ಇಂದಿನ ಲೇಖನದಲ್ಲಿ ತಿಳಿಸುವುದೇನೆಂದರೆ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿಯಡಿ ರೂ 2000/- ಪಡೆಯಲು ಇನ್ನುಮುಂದೆ ಗೃಹಲಕ್ಷ್ಮಿ ಯೋಜನೆಗೆ ವಾಟ್ಸಾಪ್ ಮೂಲಕ ಅರ್ಜಿ ಸಲ್ಲಿಸಬಹುದು. ಹೇಗೆ ಎಂಬುದನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಸಂಪೂರ್ಣವಾಗಿ ಲೇಖನವನ್ನು ಓದಿ ಅರ್ಥಿಸಿಕೊಳ್ಳಿ.
ಎಲ್ಲಾ ಖಾತರಿ ಯೋಜನೆಗಳ ಅರ್ಜಿ ಸಲ್ಲಿಸುವ ಕುರಿತಾಗಿ ಹಾಗೂ ತಾಂತ್ರಿಕ ಸಹಾಯಕ್ಕಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ
08022279954 / 8792662814 / 8792662816
08022279954 / 8792662814 / 8792662816
ಈ ಕೆಳಗಿನ ವಾಟ್ಸಾಪ್ ನಂಬರ್ ಮೂಲಕ ಅರ್ಜಿ ಸಲ್ಲಿಸಬಹುದು :
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೀಡುವ “ಗೃಹಲಕ್ಷ್ಮಿ ಯೋಜನೆ”ಯನ್ನು ಜಾರಿಗೆ ತರಲಾಗಿದೆ.
ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು (ಎರಡು ಸಾವಿರ ರೂಪಾಯಿಗಳು ಮಾತ್ರ) ನೀಡುವ “ಗೃಹ ಲಕ್ಷ್ಮಿ” ಯೋಜನೆಯನ್ನು 2023-24ನೇ ಸಾಲಿನಲ್ಲಿ ಈ ಕೆಳಕಂಡಂತೆ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಸರ್ಕಾರದ ಆದೇಶ ಸಂಖ್ಯೆ: ಮಮ ಇ 70 ಮಮ ಅ 2023, ಬೆಂಗಳೂರು, ದಿನಾಂಕ: 6ನೇ ಜೂನ್ 2023 ರಂತೆ ಆದೇಶಿಸಿರುತ್ತದೆ.
ಈ ಯೋಜನೆಯ ವಿವರವಾದ ರೂಪುರೇಷ ಹಾಗೂ ಮಾರ್ಗಸೂಚಿಗಳು
- ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
- ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಾಗುತ್ತದೆ.
- ಈ ಯೋಜನೆಯ ಫಲಾನುಭವಿಗಳು 2023ರ ಜುಲೈ 15 ರಿಂದ ಅರ್ಜಿ ಸಲ್ಲಿಸಬಹುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುವುದು.
- ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
- ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣದ ಅರ್ಜಿಯಲ್ಲಿನ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡಲಾಗುವುದು. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನೆ ಮಾಡಲಾಗುವುದು. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುವುದು ಮತ್ತು ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.
- ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.
- ಈ ಕೆಳಕಂಡ ಮಾನದಂಡಗಳನ್ನು ಹೊಂದಿರುವವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
- ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು.
- ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್ ಟಿ ರಿಟರ್ನ್ಸ್ ಪಾವತಿದಾರರಾಗಿರಬಾರದು.
Tags
Govt.scheme