ಅಲೆಮಾರಿ-ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸಹಾಯಧನಕ್ಕೆ ಅರ್ಜಿ ಅಹ್ವಾನ:

ಅಲೆಮಾರಿ-ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸಹಾಯಧನಕ್ಕೆ ಅರ್ಜಿ ಅಹ್ವಾನ:



 

        ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿನಲ್ಲಿ ಈ ಕೆಳಗಿನ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಯಡಿ ಸಹಾಯಧನ/ಸಾಲ-ಸೌಲಭ್ಯ ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಯೋಜನೆಗಳು:

👉  ಸ್ವಯಂ ಉದ್ಯೋಗ ನೇರಸಾಲ ಯೋಜನೆ 
👉  ಗಂಗಾ ಕಲ್ಯಾಣ ಯೋಜನೆ 
👉  ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸತು)
👉  ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ 
👉  ಸ್ವಾವಲಂಬಿ ಸಾರಥಿ ಯೋಜನೆ 
👉  ಸ್ವಯಂ ಉದ್ಯೋಗ ಸಾಲ ಯೋಜನೆ 

whatss

ಅರ್ಜಿ ಸಲ್ಲಿಸಲು ಬೇಕಾದ ಸಾಮಾನ್ಯ ಅರ್ಹತೆಗಳು:

⛤  ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
⛤  ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶದಂತೆ ಅಲೆಮಾರಿ-ಅರೆ ಅಲೆಮಾರಿ ಹಾಗೂ ಉಪ ಜಾತಿಗಳಿಗೆ ಸೇರಿರಬೇಕು. 
⛤  ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯವಾಗಿರುತ್ತದೆ.
ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು.
⛤  ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.
ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
⛤  ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು. ವಾರ್ಷಿಕ ವರಮಾನ 3.50 ಲಕ್ಷ 
⛤  ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು  21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು.
⛤  ಆಯ್ಕೆ ಮಾಡುವಾಗ ಮಹಿಳೆಯರಿಗೆ 33% ವಿಕಚೇತನರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ ಶೇ 1% ರಷ್ಟು ಮೀಸಲಾತಿ ಇರಿಸಲಾಗಿದೆ.


 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು