ವಿವಿಧ ಯೋಜನೆಗಳಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ: ಅರ್ಹತೆ ಹಾಗೂ ದಾಖಲಾತಿ ಸಂಪೂರ್ಣ ಮಾಹಿತಿ:
ಸವಿತಾ ಸಮಾಜ ಅಭಿವೃದ್ಧಿ ನಿಗಮ ಮೂಲ ಧೇಯೋದ್ಯೇಶ:
ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮವು ಸವಿತಾ ಸಮಾಜಜನರಿಗೆ ಅವರ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಸುಧಾರಿಸಲು ಮತ್ತು ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಸಹಾಯ ಮಾಡುತ್ತದೆ. ಈ ಗುರಿಯನ್ನು, ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ರೂಪದಲ್ಲಿ ಹಣಕಾಸಿನ ನೆರವು ನೀಡುವುದರ ಮೂಲಕ, ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿಪರ ಗುಂಪುಗಳಿಗೆ ಅವರ ಕೌಶಲ್ಯಗಳನ್ನು ಹೆಚ್ಚಿಸಲು ಮತ್ತು ಅವರ ಉತ್ಪನ್ನಗಳ ಉತ್ಪಾದನೆಯನ್ನು ಹೆಚ್ಚಿಸಲು ಸಾಲ ಮತ್ತು ಸಹಾಯಧನ ರೂಪದಲ್ಲಿ ಹಣಕಾಸಿನ ನೆರವು ನೀಡುವುದರ ಮೂಲಕ ಮತ್ತು ಸಣ್ಣ ಮತ್ತು ಅತಿಸಣ್ಣ ರೈತರ ಭೂಮಿಗೆ ನೀರಾವರಿ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಾಧಿಸಲಾಗುವುದು
ನಿಗಮದಡಿಯ ಯೋಜನೆಗಳು:
1. ಸ್ವಯಂ ಉದ್ಯೋಗ ನೇರಸಾಲ ಯೋಜನೆ
2. ಗಂಗಾ ಕಲ್ಯಾಣ ಯೋಜನೆ
3. ಅರಿವು - ಶೈಕ್ಷಣಿಕ ನೇರಸಾಲ ಯೋಜನೆ
4. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗಕ್ಕೆ ಸಾಲ ಯೋಜನೆ
5. ಸ್ವಾವಲಂಬಿ ಸಾರಥಿ ಯೋಜನೆ
6. ಸ್ವಯಂ ಉದ್ಯೋಗ ಸಾಲ ಯೋಜನೆ
ಅರ್ಹತೆಗಳು:
⛤ ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
⛤ ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ಸಂಖ್ಯೆ :ಸಕಇ /225/ಬಿಸಿಎ / 2000 ರಾನ್ವಯ ಸವಿತಾ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು.
⛤ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯವಾಗಿರುತ್ತದೆ.
ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು.
⛤ ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.
ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
⛤ ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು. ವಾರ್ಷಿಕ ವರಮಾನ 3.50 ಲಕ್ಷ
⛤ ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು.
⛤ ಆಯ್ಕೆ ಮಾಡುವಾಗ ಮಹಿಳೆಯರಿಗೆ 33% ವಿಕಚೇತನರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ ಶೇ 1% ರಷ್ಟು ಮೀಸಲಾತಿ ಇರಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ೩೧/೧೧/೨೦೨೩ ಆಗಿದೆ. ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.
.
Tags
Govt.scheme