ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಅಹ್ವಾನ:

ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಅಹ್ವಾನ:



 

ಕರ್ನಾಟಕ ರಾಜ್ಯ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ(Karnataka State Nijasharan Ambigar Choudaiah Development Corporation)ವು ನಿಜಶರಣ ಅಂಬಿಗರ ಚೌಡಯ್ಯ ಸಮುದಾಯದ ಹಿಂದುಳಿದ ವರ್ಗಗಳ ಪ್ರವರ್ಗ-1ರ 6(ಎ) ಯಿಂದ 6 (ಎಕೆ)ವರೆಗೆ ಬರುವ ಬೆಸ್ತ, ಕೋಲಿ, ಕಬ್ಬಲಿಗ, ಮೊಗವೀರ ಮತ್ತು ಇದರ ಉಪಜಾತಿಗಳಿಗೆ ಸೇರಿದವರಿಗೆ ಅಭಿವೃದ್ಧಿಗಾಗಿ 2023 – 24ನೇ ಸಾಲಿನ ವಿವಿಧ ಯೋಜನೆಗಳ ಸಾಲ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಿದ್ದಾರೆ.

ಆಸಕ್ತರು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗೆ ಸೇವಾ ಸಿಂಧು ಪೋರ್ಟಲ್( Seva Sindhu Portal ) ಮೂಲಕ ಗ್ರಮ್ ಒನ್(Gram one), ಕರ್ನಾಟಕ ಒನ್, ಬೆಂಗಳೂರು ಒನ್(Bengalore one) ನಂತಹ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಯೋಜನೆಗಳು:

👉  ಸ್ವಯಂ ಉದ್ಯೋಗ ನೇರಸಾಲ ಯೋಜನೆ 
👉  ಗಂಗಾ ಕಲ್ಯಾಣ ಯೋಜನೆ 
👉  ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸತು)
👉  ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ 
👉  ಸ್ವಾವಲಂಬಿ ಸಾರಥಿ ಯೋಜನೆ 
👉  ಸ್ವಯಂ ಉದ್ಯೋಗ ಸಾಲ ಯೋಜನೆ 


whatss


ಸಾಮಾನ್ಯ ಅರ್ಹತೆಗಳು :

ನಿಜಶರಣ ಅಂಬಿಗರ ಚೌಡಯ್ಯ ಸಮುದಾಯದ ಹಿಂದುಳಿದ ವರ್ಗಗಳ ಪ್ರವರ್ಗ-1ರಡಿ ಬರುವ ಜಾತಿಗೆ ಸೇರಿದವರಾಗಿರಬೇಕು.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. 
ಕೇಂದ್ರ ಆಧಾರ್ ಅಧಿನಿಯಮ, 2016 ಸೆಕ್ಷನ್ (7)ರಡಿ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ. ಅರ್ಜಿದಾರರ ಹೆಸರು, ಆಧಾರ್ ಕಾರ್ಡ್, ಜಾತಿ/ಆದಾಯ ಪ್ರಮಾಣಪತ್ರ ಮತ್ತು ಬ್ಯಾಂಕ್ ಖಾತೆಗಳಲ್ಲಿ ಹೊಂದಾಣಿಕೆ ಆಗಿರಬೇಕು.

ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯವಾಗಿರುತ್ತದೆ.
ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.
ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
ಸರ್ಕಾರ/ನಿಗಮವು ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ/ನಿಬಂಧನೆಗಳನ್ನು ಹೊಂದಿದವರಾಗಿರಬೇಕು.
ಸರ್ಕಾರ ಮತ್ತು ನಿರ್ದೇಶನ ಮಂಡಳಿ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರು ಸಹ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಅಗತ್ಯವಾಗಿರುತ್ತದೆ.


 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು