ಗೃಹಲಕ್ಷ್ಮಿ ಯೋಜನೆಗಾಗಿ ಅರ್ಜಿ ಸಲ್ಲಿಸಿದ ಎಲ್ಲರಿಗು ಸರ್ಕಾರದಿಂದ ಮತ್ತೊಂದು ಹೊಸ ಸೂಚನೆ! ಇನ್ನೂ ಅರ್ಜಿ ಹಾಕದವರಿಗೂ ಇದೆ ಗುಡ್ ನ್ಯೂಸ್ !!!!

ಗೃಹಲಕ್ಷ್ಮಿ ಯೋಜನೆಗಾಗಿ ಅರ್ಜಿ ಸಲ್ಲಿಸಿದ ಎಲ್ಲರಿಗು ಸರ್ಕಾರದಿಂದ ಮತ್ತೊಂದು ಹೊಸ ಸೂಚನೆ! ಇನ್ನೂ ಅರ್ಜಿ ಹಾಕದವರಿಗೂ ಇದೆ ಗುಡ್ ನ್ಯೂಸ್ !!!!




          ರಾಜ್ಯದಲ್ಲಿ ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರವು ನೀಡಿದ್ದ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಈಗ ಒಂದೊಂದಾಗಿ ಜಾರಿಗೆ ತರುತ್ತಿದೆ. ಈ ಯೋಜನೆಗಳು ಹೆಚ್ಚಾಗಿ ಹೆಣ್ಣುಮಕ್ಕಳ ಪರವಾಗಿ ಇರುವುದು ಮತ್ತೊಂದು ವಿಶೇಷತೆ ಆಗಿದೆ.
ಹೆಣ್ಣುಮಕ್ಕಳಿಗೆ ಉಚಿತ ಪ್ರಯಾಣ ಮಾಡುವ ಅವಕಾಶ ನೀಡಿ, ರಾಜ್ಯದ ಎಲ್ಲಾ ಹೆಣ್ಣುಮಕ್ಕಳಿಗೆ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಜೊತೆಗೆ ರಾಜ್ಯದ ಎಲ್ಲಾ ಹೆಣ್ಣುಮಕ್ಕಳಿಗೆ ಅಂದರೆ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ಕೊಡುವ ಗೃಹಲಕ್ಷ್ಮಿ ಯೋಜನೆಯನ್ನು ಕೂಡ ಪರಿಚಯಿಸಲಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಚಾರ್ಜ್ ಇಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದುಮ್ ಈಗಾಗಲೇ ಕೋಟ್ಯಂತರ ಹೆಣ್ಣುಮಕ್ಕಳು ಈ ಯೋಜನೆಗೆ ಅರ್ಜಿ ಸಲ್ಲಿಸಿ, ಗೃಹಲಕ್ಷ್ಮಿ ಯೋಜನೆಯ ರೂ 2000 ಹಣ ತಮ್ಮ ಖಾತೆಗೆ ಯಾವಾಗ ಬರುತ್ತದೆ ಎಂದು ಕಾಯುತ್ತಿದ್ದಾರೆ.
ಈ ಯೋಜನೆ ಶೀಘ್ರದಲ್ಲೇ ಲಾಂಚ್ ಆಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಸರ್ಕಾರದಿಂದ ಸಿಕ್ಕಿರುವ ಮಾಹಿತಿ ಪ್ರಕಾರ ಗೃಹಲಕ್ಷ್ಮಿ ಯೋಜನೆ ಲಾಂಚ್ ಗೆ ಈಗಾಗಲೇ ಮುಹೂರ್ತ ಫಿಕ್ಸ್ ಆಗಿದೆ.
ಇದೆ ತಿಂಗಳು, ಆಗಸ್ಟ್ ೩೦ ರಂದು ಮೈಸೂರಿನಲ್ಲಿ  ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ್ದು, ಇನ್ನು ರಾಜ್ಯದಲ್ಲಿ ಒಟ್ಟು 1,10,000 ಕೇಂದ್ರಗಳಲ್ಲಿ ಏಕಕಾಲಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ಕಿದೆ. 

whatss


 

ಸರ್ಕಾರದಿಂದ ಹೊಸ ಸೂಚನೆ :

      ಒಂದು ವೇಳೆ ನೀವು ಇನ್ನು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿಲ್ಲ ಎಂದರೆ, ನೀವು ಆತಂಕ ಪಡುವ ಅವಶ್ಯವಿಲ್ಲ. ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಇನ್ನು ನಿಗದಿ ಮಾಡಿಲ್ಲ, ಹಾಗಾಗಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನು ಸಮಯ ಇದೆ. 

ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬೇಕು ಎನ್ನುವುದಾದರೆ ಹೊಸದಾಗಿ ರೇಷನ್ ಕಾರ್ಡ್ ಮಾಡಿಸಬೇಕು ಎಂದರೆ ಆರಾಮವಾಗಿ ಮಾಡಿಸಿಕೊಂಡು ನಂತರ ಅರ್ಜಿ ಸಲ್ಲಿಸಬಹುದು.
ಹೆಣ್ಣು ಮಕ್ಕಳು ಅರ್ಜಿ ಸಲ್ಲಿಸುವುದಕ್ಕೆ ಸುಲಭವಾದ ವಿಧಾನಗಳು ಇದೆ.
ನೀವು ಅರ್ಜಿ ಸಲ್ಲಿಸುವ ಬಗ್ಗೆ ನಿಗದಿತ ದಿನಾಂಕ ಮತ್ತು ಸ್ಥಳದ ಮಾಹಿತಿ ಪಡೆಯುವುದು ಬಹಳ ಸುಲಭ ಆಗಿದೆ. 1902 ನಂಬರ್ ಗೆ ಕಾಲ್ ಮಾಡಿ ಈ ಬಗ್ಗೆ ಮಾಹಿತಿ ಪಡೆಯಬಹುದು.

ಅಥವಾ .........

8147500500 ಈ ನಂಬರ್ ಗೆ sms ಮಾಡುವ ಮೂಲಕ ಮಾಹಿತಿ ಪಡೆಯಬಹುದು. ಜೊತೆಗೆ ಸೇವಾ ಕೇಂದ್ರಗಳಿಗೆ ಹೋಗಿಯೂ ಅರ್ಜಿ ಸಲ್ಲಿಸಬಹುದು.

ಸರ್ಕಾರದ ಎಲ್ಲ ಯೋಜನೆಗಳ ಲಾಭ ಪಡೆಯಲು ಬಿಪಿಎಲ್ ಕ್ರ್ಡ್ ಬಹಳ ಮುಖ್ಯ. ರೇಷನ್ ಕಾರ್ಡ್ ಕಡ್ಡಾಯ ಸಹ ಆಗಿದೆ. ಹಾಗಾಗಿ ಹಲವು ಜನರು ಈಗ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಮಾಡಿಸಲು ಅರ್ಜಿ ಸಲ್ಲಿಸಿದ್ದು ಅವರಿಗೆಲ್ಲಾ ಬೇಗ ಹೊಸ ರೇಷನ್ ಕಾರ್ಡ್ ವಿತರಿಸಲಾಗುವುದಾಗಿ ಸರ್ಕಾರ ಮಾಹಿತಿ ನೀಡಿದೆ

.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು