ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ : ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ....
2023-34 ನೇ ಸಾಲಿನ ರಾಷ್ಟೀಯ ಮೀನ್ಸ್ ಕಮ್ ಮೆರಿಟ್ ಸ್ಕಾಲರ್ಶಿಪ್ ಪರೀಕ್ಷೆಗೆ ಅರ್ಜಿ ಸ್ವೀಕಾರ ಆರಂಭ. ಅರ್ಹತೆ ಏನು, ಅರ್ಜಿ ಸಲ್ಲಿಸುವುದು ಹೇಗೆ, ಅರ್ಜಿಗೆ ಕೊನೆಯ ದಿನಾಂಕ, ಇತರೆ ಮಾಹಿತಿ ಇಲ್ಲಿದೆ ನೋಡಿ..
2023-24 ನೇ ಸಾಲಿನ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿವೇತನಕ್ಕೆ ಪರೀಕ್ಷೆಯನ್ನು ನಡೆಸಲು ಇದೀಗ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಸದರಿ ಪರೀಕ್ಷೆಯನ್ನು 2023-24 ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ ಶಾಲೆಗಳಲ್ಲಿ 8 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ KSQAAC ವತಿಯಿಂದ ನಡೆಸಲಾಗುತ್ತದೆ.
ಅರ್ಜಿ ಪ್ರಕ್ರಿಯೆಯ ಪ್ರಮುಖ ದಿನಾಂಕಗಳು :
👉 ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 13-09-2023
👉 ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04-10-2023
ವಿದ್ಯಾರ್ಥಿ ವೇತನ ಮಾಹಿತಿ :
⭐ ಈ ಪರೀಕ್ಷೆಯಲ್ಲಿ ಆಯ್ಕೆಯಾದವರಿಗೆ 9 ನೇ ತರಗತಿಯಿಂದ ಮಾಸಿಕ 1000 ರೂ. ನಂತೆ ವರ್ಷಕ್ಕೆ 12,000 ವಿದ್ಯಾರ್ಥಿವೇತನವನ್ನು 4 ವರ್ಷಗಳವರೆಗೆ ಅಂದರೆ ದ್ವಿತೀಯ ಪಿಯುಸಿ ಮುಗಿಯುವವರೆಗೆ ನೀಡಲಾಗುತ್ತದೆ.
⭐ ವಿದ್ಯಾರ್ಥಿವೇತನವನ್ನು ಅವರ ಬ್ಯಾಂಕ್ ಖಾತೆಗೆ DoSEL ನವದೆಹಲಿ ರವರು ನೇರವಾಗಿ ಜಮಾ ಮಾಡುತ್ತಾರೆ.
ವಿದ್ಯಾರ್ಥಿಗಳು www.scholarships.gov.in ನಲ್ಲಿ ಪ್ರತಿ ವರ್ಷಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.
ಪರೀಕ್ಷೆಯ ಉದ್ದೇಶ :
1. 8 ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸುವುದು.
2. ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮುಂದುವರಿಕೆಗೆ ವಿದ್ಯಾರ್ಥಿ ವೇತನ ನೀಡುವುದು.
3. ಪ್ರತಿಭಾವಂತ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿಯದಂತೆ ತಡೆದು ಅವರ ಓದಿಗೆ ಪ್ರೇರೇಪಿಸುವುದು.
4. NMMS ಪರೀಕ್ಷೆಯ ವಿಧಾನ :
5. ಬಹು ಆಯ್ಕೆ ಪ್ರಶ್ನೆಗಳಿರುತ್ತವೆ. ಪ್ರತಿ ಪ್ರಶ್ನೆಗೆ 1 ಅಂಕ ನಿಗಧಿಯಾಗಿರುತ್ತದೆ. ಒಟ್ಟು 2 ಪ್ರಶ್ನೆ ಪತ್ರಿಕೆಗಳಿರುತ್ತವೆ.
ಅರ್ಜಿ ಸಲ್ಲಿಸಲು ಅರ್ಹತೆಗಳು:
⚛ ವಿದ್ಯಾರ್ಥಿಗಳು ೮ನೇ ತರಗತಿಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಓದುತ್ತಿರಬೇಕು.
⚛ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 7ನೇ ತರಗತಿ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಾಗಿದ್ದಲ್ಲಿ ಶೇಕಡಾ 55 ಅಂಕಗಳನ್ನು, SC / ST ವಿದ್ಯಾರ್ಥಿಯಾಗಿದ್ದಲ್ಲಿ ಶೇಕಡಾ 50 ರಷ್ಟು ಅಂಕಗಳನ್ನು ಗಳಿಸಿರಬೇಕು,
⚛ ಪೋಷಕರ / ಕುಟುಂಬದ ವಾರ್ಷಿಕ ಆದಾಯ ರೂ 3,50,000 ಮೀರಿರಬಾರದು.
ಯಾರು ಅರ್ಜಿಗೆ ಅರ್ಹರಲ್ಲ ???
✓ ವಸತಿಯುತ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ.
✓ ಹಾಗೆಯೆ ಕೇಂದ್ರೀಯ ವಿದ್ಯಾಲಯ, ಸೈನಿಕ ಶಾಲೆಗಳ ವಿದ್ಯಾರ್ಥಿಗಳು ಕೂಡ ಈ ಪರೀಕ್ಷೆಗೆ ಅರ್ಹರಿರುವುದಿಲ್ಲ.
Tags
Scholarship