ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು 2021 ಹಾಗೂ ಸರ್ಕಾರದ ಅಧಿಸೂಚನೆ ಸಂಖ್ಯೆ: FEE 203 FEG 2015 ದಿನಾಂಕ:06/08/2019 ರ ಕರ್ನಾಟಕ ಅರಣ್ಯ ಇಲಾಖಾ ಸೇವೆಗಳು (ನೇಮಕಾತಿ) (ತಿದ್ದುಪಡಿ) ನಿಯಮಗಳು, 2019ರನ್ವಯ ಕರ್ನಾಟಕ ಅರಣ್ಯ ಇಲಾಖೆಯ ಖಾಲಿ ಇರುವ 16ಅರಣ್ಯ ವೀಕ್ಷಕ ಗ್ರೂಪ್ ಡಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವೃತ್ತ ಹಾಗೂ ಹುದ್ದೆಗಳ ಸಂಖ್ಯೆ :
ಅರಣ್ಯ ಇಲಾಖೆ ಒಟ್ಟು 13 ವಲಯಗಳ 310 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಇವುಗಳಲ್ಲಿ ಬೆಂಗಳೂರು ವೃತ್ತ 33
ಬೆಳಗಾವಿ ವೃತ್ತ 20
ಬಳ್ಳಾರಿ ವೃತ್ತ 20
ಚಾಮರಾಜನಗರ ವೃತ್ತ 32
ಚಿಕ್ಕಮಗಳೂರು ವೃತ್ತ 25
ಧಾರವಾಡ ವೃತ್ತ 07
ಹಾಸನ ವೃತ್ತ 20
ಕೆನರಾ ವೃತ್ತ 32
ಕೊಡಗು ವೃತ್ತ 16
ಕಲಬುರಗಿ ವೃತ್ತ 23
ಮಂಗಳೂರು ವೃತ್ತ 20
ಮೈಸೂರು ವೃತ್ತ 32
ಶಿವಮೊಗ್ಗ ವೃತ್ತದಲ್ಲಿ 30 ಹುದ್ದೆಗಳನ್ನು ತುಂಬಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಈ ನೇರ ನೇಮಕಾತಿ ಅಧಿಸೂಚನೆಯನ್ನು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್ ಸೈಟ್ ಮುಖ ಪುಟದ ಕಲಭಾಗದಲ್ಲಿ ಇರುವ "ನೇಮಕಾತಿ" ಶೀರ್ಷಿಕೆಯಡಿ ಪ್ರಕಟಿಸಲಾಗಿದೆ. ಅರ್ಜಿ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸದರಿ ಆನ್ಲೈನ್ ವ್ಯವಸ್ಥೆಯ ಮೂಲಕ ಮಾತ್ರ ಸಲ್ಲಿಸತಕ್ಕದ್ದು ಈ ವಿಧಾನವನ್ನು ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.
ಒಮ್ಮೆ ಸಲ್ಲಿಸಿದ ಅರ್ಜಿಯನ್ನು ತಿದ್ದುಪಡಿ/ಸೇರ್ಪಡೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಇಂತಹ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ. ಅಲ್ಲದೆ ಆನ್ಲೈನ್ ಪ್ರತಿಯನ್ನು ಅಂಚೆ ಮುಖಾಂತರ ಅಥವಾ ಮುದ್ದಾಂ ಆಗಿ ಇಲಾಖೆಗೆ ಸಲ್ಲಿಸಬೇಕಾದ ಅವಶ್ಯಕತೆ/ ಅವಕಾಶ ಇರುವುದಿಲ್ಲ.
ಅರ್ಜಿ ಶುಲ್ಕ ಕೆಳಗಿನಂತೆ ನಿಗದಿಪಡಿಸಿದೆ.
👉 ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂಪಾಯಿ 200/- + ಸೇವಾ ಶುಲ್ಕ ರೂಪಾಯಿ 20/-
👉 ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ -1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂಪಾಯಿ 100/- ಹಾಗೂ ಸೇವಾ ಶುಲ್ಕ ರೂಪಾಯಿ 20/-
ಅರ್ಜಿ/ಶುಲ್ಕ ಸ್ವೀಕೃತಿ ಕಾಲಮಿತಿ:
1} ಅರ್ಜಿ ಸ್ಲಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ : 27/09/2023
2} ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26/10/2023
3} ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 31/10/2023
ವಿದ್ಯಾರ್ಹತೆಯ ವಿವರಗಳು:
ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಯು ಕರ್ನಾಟಕ ಪ್ರಔಧ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ SSLC ಅಥವಾ SSLC ವಿದ್ಯಾರ್ಥತೆಯ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ಈ ಮೇಲೆ ನಿಗಪಡಿಸಿದ ಕೊನೆಯ ದಿನಾಂಕಕ್ಕೆ ಹೊಂದಿರಬೇಕು.
ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ ಮಂಡಳಿಯು ನಡೆಸುವ ಕ್ಲಾಸ್ ೧೦ ಪರೀಕ್ಷೆ
ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ ೧೦ ಪರೀಕ್ಷೆ
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಪ್ರೌಢ ಶಿಕ್ಷಣ ಮಟ್ಟದ ಕೋರ್ಸ್
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್ ಐ ಓ ಎಸ್) ವತಿಯಿಂದ ನಡೆಸುವ ಪ್ರೌಢ ಶಿಕ್ಷಣ ಮಟ್ಟದ ಕೋರ್ಸ್
ಅರ್ಜಿ ಶುಲ್ಕ ಪಾವತಿ ವಿಧಾನ :
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ, ಇಲಾಖಾ ವೆಬ್ ಸೈಟ್ ನಿಂದ ಮುದ್ರಿತ ಅರ್ಜಿ ಶುಲ್ಕದ ಚಲನ್ ಪ್ರತಿಯನ್ನು ತೆಗೆದುಕೊಂಡು, ಇ-ಪಾವತಿ ಸೌಲಭ್ಯವಿರುವ ಭಾರತೀಯ ಅಂಚೆ ಕಚೇರಿಯಲ್ಲಿ ಸದರಿ ಪ್ರತಿಯನ್ನು ಹಾಜರುಪಡಿಸಿ, ಪ್ರವರ್ಗವಾರು ನಿಗದಿತ ಅರ್ಜಿ ಶುಲ್ಕ ಮತ್ತು ಸೇವಾ ಶುಲ್ಕವನ್ನು ಭಾರತೀಯ ಅಂಚೆ ಕಚೇರಿಯಲ್ಲಿ ಮೇಲೆ ತಿಳಿಸಿರುವಂತೆ ನಿಗದಿತ ದಿನಾಂಕ ಹಾಗೂ ಸಮಯದೊಳಗೆ ಕಡ್ಡಾಯವಾಗಿ ಪಾವತಿಸತಕ್ಕದ್ದು.
ಹೆಚ್ಚಿನ ಮಾಹಿತಿಗೆ ಕೆಳಗಿನ ಲಿಂಕ್ ಕ್ಲಿಕ್ ಮಾಡಿ...👇👇👇
Tags
Govt JOB

WhatsApp Group