ಭರ್ಜರಿ ಚಾಲನೆಯಾದ ಗೃಹಲಕ್ಷ್ಮಿ:
ಮೊದಲ ಕಂತಿನ ಹಣ ರೂಪಾಯಿ 2000 ಜಮಾ ,,,, ಈ SMS ನಿಮಗೂ ಬಂತಾ???
ಇದೊಂದು ಐತಿಹಾಸಿಕ ದಿನ. ಕಾರ್ಯಕ್ರಮದ ಚಲನೆಗೆ ಇನ್ನೇನು ಕೆಲವೇ ನಿಮಿಷಗಳು ಉಳಿದಿರುವ ಈ ಹೊತ್ತಿನಲ್ಲಿ ನಾಡಿನ ತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ. "ಮಹಿಳೆಯರ ಸಬಲೀಕರಣದಿಂದ ಬಲಿಷ್ಠ ಸಮಾಜ ನಿರ್ಮಾಣ. ಮಹಿಳಾ ಸಮಾನತೆಯಿಂದ ಸಮ ಸಮಾಜ ಸ್ಥಾಪನೆ" ಎಂದಿದ್ದಾರೆ....
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಬೃಹತ್ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಶ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಚಾಲನೆ ನೀಡಿ ಈ ಸಂದರ್ಭದಲ್ಲಿ ಸಚಿವ ಸಂಪುಟದ ಸಚಿವರು, ಶಾಸಕರು ಭಾಗವಹಿಸಿದ್ದರು.
ಡಿಜಿಟಲ್ ಬಟನ್ ಒತ್ತಿ ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಿದರು. ಗೃಹಲಕ್ಷ್ಮಿ ಯೋಜನೆಗೆ ಅಂದಾಜು 1.28 ಕೋಟಿ ಕುಟುಂಬದ ಯಜಮಾನಿಯರು ನೋಂದಣಿ ಮಾಡಿಕೊಂಡಿದ್ದು, ಅರ್ಹ ಫಲಾನುಭವಿಗಳ ಖಾತೆಗೆ ರೂಪಾಯಿ 2000 ಅಧಿಕೃತವಾಗಿ ವರ್ಗಾವಣೆ ಮಾಡಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಈ ಕಾರ್ಯಕ್ರಮಕ್ಕಾಗಿ ರೂಪಾಯಿ 17,500 ಕೋಟಿ ಮೀಸಲಿಡಲಾಗಿದೆ. ರಾಜ್ಯದ ಎಲ್ಲಾ ಅರ್ಹ ಕುಟುಂಬಗಳಿಗೆ ಯೋಜನೆಯ ಲಾಭ ತಲುಪಿಸಿ, ಬಡಜನರಿಗೂ ಸ್ವಾವಲಂಬಿ ಬದುಕು ಕಟ್ಟಿಕೊಡಬೇಕು ಎಂಬ ಸರ್ಕಾರದ ಆಶಯಕ್ಕೆ ಜನತೆಯ ಬೆಂಬಲವಿರಲಿ ಎಂದು ಸಿಎಂ ಮಣಿವಿ ಮಾಡಿದ್ದಾರೆ.
170700128451
ಪ್ರತ್ಯುತ್ತರಅಳಿಸಿ