ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೂ ಮೊದಲು ಪ್ರಣಾಳಿಕೆಯಲ್ಲಿ ಹೊರಡಿಸಿದ್ದ 5 ಗ್ಯಾರಂಟಿಗಳೇ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣವಾಗಿರಬಹುದು. ತಾವು ನುಡಿತಂದೆ ಕಾಂಗ್ರೆಸ್ ಸರ್ಕಾರ ಈಗಾಗಲೇ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಿಂದ ರಾಜ್ಯದಲ್ಲಿ ಲಕ್ಷಾಂತರ ಜನರು ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.
ಇನ್ನು ಬಾಕಿ ಇರುವುದು ಯುವನಿಧಿ ಯೋಜನೆ ಮಾತ್ರ. ಯುವನಿಧಿ ಯೋಜನೆಯ ಅಡಿಯಲ್ಲಿ ಡಿಪ್ಲೊಮಾ ಹಾಗು ಪದವಿ ಮುಗಿಸಿದ ನಿರುದ್ಯೋಗಿಗಳಿಗೆ ಭತ್ಯೆ ನೀಡುವುದು ಸರ್ಕಾರದ ಉದ್ದೇಶ.
ಯುವನಿಧಿ ಯೋಜನೆ ಜಾರಿಗೊಳಿಸುವುದಾಗಿ ತಿಳಿಸಿದ ಸಿಎಂ...
ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಪ್ರಯುಕ್ತ ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ್ದ ಸಿಎಂ ಸಿದ್ಧರಾಮಯ್ಯ ಅವರು ತಾವು ತಂದಿರುವ ಯಶಸ್ವಿ ಯೋಜನೆಗ ಬಗ್ಗೆ ಮತ್ತೊಮ್ಮೆ ಹೇಳಿದ್ದಾರೆ. ಇದರ ಜೊತೆಗೆ ಮುಂದಿನ ಐದನೇ ಯೋಜನೆಗೆ ಸದ್ಯದಲ್ಲೇ ಚಾಲನೆ ಸಿಗಲಿದೆ ಎಂಬುದಾಗಿಯೂ ತಿಳಿಸಿದ್ದಾರೆ.
ಯುವನಿಧಿ ಯೋಜನೆಯಲ್ಲಿ ಯಾರಿಗೆ ಎಷ್ಟು ಹಣ?
2022-23 ನೇ ಸಾಲಿನಲ್ಲಿ ಉತ್ತೀರ್ಣರಾಗಿ ಆರು ತಿಂಗಳವರೆಗೆ ಉದ್ಯೋಗ ಸಿಗದೇ ಇರುವ ನಿರುದ್ಯೋಗಿಗಳಿಗೆ ಎರಡು ವರ್ಷಗಳವರೆಗೆ ಅಂದರೆ ಉದ್ಯೋಗ ಸಿಗುವವರೆಗೆ ಈ ನಿರುದ್ಯೋಗ ಭತ್ಯೆ ಸಿಗಲಿದೆ.
ವೃತ್ತಿಪರ ಕೋರ್ಸ್ ಸೇರಿದಂತೆ ಪದವಿ ಪಡೆದಿರುವ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3000 ರೂ ಹಾಗೂ ಡಿಪ್ಲೊಮಾ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂ ಗಳನ್ನೂ ಯುವನಿಧಿ ಯೋಜನೆಯ ಅಡಿಯಲ್ಲಿ ವಿತರಿಸಲಾಗುವುದು.
ಯುವನಿಧಿ ಯೋಜನೆ ಸದ್ಯದಲ್ಲೇ ಜಾರಿ!
ಉಳಿದ ನಾಲ್ಕು ಯೋಜನೆಗಳಂತೆ ಡಿಪ್ಲೊಮಾ ಹಾಗೂ ಪಧವೀದರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಅವರ ಖಾತೆಗೆ ಯೋಜನೆಯ ಹಣ ಜಮೆ ಆಗುವ ಪ್ರಕ್ರಿಯೆ ಸದ್ಯದಲ್ಲೇ ಆರಂಭವಾಗಲಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಸೆಪ್ಟೆಂಬರ್ ನಿಂದಲೇ ಯುವ ನಿಧಿ ಯೋಜನೆಗೂ ಕೂಡ ಚಾಲನೆ ಸಿಗುವ ಸಾಧ್ಯತೆ ಇದೆ. ಆದ್ದರಿಂದ ಗೃಹಲಕ್ಷ್ಮಿ ಯೋಜನೆ ಹಣದ ಜೊತೆಗೆ ಅದೇ ಕುಟುಂಬದ ನಿರುದ್ಯೋಗಿ ಯುವಕ ಯುವತಿಯರಿಗೂ ಕೂಡ ಸದ್ಯದಲ್ಲಿಯೇ ಸರ್ಕಾರದಿಂದ ಗುಡ್ ನ್ಯೂಸ್ ಸಿಗಲಿದೆ.
Tags
Govt.scheme