೂರು ಇವರ ಪತ್ರದಲ್ಲಿ, ರಾಜ್ಯ ಸರ್ಕಾರವು ಕೋರಿರುವ 2.22 ಲಕ್ಷ ಮೆಟ್ರಿಕ ಟನ್ ಅಕ್ಕಿಯನ್ನು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಒದಗಿಸುವುದಾಗಿ ತಿಳಿಸಲಾಗಿದೆ. 

ಕೇಂದ್ರ ಸರ್ಕಾರದ ಪತ್ರದಲ್ಲಿ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ರಾಜ್ಯ ಸರ್ಕಾರಗಳಿಗೆ ಗೋದಿ ಮತ್ತು ಅಕ್ಕಿ ಮಾರಾಟವನ್ನು ಸ್ಥಗಿತಗೊಳಿಸಿರುವುದಾಗಿ ತಿಳಿಸಲಾಗಿದೆ.


ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ನಿರ್ಧಾರದಂತೆ, ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 5 ಕೆಜಿ ಆಹಾರ ದಾನ್ಯದೊಂದಿಗೆ, ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯವನ್ನು ಸೇರಿಸಿ, ಪ್ರತಿ ತಿಂಗಳು ಪ್ರತಿ ಫಲಾನುಭವಿಗಳಿಗೆ ತಲಾ 10 ಕೆಜಿ ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ಸರ್ಕಾರವು ನಿರ್ಧರಿಸಿದ್ದು, ಈ ಉದ್ದೇಶಕ್ಕಾಗಿ ಅಗತ್ಯವಿರುವ ಆಹಾರ ಧಾನ್ಯವನ್ನು ಮುಕ್ತ ಮಾರುಕಟ್ಟೆಯಿಂದ ಖರೀದಿಸಲು ಮುಕ್ತ ಟೆಂಡರ್ ನ್ನು ಕರೆಯಲು ತೀರ್ಮಾನಿಸಲಾಗಿದೆ. ಈ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಬಿಡ್ ದಾರರು ಆಹಾರ ಧಾನ್ಯವನ್ನು ಸರಬರಾಜು ಮಾಡುವವರೆಗೆ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ  ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 5 ಕೆಜಿ ಆಹಾರ ಧಾನ್ಯದ ಬದಲಾಗಿ ಪ್ರತಿ ಕೆಜಿ ಗೆ ರೂ 34/- ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ DBT ಮೂಲಕ ಹಣವನ್ನು ವರ್ಗಾಯಿಸಲು ತೀರ್ಮಾನಿಸಲಾಗಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು