ಕರ್ನಾಟಕ ರಾಜ್ಯ ಸರ್ಕಾರ ನೀಡುವ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಗತ್ಯ ದಾಖಲೆಗಳೊಂದಿಗೆ ನಿಗದಿ ಪಡಿಸಲಾಗಿರುವ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಹಾಗಿದ್ದಲ್ಲಿ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ ಹಾಗು ದಾಖಲಾತಿ ಏನು ಎಂಬುದನ್ನು ಲೇಖನದಲ್ಲಿ ತಿಳಿಯೋಣ ಬನ್ನಿ.
Karnataka SSP Scholarship 2023
ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಗೂ ಅಲ್ಪಸಂಖ್ಯಾತರ ಇಲಾಖೆ ವ್ಯಾಪ್ತಿಯ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನುಳಿದ ಸಮುದಾಯದ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿವರ ದೊರೆತ ತಕ್ಷಣ ಮಾಹಿತಿ ನೀಡಲಾಗುವುದು.
ಪ್ರಮುಖ ದಿನಾಂಕಗಳು:
1. ಸಮಾಜಕಲ್ಯಾಣ ಇಲಾಖೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20/10/2023 ಹಾಗೂ
2. ಅಲ್ಪಸಂಖ್ಯಾತರ ಇಲಾಖೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ 31/11/2023
ಅರ್ಹತೆಗಳು ಹೀಗಿವೆ:
👉 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು.
👉 ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
👉 ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು.
👉 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಹೊಸ ವಿದ್ಯಾರ್ಥಿಗಳೆಂದು ಪರಿಗಣಿಸಲಾಗುವುದು.
ದಾಖಲಾತಿಗಳು:
✔ ವಿದ್ಯಾರ್ಥಿಗಳ S A T S ಗುರುತಿನ ಸಂಖ್ಯೆ
✔ ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ (ಪಾಲಕರ)
✔ ಜಾತಿ ಮತ್ತು ಆದಾಯ ಪ್ರಮಾಣಪತ್ರ
Tags
Scholarship

WhatsApp Group