ಪ್ರಾಥಮಿಕ ಪ್ರೌಢ ಶಿಕ್ಷಣ ಹಾಗೂ ಪಿಯುಸಿ ಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಶಿಕ್ಷಣ ಸೌಲಭ್ಯ ಮಾಡಿಕೊಡಲು ರಾಜ್ಯ ಸರ್ಕಾರ ಒಲವು ತೋರಿಸಿದೆ. ಜೊತೆಗೆ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲ ಮಾಡಿಕೊಡುವುದರ ಮೂಲಕ ಶಿಕ್ಷಣ ಮಟ್ಟವನ್ನು ಸುಧಾರಿಸುವತ್ತ ಸರ್ಕಾರ ಹೊಸ ಕ್ರಮಗಳನ್ನು ಜಾರಿಗೆ ತರುತ್ತಿದೆ.
ಸರ್ಕಾರ ಈಗಾಗಲೇ ಸಾರ್ವಜನಿಕರಿಗೆ ಅನುಕೂಲವಾಗುವಂತಹ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣಕ್ಕೆ ಅನುಕೂಲವಾಗುವಂತಹ ಕೆಲವು ಪ್ರಮುಖ ನಿರ್ಧಾರಗಳನ್ನು ಸರ್ಕಾರ ಕೈಗೊಂಡಿದೆ.
ಇದೀಗ ಪೋಷಕರಿಗೆ ದೊಡ್ಡ ರಿಲೀಫ್ ನೀಡಿರುವ ಸರ್ಕಾರ 2023-24 ನೇ ಸಾಲಿನಲ್ಲಿ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಕೊಡುವ ಯೋಜನೆ ಒಂದನ್ನು ಆರಂಭಿಸಿದೆ.
ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ :
ಇನ್ನು ಇವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ನೀಡುವ ಈ ಯೋಜನೆಯಲ್ಲಿ ಯಾರೆಲ್ಲ ಫಲಾನುಭವಿಗಳು ಅಂತ ನುಡುವುದಾದರೆ ಕರ್ನಾಟಕ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ.
ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತವಾಗಿ ಲ್ಯಾಪ್ಟಾಪ್ ನೀಡಲಿದೆ.
ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡ ಕಾರ್ಮಿಕರ ಮಕ್ಕಳು ಈ ಉಚಿತ ಲ್ಯಾಪ್ಟಾಪ್ ಪ್ರಯೋಜನವನ್ನು ಪಡೆದುಕೊಳ್ಳಲು ಕಾರ್ಮಿಕರ ಅಧಿಕಾರಿ ಕಚೇರಿ ಅಥವಾ ನಿಮ್ಮ ತಾಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಅಧಿಕೃತ ಪ್ರಮಾಣ ಪತ್ರವನ್ನು ಪಡೆದುಕೊಂಡು ಅರ್ಜಿ ನಮೂನೆಯನ್ನು ಸಲ್ಲಿಸಬೇಕು.
ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಆಯಾ ಸಂಸ್ಥೆಯ ಪ್ರಾಂಶುಪಾಲರ ಸಹಿ ಹಾಗೂ ಠಸ್ಸೆಯೊಂದಿಗೆ SSLC ಅಂಕ ಪಟ್ಟಿಯ ಧೃಢೀಕೃತ ಪ್ರಮಾಣಪತ್ರವನ್ನು ಕೂಡ ನೀಡಬೇಕು.
ಅರ್ಜಿ ಸಲ್ಲಿಸುವುದು ಹೇಗೆ ?
ಈ ಯೋಜನೆಯ ಫಲಾನುಭವಿಗಳು ಕಾರ್ಮಿಕ ಅಧಿಕಾರಿ 1, ಉಪವಿಭಾಗ ಬೆಂಗಳೂರು, ಇದರ ಅಡಿಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ಆಯಾ ವೃತ್ತ ಕಚೇರಿಯ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಸೌಲಭ್ಯ ಪಡೆಯಬಹುದಾಗಿದೆ.
ಜೊತೆಗೆ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳನ್ನು ಕೂಡ ಒದಗಿಸಬೇಕು. ಇನ್ನು ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಲು ಅರ್ಜಿದಾರರಿಗೆ ಬೇಕಾಗಿರುವ ದಾಖಲೆಗಳು ಇಂತಿವೆ.
🔯 ನಿರ್ಮಾಣ ಕಾರ್ಮಿಕರ ನೋಂದಣಿ ಕಾರ್ಡ್ ಅಥವಾ ಪ್ರಮಾಣಪತ್ರ
🔯 ವಿದ್ಯಾರ್ಥಿ ಅಧ್ಯಯನ ಪ್ರಮಾಣಪತ್ರ
🔯 ಕಾಲೇಜು ದಾಖಲಾತಿಯ ರಶೀದಿ ಆಧಾರ್ ಕಾರ್ಡ್
🔯 ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 26
Tags
Govt.scheme