ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ:

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ:


 

(ಕರ್ನಾಟಕ ಸರ್ಕಾರದ ಉದ್ಯಮ) ನಂ.16 ಡಿ. 5 ನೇ ಮಹಡಿ, ದೇವರಾಜ ಅರಸು ಭವನ, ಟ್ಯಾಂಕ್ ಬೆಡ್ ಏರಿಯಾ, ವಸಂತನಗರ, ಬೆಂಗಳೂರು-5600052

ಪ್ರಕಟಣೆ :

2023-24 ನೇ ಸಾಲಿಗೆ ಅನುಷ್ಠಾನಗೊಂಡಿರುವ ಯೋಜನೆಗಳಿಗೆ ಅರ್ಜಿಗಳ ಆಹ್ವಾನ :

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹಾಗೂ ಈ ಯೋಜನೆಗಳಡಿ ಸಹಾಯಧನ/ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/10/2023 ( ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ)

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು :

1. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.
2. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ಸಂಖ್ಯೆ.ಸಕಇ/225/ಬಿಸಿಎ/200ದಿನಾಂಕ : 30-032002 ರ ಅನ್ವಯ ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು.
3. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯವಾಗಿರುತ್ತದೆ. 
4. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು.
5. ನಿಗಮದ/ಸರ್ಕಾರದ ಯಾವುದಾದರು ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.
6. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
7. ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು. ವಾರ್ಷಿಕ ವರಮಾನ ರೂ. 3.50/- ಲಕ್ಷಗಳು.
8. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು. 
9. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು.
10. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ.1,20,000/- ಗಳ ಮಿತಿಯೊಳಗೆ ಇರಬೇಕು.
11. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ ಶೇ.1% ಮೀಸಲಾತಿ ಇರಿಸಿದೆ.

whatss


ರಾಜ್ಯ ಸರ್ಕಾರದ / ನಿಗಮದ ಯೋಜನೆಗಳ ವಿವರ :

ಆನಲೈನ್ ಮೂಲಕ ಅರ್ಜಿ ಸ್ವೀಕರಿಸುವ ಯೋಜನೆಗಳು :-

👉 ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು.
👉 ಸ್ವಯಂ ಉದ್ಯೋಗ ನೇರಸಾಲ ಯೋಜನೆ.
👉 ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು). 
👉 ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ).
👉 ಗಂಗಾ ಕಲ್ಯಾಣ ಯೋಜನೆ - ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1ಎಕರೆ  ಹೊಂದಿರಬೇಕು.
👉 ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್ ಗಳ ಸಹಯೋಗದೊಂದಿಗೆ) 
👉 ಸ್ವಾವಲಂಬಿ ಸಾರಥಿ ಯೋಜನೆ.
👉 ವಿದೇಶಿ ವ್ಯಾಸಂಗ - ಈ ಯೋಜನೆಯಡಿ ವಾರ್ಷಿಕ ವರಮಾನವು ರೂ.8.00/- ಲಕ್ಷಗಳ ಮಿತಿಯಲ್ಲಿರಬೇಕು.
👉 ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆ - ಈ ಯೋಜನೆಯಡಿ ಅರ್ಜಿಯನ್ನುwww.kaushalkar.com ನಲ್ಲಿ ಸಲ್ಲಿಸಿರಬೇಕು. 

➡ ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು/ ವಿಳಾಸ/ ಜಾತಿ ಮತ್ತು ಆದಾಯ ಪ್ರಮಾಣಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು. ( ಶ್ರೀ. ಶ್ರೀಮತಿ. ಕುಮಾರಿ ಮುಂತಾದ ಮಾಹಿತಿಗಳು)
➡ ಬೆಂಗಳೂರು ಒನ್/ ಕರ್ನಾಟಕ ಒನ್/ ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನಲೈನ್ ಮೂಲಕ ಸೇವಸಿಂಧು ಪೋರ್ಟಲ್ ನಡಿ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ.
➡ ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್ ಸೈಟ್ : https://kvcdcl.karnataka.gov.in  ರಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ : 080-22374848 / 7899899039 ಯಿಂದ  ಪಡೆಯಬಹುದಾಗಿದೆ.ಹಾಗೂ ಜಿಲ್ಲೆಗಳಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿಗಳಲ್ಲಿ ಪೂರ್ವಾಹ್ನ 10.00  ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ.

ಸೇವಾಸಿಂಧು ತಂತ್ರ್ಯಾಂಶದ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 31/10/2023 ರ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.





 











ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು