ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ 2023-24 ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ / ಇಂಜಿನಿಯರಿಂಗ್ ಕೋರ್ಸ್ ವ್ಯಾಸಂಗ ಮಾಡುತ್ತಿರುವವರಿಗೆ ಸೌಲಭ್ಯ ಪಡೆಯಲು ಅರ್ಹರಿದ್ದಾರೆ. ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಸೌಲಭ್ಯ ಸಿಗಲಿದೆ. ಅರ್ಜಿ ಸಲ್ಲಿಸಲು 2024 ರ ಜನೆವರಿ 31ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ.
ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಮಂಡಳಿಯ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. (ವಿದ್ಯಾರ್ಥಿಯು ಹಿಂದಿನ ಸಾಲಿನಲ್ಲಿ ಸಾಮಾನ್ಯ ವರ್ಗದಡಿ ಶೇ 50, SC /ST ಆದಲ್ಲಿ ಶೇ 45 ಅಂಕ ಪಡೆದಿರಬೇಕು.
ಹೆಚ್ಚಿನ ಮಾಹಿತಿಗೆ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ 48, 1 ಹಾಗೂ 2ನೇ ಮಹಡಿ ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು 560022 ಈ ವಿಳಾಸದಲ್ಲಿ ಖುದ್ದಾಗಿ ಅಥವಾ ದೂ - 080-23475188, 8277291175 ಮೂಲಕ ಸಂಪರ್ಕಿಸಬಹುದು ಎಂದು ಮಂಡಳಿಯ ಕಲ್ಯಾಣ ಆಯುಕ್ತರು ತಿಳಿಸಿದ್ದಾರೆ.
Tags
Scholarship