ಈ ದಿನಾಂಕದಂದು ಗೃಹಲಕ್ಷ್ಮಿ ಯೋಜನೆಯಡಿ 2000/- ರೂಗಳು ನೇರ ಖಾತೆಗೆ ಜಮೆ ಆಗಲಿದೆ : ಟ್ವಿಟರ್ ನಲ್ಲಿ ಮುಖ್ಯಮಂತ್ರಿ ಘೋಷಣೆ !!
ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು (ಎರಡು ಸಾವಿರ ರೂಪಾಯಿಗಳು ಮಾತ್ರ) ನೀಡುವ “ಗೃಹ ಲಕ್ಷ್ಮಿ” ಯೋಜನೆಯನ್ನು 2023-24ನೇ ಸಾಲಿನಲ್ಲಿ ಈ ಕೆಳಕಂಡಂತೆ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಸರ್ಕಾರದ ಆದೇಶ ಸಂಖ್ಯೆ: ಮಮ ಇ 70 ಮಮ ಅ 2023, ಬೆಂಗಳೂರು, ದಿನಾಂಕ: 6ನೇ ಜೂನ್ 2023 ರಂತೆ ಆದೇಶಿಸಿರುತ್ತದೆ.
ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 24 ರಂದು ಚಾಲನೆ ನೀಡಲಿದ್ದೇವೆ.ರಾಜ್ಯದ 1.28 ಕೋಟಿ ಕುಟುಂಬಗಳಿಗೆ 2000 ರೂ ಗಳನ್ನೂ ಈ ಯೋಜನೆಯಡಿ ನೀಡಲಾಗುವುದು. ಕೈಗೆ ನೀಡುವುದರಿಂದ ಜನರಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗುತ್ತದೆ. ತನ್ಮೂಲಕ ರಾಜ್ಯದ ಜಿಡಿಪಿ, ಆರ್ಥಿಕ ಚಟುವಟಿಗೆ ಜಾಸ್ತಿಯಾಗುತ್ತದೆ. ಗ್ಯಾರಂಟಿಗಳಿಂದ ಒಬ್ಬರಿಗೆ 4 ರಿಂದ 5 ಸಾವಿರ ರೂ. ದೊರೆಯಲಿದ್ದು ಈ ರೀತಿ 48 ರಿಂದ 60 ಸಾವಿರ ರೂಪಾಯಿ ವಾರ್ಷಿಕವಾಗಿ ಜನರಿಗೆ ಲಭಿಸಲಿದೆ. ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ.
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೀಡುವ “ಗೃಹಲಕ್ಷ್ಮಿ ಯೋಜನೆ”ಯನ್ನು ಜಾರಿಗೆ ತರಲಾಗಿದೆ.
Tags
Govt.scheme