ಕಾರ್ಮಿಕ ಇಲಾಖೆಯಿಂದ ಪಿ.ಯು.ಸಿ ಪ್ರಥಮ, ದ್ವಿತೀಯ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ : ಅರ್ಜಿ ಆಹ್ವಾನ ....

 

ಕಾರ್ಮಿಕ ಇಲಾಖೆಯಿಂದ ಪಿ.ಯು.ಸಿ ಪ್ರಥಮ, ದ್ವಿತೀಯ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ : ಅರ್ಜಿ ಆಹ್ವಾನ ....




   

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಅರ್ಹ ಕಾರ್ಮಿಕರ ಕುಟುಂಬದ ಒಂದು ಮಗುವಿಗೆ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಯಲ್ಲಿ ಪಡೆದಿರುವ ಅಂಕಗಳ ಮೆರಿಟ್ ಅನ್ನು ಆದರಿಸಿ ಆಯ್ಕೆ ಮಾಡಿ ಮಂಡಳಿಯಿಂದ ಉಚಿತವಾಗಿ ಲ್ಯಾಪ್ ಟಾಪ್ ಗಳನ್ನು ನೀಡಲಾಗುತ್ತಿದ್ದು, ಈ ಸೌಲಭ್ಯಕ್ಕಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದೆಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ ಅವರು ತಿಳಿಸಿದ್ದಾರೆ.

ಉಪ ವಿಭಾಗದ ಕಾರ್ಮಿಕ ಅಧಿಕಾರಿ ಅವರ ಕಾರ್ಯವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲಿ ಇಚ್ಛಿಸಿದ್ದಲ್ಲಿ ಮಾರ್ಗಸೂಚಿಯಂತೆ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ನೋಂದಾಯಿತರಾದ ಆಯಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅದೇ ಕಚೇರಿಗೆ ಸಲ್ಲಿಸಬಹುದಾಗಿರುತ್ತದೆ. ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 16 ಅಂತಿಮ ದಿನವಾಗಿರುತ್ತದೆ. ತದನಂತರ ಬರುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಕಾರ್ಮಿಕ ಅಧಿಕಾರಿಗಳ ಕಾರ್ಮಿಕ ನಿರೀಕ್ಷಕರ ಕಚೇರಿಗಳಲ್ಲಿ ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಆಯಾ ಕಾರ್ಯವ್ಯಾಪ್ತಿಯ ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು ಸಂಪರ್ಕಿಸಬಹುದಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರದ ಉಚಿತ ಲ್ಯಾಪ್ ಟಾಪ್ ಪಡೆಯಲು ಯಾರು ಅರ್ಹರು ?

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಲ್ಲಿ 2023-24 ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಅನ್ನು ನೀಡಲಾಗುತ್ತದೆ. ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.

whatss

ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ 

ಅರ್ಜಿ ನಮೂನೆಯನ್ನು ಆಯಾ ಜಿಲ್ಲೆ, ತಾಲೂಕು ಕಾರ್ಮಿಕ ಅಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದೆ. ಕಟ್ಟಡ ಕಾರ್ಮಿಕರ ನೋಂದಣಿ ಗುರುತಿನ ಚೀಟಿ, ಮಕ್ಕಳ ಆಧಾರ್ ಕಾರ್ಡ್, ವ್ಯಾಸಂಗ ಧೃಡೀಕರಣ ಪತ್ರ, ಎಸ್.ಎಸ್.ಎಲ್.ಸಿ ಧೃಡೀಕೃತ ಅಂಕಪಟ್ಟಿ, ಉಚಿತ ಲ್ಯಾಪ್ ಟಾಪ್ ಪಡೆದಿರುವ ಬಗ್ಗೆ ಸ್ವಯಂ ಧೃಡೀಕೃತ ಪತ್ರವನ್ನು ಇಲಾಖಾ ಕಚೇರಿಗೆ ಸಲ್ಲಿಸಿ ಉಚಿತ ಲ್ಯಾಪ್ ಟಾಪ್ ಅನ್ನು ಪಡೆಯಬಹುದು.

   




1 ಕಾಮೆಂಟ್‌ಗಳು

ನವೀನ ಹಳೆಯದು